ಬಾಗಲಕೋಟ: ಬಿಜೆಪಿಯವರಿಗೆ ಮುಸ್ಲಿಂ ಮತ ಬೇಕಾಗಿಯೇ ಇಲ್ಲ ಇನ್ನು ನಾವು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಮತ ಹಾಕಬಾರದು ಎಂದು ನಿರ್ಣಯಿಸಿದ್ದೇವೆ ಎಂದು ಅಂಜುಮನ್ ಇಸ್ಲಾಂ ಸಂಸ್ಥೆಯ ಅಧ್ಯಕ್ಷ ಉಸ್ಮಾನಗಣಿ ಹುಮ್ನಾಬಾದ ಹೇಳಿದರು.
ಬಾಗಲಕೋಟ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವರ್ಷದ ಹಿಂದೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಮುಸ್ಲಿಂರ ಬೇಡಿಕೆಗಳನ್ನು ಈಡೇರಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಬಿಜೆಪಿ ಸರಕಾರ ಮುಸ್ಲಿಂರನ್ನು 2ಎ ದಿಂದ ಹೊರಗೆ ಇಟ್ಟಿದ್ದರಿಂದ ಕಳೆದ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ಅದಕ್ಕೆ ಸರಿಯಾದ ಪಾಠ ಕಲಿಸಿದ್ದೇವೆ. ಆದರೆ ಕಾಂಗ್ರೆಸ್ ಸರಕಾರ ಸಹ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳದೇ ವಂಚಿಸಿದೆ. ಪಂಚಮಸಾಲಿ ಸಮಾಜಕ್ಕೆ ಎರಡೂ ಪಕ್ಷಗಳಲ್ಲಿ ಬಲಾಡ್ಯ ನಾಯಕರಿದ್ದಾರೆ. ಕಾಂಗ್ರೆಸ್ಸಿನಲ್ಲಿ ಎಂ.ಬಿ. ಪಾಟೀಲ, ಶಿವಾನಂದ ಪಾಟೀಲ, ವಿಜಯಾನಂದ ಕಾಶಪ್ಪನವರ, ಬಿಜೆಪಿಯಲ್ಲಿ ಬಸನಗೌಡ ಪಾಟೀಲ ಯತ್ನಾಳ, ಸೇರಿದಂತೆ ಪ್ರಮುಖ ನಾಯಕರು ಇದ್ದು ಅವರು ತಮ್ಮ ಬೇಳೆ ಬೇಯಿಸಿಕೊಳ್ಳುತ್ತಾರೆ ನಾವೇನು ಮಾಡಬೇಕು ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ನಾಯಕರು ಸರಿಯಾದ ನಿರ್ಧಾರ ತೆಗೆದುಕೊಳ್ಳದೇ ಹೋದರೆ ಈ ಚುನಾವಣೆಯಲ್ಲಿ ಇಬ್ಬರಿಗೂ ಪಾಠ ಕಲಿಸೋಣ. ಅದಕ್ಕಾಗಿ ರಾಜ್ಯಾದ್ಯಂತ ಮುಸ್ಲಿಂ ನಾಯಕರು ನಿರ್ಧರಿಸಬೇಕು ಎಂದು ಹೇಳಿದರು
ಪುತ್ತೂರು ಸೇರಿದಂತೆ ಬೆಂಗಳೂರು, ಮಡಿಕೇರಿ, ಗೋಣಿಕೊಪ್ಪಲು ಹಾಗೂ ಬೆಳ್ತಂಗಡಿಯಲ್ಲಿ ಪ್ರಸಿದ್ಧವಾಗಿರುವ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಂಸ್ಥೆಯ ಮಾಲಕರಾದ ಸರಾಫ್…
ಶ್ರೀಮಂತ ರಾಜಗುಳಿಗ ಕ್ಷೇತ್ರದಲ್ಲಿ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮದ ವೇಳೆ ಮಗುವಿನ ಚಿಕಿತ್ಸೆಗೆ ನೆರವು ನೀಡುವುದಾಗಿ ನೀಡಿದ್ದ ಭರವಸೆಯನ್ನು ರವಿ…
ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ…
ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ…
ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…
ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…