ಮಂಗಳೂರು: ಹತ್ತಾರು ವಿನೂತನ ಕಾರ್ಯಕ್ರಮಗಳ ಮೂಲಕ ಸೇವಾ ರಂಗದಲ್ಲಿ ಜನ ಮನ್ನಣೆ ಪಡೆದ ಲತೀಫ್ ಗುರುಪುರ ನೇತೃತ್ವದ ಅನಿ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಹತ್ತು ಜೋಡಿ ಸಾಮೂಹಿಕ ವಿವಾಹ ಕಾರ್ಯಕ್ರಮ ಇತ್ತೀಚಿಗೆ ಉಚ್ಚಿಲ ಸೋಮೇಶ್ವರ ಕಿಯಂಝಾ ಗಾರ್ಡನ್ ನಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಪಾಣಕ್ಕಾಡ್ ಸ್ವಾಬಿಕಲಿ ಶಿಹಾಬ್ ತಂಙಳ್ ದುಆ ನೆರವೇರಿಸಿದರು. ಸೆಯ್ಯದ್ ಅಲೀ ತಂಙಳ್ ಕುಂಬೋಲ್ ಸಮಾರೋಪದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಯ್ಯದ್ ಜಿಫ್ರಿ ತಂಗಳ್ ಬೆಳ್ತಂಗಡಿ ಕಾರ್ಯಕ್ರಮ ಉದ್ಘಾಟಿಸಿದರು. ದ.ಕ. ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಖಾಹ್ ನೇತೃತ್ವ ವಹಿಸಿದರು. ಸಯ್ಯದ್ ಜಮಲುಲ್ಲೈಲಿ ತಂಙಳ್ ಕಾಜೂರು ಲೋಗೋ ಬಿಡುಗಡೆಗೊಳಿಸಿದರು.
ಸಮಸ್ತ ಮುಶಾವರ ಬಿ.ಕೆ.ಅಬ್ದುಲ್ ಖಾದರ್ ಮುಸ್ಲಿಯಾರ್ ಬಂಬ್ರಾಣ, ಉಸ್ಮಾನುಲ್ ಫೈಝಿ ತೋಡಾರ್, ಫಿರೋಝ್ ಕುಂನ್ನುಪರಂಬಿಲ್, ಬದ್ರುದ್ದೀನ್ ಅಝ್ಹರಿ, ಹುಸೈನ್ ದಾರಿಮಿ, ಎಸ್.ಬಿ ದಾರಿಮಿ, ಅನೀಸ್ ಕೌಸರಿ ರಫೀಕ್ ಮಾಸ್ಟರ್, ಝಕಾರಿಯ ಮೋಡುಶೆಡ್ಡೆ, ಸಹೋದರ ಬಶೀರ್, ಖಲೀಲ್ ಒಗ್ಗ, ನೌಶಾದ್ ಇನೋಳಿ ಮತ್ತಿತರರು ಉಪಸ್ಥಿತರಿದ್ದರು.
ಜಮಾಲುದ್ದೀನ್ ದಾರಿಮಿ ಕುತುಬಾ ಪಾರಾಯಣ ನೆರವೇರಿಸಿದರು. ಸಂಘಟಕರಾದ ಇಮ್ರಾನ್ ಅಡ್ಡೂರು ಸ್ವಾಗತಿಸಿ, ಇಕ್ಬಾಲ್ ಬಾಳಿಲ ಕಾರ್ಯಕ್ರಮ ನಿರೂಪಿಸಿದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…