ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಬಿಜೆಪಿಯ ಕೋಮುವಾದ ದೇಶಕ್ಕೆ ಗಂಡಾoತರ-ಅಶೋಕ್

ಪುತ್ತೂರು: ದೇಶದಲ್ಲಿ ಜಾತಿ ಧರ್ಮಗಳ ನಡುವೆ ಒಡಕು ಮೂಡಿಸುವ ಬಿಜೆಪಿಯ ಹಿಂದುತ್ವ ದೇಶಕ್ಕೆ ಮಾರಕವಾಗಲಿದೆ. ನಮ್ಮ ನಡುವಿನ ಒಡಕುಗಳ ಕಾರಣದಿಂದ ಇತರ ದೇಶಗಳು ನಮ್ಮ ದೇಶದ ಮೇಲೆ ಆಕ್ರಮಣ ಮಾಡುಗವ ಸಂದರ್ಭಗಳು ಉಂಟಾಗುವ ಅಪಾಯವಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

ಅವರು ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಡವರ ಕಣ್ಣೀರು ಒರೆಸುವ ಕೆಲಸ ಮಾಡುವುದೇ ನಿಜವಾದ ಹಿಂದುತ್ವ. ನಾನು ಓರ್ವ ಹಿಂದೂ ಎಂದು ಎದೆತಟ್ಟಿ ಹೇಳಬಲ್ಲೆ. ನಾನು ೯೦ ಮಂದಿ ಬಡವರಿಗೆ ಮನೆ ನಿರ್ಮಿಸಿ ಕೊಟ್ಟಿದ್ದೇನೆ. ೨೨ ಸಾವಿಕ ಕುಟುಂಬಗಳಿಗೆ ವಿವಿಧ ಬಗೆಯಲ್ಲಿ ಆರ್ಥಿಕ ಸಹಕಾರ ನೀಡಿದ್ದೇನೆ. ಹಲವಾರು ದೇವಾಲಯಗಳ ಜೀರ್ಣೋದ್ಧಾರ ಕಾರ್ಯಕ್ಕೆ ನೇತೃತ್ವ ವಹಿಸಿದ್ದೇನೆ. ನಾನು ಮತ್ತು ಪದ್ಮರಾಜ್ ಪೂಜಾರಿಯನ್ನು÷ ಒಂದು ಕಡೆ ಹಾಗೂ ಜಿಲ್ಲೆಯ ಬಿಜೆಪಿಯ ಎಲ್ಲಾ ಶಾಸಕರು, ಸಂಸದರು ಮತ್ತು ಮುಖಂಡರನ್ನು ಒಂದು ಕಡೆ ನಿಂತು ಚರ್ಚೆಗೆ ಬರಲಿ. ಅವರು ಮಾಡಿರುವ ಹಿಂದುತ್ವದ ಕೆಲಸ ಮತ್ತು ನಾವು ಮಾಡಿರುವ ಹಿಂದುತ್ವದ ಕೆಲಸಗಳ ಬಗ್ಗೆ ಚರ್ಚೆಯಾಗಲಿ. ಬಿಜೆಪಿಗರದ್ದು ನಕಲಿ ಹಿಂದುತ್ವ. ಇನ್ನೊಂದು ಧರ್ಮವನ್ನು ಗೌರವಿಸುವುದೇ ನಿಜವಾದ ಹಿಂದುತ್ವ. ರಾಜಕೀಯ ಲಾಭಕ್ಕಾಗಿ ಅವರಿಂದ ಹಿಂದುತ್ವದ ಬಳಕೆಯಾಗುತ್ತಿದೆ ಎಂದು ಹೇಳಿದರು.

ರಾಜ್ಯದಲ್ಲಿ ಬಿಜೆಪಿ ಅಡಳಿತದ ಸಂದರ್ಭದಲ್ಲಿ ೪೦% ಕಮೀಷನ್ ಸೇರಿದಂತೆ ಬಡವರ ರಕ್ತ ಹೀರಿದ್ದ ಬಿಜೆಪಿಗೆ ದೇವರು ಉತ್ತಮ ಪ್ರತಿಫಲವನ್ನು ನೀಡಿದ್ದಾರೆ. ಕಾಂಗ್ರೆಸ್‌ಗೆ ದೇವರು ಅನುಗ್ರಹಿಸಿದ್ದಾರೆ. ಆ ಸಂದರ್ಭದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ನಿಮ್ಮ ಮನೆಯ ಹೆಣ್ಣು ಮಕ್ಕಳು ಹೊರಗೆ ಹೋದರೆ ಮತ್ತೆ ಮನೆಗೆ ಬರುವ ಸ್ಥಿತಿ ಇಲ್ಲದಂತಾಗುತ್ತದೆ. ಯುವಕರು ಜೈಲು ಪಾಲಾಗುತ್ತಾರೆ ಎಂದೆಲ್ಲಾ ಬಿಜೆಪಿ ಪ್ರಚಾರ ನಡೆಸಿತ್ತು. ಆದರೆ ಇದೀಗ ಸರ್ಕಾರ ಗ್ಯಾರಂಟಿಯ ಕಾರಣದಿಂದಾಗಿ ಹೆಣ್ಣು ಮಕ್ಕಳು ಆರ್ಥಿಕ ಸಬಲೀಕರಣದೊಂದಿಗೆ ಸ್ವಾವಲಂಬಿಗಳಾಗಿದ್ದಾರೆ. ಯುವಕರು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಅವರಿಗೆ ಆರ್ಥಿಕ ಶಕ್ತಿ ತುಂಬುವ ಕೆಲಸವನ್ನು ಕಾಂಗ್ರೆಸ್ ಗ್ಯಾರಂಟಿ ಮೂಲಕ ನೀಡಿದೆ ಎಂದರು.

ವೇದಿಕೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್,ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ್ ಕೆ.ವಿ,ಪಕ್ಷದ ಮುಖಂಡರಾದ ಚಂದ್ರಹಾಸ ಶೆಟ್ಟಿ, ಶಾರದಾ ಅರಸ್, ಮುರಳೀಧರ ರೈ ಮಠಂತಬೆಟ್ಟು, ಎಚ್. ಮಹಮ್ಮದ್ ಆಲಿ, ಪ್ರಸಾದ್ ಕೌಶಲ್ ಶೆಟ್ಟಿ, ಅನಿತಾ ಹೇಮನಾಥ ಶೆಟ್ಟಿ, ಉಲ್ಲಾಸ್ ಕೋಟ್ಯಾನ್, ಶಕೂರ್ ಹಾಜಿ, ನಿರ್ಮಲ್ ಕುಮಾರ್ ಜೈನ್, ಶೀನಪ್ಪ ಗೌಡ, ಬೆಟ್ಟ ಈಶ್ವರ ಭಟ್, ನೂರುದ್ದೀನ್ ಸಾಲ್ಮರ, ಶಿವರಾಮ ಆಳ್ವ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!