ಪುತ್ತೂರು: ದೇಶದಲ್ಲಿ ಜಾತಿ ಧರ್ಮಗಳ ನಡುವೆ ಒಡಕು ಮೂಡಿಸುವ ಬಿಜೆಪಿಯ ಹಿಂದುತ್ವ ದೇಶಕ್ಕೆ ಮಾರಕವಾಗಲಿದೆ. ನಮ್ಮ ನಡುವಿನ ಒಡಕುಗಳ ಕಾರಣದಿಂದ ಇತರ ದೇಶಗಳು ನಮ್ಮ ದೇಶದ ಮೇಲೆ ಆಕ್ರಮಣ ಮಾಡುಗವ ಸಂದರ್ಭಗಳು ಉಂಟಾಗುವ ಅಪಾಯವಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಅವರು ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಡವರ ಕಣ್ಣೀರು ಒರೆಸುವ ಕೆಲಸ ಮಾಡುವುದೇ ನಿಜವಾದ ಹಿಂದುತ್ವ. ನಾನು ಓರ್ವ ಹಿಂದೂ ಎಂದು ಎದೆತಟ್ಟಿ ಹೇಳಬಲ್ಲೆ. ನಾನು ೯೦ ಮಂದಿ ಬಡವರಿಗೆ ಮನೆ ನಿರ್ಮಿಸಿ ಕೊಟ್ಟಿದ್ದೇನೆ. ೨೨ ಸಾವಿಕ ಕುಟುಂಬಗಳಿಗೆ ವಿವಿಧ ಬಗೆಯಲ್ಲಿ ಆರ್ಥಿಕ ಸಹಕಾರ ನೀಡಿದ್ದೇನೆ. ಹಲವಾರು ದೇವಾಲಯಗಳ ಜೀರ್ಣೋದ್ಧಾರ ಕಾರ್ಯಕ್ಕೆ ನೇತೃತ್ವ ವಹಿಸಿದ್ದೇನೆ. ನಾನು ಮತ್ತು ಪದ್ಮರಾಜ್ ಪೂಜಾರಿಯನ್ನು÷ ಒಂದು ಕಡೆ ಹಾಗೂ ಜಿಲ್ಲೆಯ ಬಿಜೆಪಿಯ ಎಲ್ಲಾ ಶಾಸಕರು, ಸಂಸದರು ಮತ್ತು ಮುಖಂಡರನ್ನು ಒಂದು ಕಡೆ ನಿಂತು ಚರ್ಚೆಗೆ ಬರಲಿ. ಅವರು ಮಾಡಿರುವ ಹಿಂದುತ್ವದ ಕೆಲಸ ಮತ್ತು ನಾವು ಮಾಡಿರುವ ಹಿಂದುತ್ವದ ಕೆಲಸಗಳ ಬಗ್ಗೆ ಚರ್ಚೆಯಾಗಲಿ. ಬಿಜೆಪಿಗರದ್ದು ನಕಲಿ ಹಿಂದುತ್ವ. ಇನ್ನೊಂದು ಧರ್ಮವನ್ನು ಗೌರವಿಸುವುದೇ ನಿಜವಾದ ಹಿಂದುತ್ವ. ರಾಜಕೀಯ ಲಾಭಕ್ಕಾಗಿ ಅವರಿಂದ ಹಿಂದುತ್ವದ ಬಳಕೆಯಾಗುತ್ತಿದೆ ಎಂದು ಹೇಳಿದರು.
ರಾಜ್ಯದಲ್ಲಿ ಬಿಜೆಪಿ ಅಡಳಿತದ ಸಂದರ್ಭದಲ್ಲಿ ೪೦% ಕಮೀಷನ್ ಸೇರಿದಂತೆ ಬಡವರ ರಕ್ತ ಹೀರಿದ್ದ ಬಿಜೆಪಿಗೆ ದೇವರು ಉತ್ತಮ ಪ್ರತಿಫಲವನ್ನು ನೀಡಿದ್ದಾರೆ. ಕಾಂಗ್ರೆಸ್‌ಗೆ ದೇವರು ಅನುಗ್ರಹಿಸಿದ್ದಾರೆ. ಆ ಸಂದರ್ಭದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ನಿಮ್ಮ ಮನೆಯ ಹೆಣ್ಣು ಮಕ್ಕಳು ಹೊರಗೆ ಹೋದರೆ ಮತ್ತೆ ಮನೆಗೆ ಬರುವ ಸ್ಥಿತಿ ಇಲ್ಲದಂತಾಗುತ್ತದೆ. ಯುವಕರು ಜೈಲು ಪಾಲಾಗುತ್ತಾರೆ ಎಂದೆಲ್ಲಾ ಬಿಜೆಪಿ ಪ್ರಚಾರ ನಡೆಸಿತ್ತು. ಆದರೆ ಇದೀಗ ಸರ್ಕಾರ ಗ್ಯಾರಂಟಿಯ ಕಾರಣದಿಂದಾಗಿ ಹೆಣ್ಣು ಮಕ್ಕಳು ಆರ್ಥಿಕ ಸಬಲೀಕರಣದೊಂದಿಗೆ ಸ್ವಾವಲಂಬಿಗಳಾಗಿದ್ದಾರೆ. ಯುವಕರು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಅವರಿಗೆ ಆರ್ಥಿಕ ಶಕ್ತಿ ತುಂಬುವ ಕೆಲಸವನ್ನು ಕಾಂಗ್ರೆಸ್ ಗ್ಯಾರಂಟಿ ಮೂಲಕ ನೀಡಿದೆ ಎಂದರು.
ವೇದಿಕೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್,ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ್ ಕೆ.ವಿ,ಪಕ್ಷದ ಮುಖಂಡರಾದ ಚಂದ್ರಹಾಸ ಶೆಟ್ಟಿ, ಶಾರದಾ ಅರಸ್, ಮುರಳೀಧರ ರೈ ಮಠಂತಬೆಟ್ಟು, ಎಚ್. ಮಹಮ್ಮದ್ ಆಲಿ, ಪ್ರಸಾದ್ ಕೌಶಲ್ ಶೆಟ್ಟಿ, ಅನಿತಾ ಹೇಮನಾಥ ಶೆಟ್ಟಿ, ಉಲ್ಲಾಸ್ ಕೋಟ್ಯಾನ್, ಶಕೂರ್ ಹಾಜಿ, ನಿರ್ಮಲ್ ಕುಮಾರ್ ಜೈನ್, ಶೀನಪ್ಪ ಗೌಡ, ಬೆಟ್ಟ ಈಶ್ವರ ಭಟ್, ನೂರುದ್ದೀನ್ ಸಾಲ್ಮರ, ಶಿವರಾಮ ಆಳ್ವ ಮತ್ತಿತರರು ಉಪಸ್ಥಿತರಿದ್ದರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…