ಬೈಕ್ – ಸ್ಕೂಟರ್ ಡಿಕ್ಕಿಯಾಗಿ ಸ್ಕೂಟರ್ ಸವಾರನಿಗೆ ಗಂಭೀರ ಗಾಯವಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಕಟೀಲು ಬಜಪೆ ರಾಜ್ಯ ಹೆದ್ದಾರಿಯ ಎಕ್ಕಾರು ಬಳಿ ನಡೆದಿದೆ. ಮಂಗಳೂರಿನ ಕಂಕನಾಡಿ ಮೂಲದ ವ್ಯಕ್ತಿ ಸ್ಕೂಟರ್ ಸವಾರ ಎಂದು ತಿಳಿದು ಬಂದಿದೆ.

ಬಜಪೆ ಕಡೆಯಿಂದ ಕಟೀಲು ಕಡೆಗೆ ಸಂಚರಿಸುತ್ತಿದ್ದ ಟಿಪ್ಪರ್, ಕಟೀಲು ಕಡೆಯಿಂದ ಬಜಪೆ ಕಡೆಗೆ ಸಂಚರಿಸುತ್ತಿದ್ದ ಸ್ಕೂಟರ್ ಪರಸ್ಪರ ಡಿಕ್ಕಿಯಾಗಿದೆ. ಕೆಲ ಕಾಲ ಕಟೀಲು ಬಜಪೆ ರಾಜ್ಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಘಟನಾ ಸ್ಥಳಕ್ಕೆ ಬಜಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



