ಜನ ಮನದ ನಾಡಿ ಮಿಡಿತ

Advertisement

ಕುಂದಾಪುರ: ಭಾಗವತ ಶ್ರೇಷ್ಠ ಸುಬ್ರಹ್ಮಣ್ಯ ಧಾರೇಶ್ವರ (67) ಅವರು ಎ.25 ರಂದು ಅಸೌಖ್ಯದಿಂದ ನಿಧನರಾಗಿದ್ದಾರೆ.

ಬಡಗುತಿಟ್ಟಿನ ಯಕ್ಷಗಾನದಲ್ಲಿ ಹೊಸ ಅಲೆ ಎಬ್ಬಿಸಿದ್ದ ಕಾಳಿಂಗ ನಾವಡರ ಅಗಲುವಿಕೆಯ ಬಳಿಕ‌ ಉಂಟಾಗಬಹುದಿದ್ದ ನಿರ್ವಾತವನ್ನು ತುಂಬಲು ಯತ್ನಿಸಿದ್ದ ಭಾಗವತ ಶ್ರೇಷ್ಠ ಸುಬ್ರಹ್ಮಣ್ಯ ಧಾರೇಶ್ವರ (67) ಅವರು ಎ.25 ರಂದು ಬೆಳಗ್ಗೆ 4.30 ಕ್ಕೆ ಬೆಂಗಳೂರಿನಲ್ಲಿ ಪುತ್ರನ ಮನೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.


ಯಕ್ಷಗಾನ ರಂಗ ಕಂಡ ಪ್ರಯೋಗಶೀಲ ಭಾಗವತರಾಗಿದ್ದ ಅವರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಯಕ್ಷಗಾನ ಕ್ಷೇತ್ರದಲ್ಲಿ 46 ವರ್ಷಗಳ ಸೇವೆ ಸಲ್ಲಿಸಿದ್ದರು.
ಪೆರ್ಡೂರು ಮೇಳವೊಂದರಲ್ಲೇ 28 ವರ್ಷ ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸಿದ್ದ ಅವರು ಅದಕ್ಕೂ ಮೊದಲು ಅಮೃತೇಶ್ವರಿ ಮೇಳದಲ್ಲಿ ತಮ್ಮ ತಿರುಗಾಟ ಆರಂಭಿಸಿದ್ದರು.
ಹಿರೇಮಹಾಲಿಂಗೇಶ್ವರ ಮೇಳ ಹಾಗೂ ಶಿರಸಿ ಮೇಳದಲ್ಲೂ ಭಾಗವತರಾಗಿ ಬಳಿಕ ಪೆರ್ಡೂರು ಮೇಳದ ರಂಗಂಮಚವೇರಿದವರು ಯಶಸ್ಸಿನ ಶಿಖರ ತಲುಪಿದ್ದರು. 1957 ರಲ್ಲಿ ಗೋಕರ್ಣದಲ್ಲಿ ಜನಿಸಿದ್ದ ಅವರು ಸಂಗೀತಾಭ್ಯಾಸ ‌ಮಾಡಿ ಕಾರ್ಯಕ್ರಮ ನೀಡುತ್ತಿದ್ದರು.
ಬಳಿಕ ಎಲೆಕ್ಟ್ರಿಕ್ ಅಂಗಡಿ ಹಾಕಿ ಯಕ್ಷಗಾನ ಮೇಳಕ್ಕೆ ಲೈಟಿಂಗ್ ವ್ಯವಸ್ಥೆಗೆ ಸೇರಿದ್ದರು. ಪ್ರಾಚಾರ್ಯ ನಾರಣಪ್ಪ ಉಪ್ಪೂರರ ಮೂಲಕ ರಂಗಸ್ಥಳದ ಮೇಲೇರಿದರು. ಹೊಸ ಹೊಸ ಪ್ರಸಂಗಗಳನ್ನು ಹೊಸತನದಲ್ಲಿ ನಿರ್ದೇಶಿಸುವ ಮೂಲಕ ರಂಗಮಾಂತ್ರಿಕ ಎನಿಸಿದ್ದರು.ಕೀರ್ತಿಯ ಉತ್ತುಂಗದಲ್ಲಿ ಇದ್ದಾಗಲೇ ಮೇಳ ತಿರುಗಾಟ ನಿಲ್ಲಿಸಿದ್ದರು.
ಮೇಳ ಬಿಟ್ಟು 10 ವರ್ಷದ ಬಳಿಕ ಮತ್ತೆ ಅದೇ ಮೇಳಕ್ಕೆ ಅನಿವಾರ್ಯ ಸಂದರ್ಭದಲ್ಲಿ ಸೇರಿ ಒಂದು ವರ್ಷದ ತಿರುಗಾಟ ಮಾಡಿದ್ದರು. ಧಾರೇಶ್ವರ ಯಕ್ಷ ಬಳಗ ಮೂಲಕ ಯಕ್ಷಗಾನ ಕಾರ್ಯಕ್ರಮ ಸಂಯೋಜಿಸುತ್ತಿದ್ದರು. ಬದುಕಿನುದ್ದಕ್ಕೂ ತಮ್ಮ ಸ್ವರದ ಮೂಲಕವೇ ಅಭಿಮಾನಿಗಳನ್ನು ಸೆಳೆದಿಟ್ಟುಕೊಂಡಿದ್ದ ಭಾಗವತರ ಅಗಲುವಿಕೆ ನಿಜಕ್ಕೂ ಮಾತಾಡದ ಸ್ಥಿತಿ ತಂದಿದೆ.
ಸುಬ್ರಾಯ ಚೊಕ್ಕಾಡಿಯವರ ಕವನವೊದನ್ನು ಯಕ್ಷಗಾನಕ್ಕೆ ಅಳವಡಿಸಿ ಹೊಸತನದ ಅಲೆಯ ಶುಭಾರಂಭ ಮಾಡಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!