ಬಡಗುತಿಟ್ಟಿನ ಯಕ್ಷಗಾನದಲ್ಲಿ ಹೊಸ ಅಲೆ ಎಬ್ಬಿಸಿದ್ದ ಕಾಳಿಂಗ ನಾವಡರ ಅಗಲುವಿಕೆಯ ಬಳಿಕ ಉಂಟಾಗಬಹುದಿದ್ದ ನಿರ್ವಾತವನ್ನು ತುಂಬಲು ಯತ್ನಿಸಿದ್ದ ಭಾಗವತ ಶ್ರೇಷ್ಠ ಸುಬ್ರಹ್ಮಣ್ಯ ಧಾರೇಶ್ವರ (67) ಅವರು ಎ.25 ರಂದು ಬೆಳಗ್ಗೆ 4.30 ಕ್ಕೆ ಬೆಂಗಳೂರಿನಲ್ಲಿ ಪುತ್ರನ ಮನೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.
ಯಕ್ಷಗಾನ ರಂಗ ಕಂಡ ಪ್ರಯೋಗಶೀಲ ಭಾಗವತರಾಗಿದ್ದ ಅವರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಯಕ್ಷಗಾನ ಕ್ಷೇತ್ರದಲ್ಲಿ 46 ವರ್ಷಗಳ ಸೇವೆ ಸಲ್ಲಿಸಿದ್ದರು.
ಪೆರ್ಡೂರು ಮೇಳವೊಂದರಲ್ಲೇ 28 ವರ್ಷ ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸಿದ್ದ ಅವರು ಅದಕ್ಕೂ ಮೊದಲು ಅಮೃತೇಶ್ವರಿ ಮೇಳದಲ್ಲಿ ತಮ್ಮ ತಿರುಗಾಟ ಆರಂಭಿಸಿದ್ದರು.
ಹಿರೇಮಹಾಲಿಂಗೇಶ್ವರ ಮೇಳ ಹಾಗೂ ಶಿರಸಿ ಮೇಳದಲ್ಲೂ ಭಾಗವತರಾಗಿ ಬಳಿಕ ಪೆರ್ಡೂರು ಮೇಳದ ರಂಗಂಮಚವೇರಿದವರು ಯಶಸ್ಸಿನ ಶಿಖರ ತಲುಪಿದ್ದರು. 1957 ರಲ್ಲಿ ಗೋಕರ್ಣದಲ್ಲಿ ಜನಿಸಿದ್ದ ಅವರು ಸಂಗೀತಾಭ್ಯಾಸ ಮಾಡಿ ಕಾರ್ಯಕ್ರಮ ನೀಡುತ್ತಿದ್ದರು.
ಬಳಿಕ ಎಲೆಕ್ಟ್ರಿಕ್ ಅಂಗಡಿ ಹಾಕಿ ಯಕ್ಷಗಾನ ಮೇಳಕ್ಕೆ ಲೈಟಿಂಗ್ ವ್ಯವಸ್ಥೆಗೆ ಸೇರಿದ್ದರು. ಪ್ರಾಚಾರ್ಯ ನಾರಣಪ್ಪ ಉಪ್ಪೂರರ ಮೂಲಕ ರಂಗಸ್ಥಳದ ಮೇಲೇರಿದರು. ಹೊಸ ಹೊಸ ಪ್ರಸಂಗಗಳನ್ನು ಹೊಸತನದಲ್ಲಿ ನಿರ್ದೇಶಿಸುವ ಮೂಲಕ ರಂಗಮಾಂತ್ರಿಕ ಎನಿಸಿದ್ದರು.ಕೀರ್ತಿಯ ಉತ್ತುಂಗದಲ್ಲಿ ಇದ್ದಾಗಲೇ ಮೇಳ ತಿರುಗಾಟ ನಿಲ್ಲಿಸಿದ್ದರು.
ಮೇಳ ಬಿಟ್ಟು 10 ವರ್ಷದ ಬಳಿಕ ಮತ್ತೆ ಅದೇ ಮೇಳಕ್ಕೆ ಅನಿವಾರ್ಯ ಸಂದರ್ಭದಲ್ಲಿ ಸೇರಿ ಒಂದು ವರ್ಷದ ತಿರುಗಾಟ ಮಾಡಿದ್ದರು. ಧಾರೇಶ್ವರ ಯಕ್ಷ ಬಳಗ ಮೂಲಕ ಯಕ್ಷಗಾನ ಕಾರ್ಯಕ್ರಮ ಸಂಯೋಜಿಸುತ್ತಿದ್ದರು. ಬದುಕಿನುದ್ದಕ್ಕೂ ತಮ್ಮ ಸ್ವರದ ಮೂಲಕವೇ ಅಭಿಮಾನಿಗಳನ್ನು ಸೆಳೆದಿಟ್ಟುಕೊಂಡಿದ್ದ ಭಾಗವತರ ಅಗಲುವಿಕೆ ನಿಜಕ್ಕೂ ಮಾತಾಡದ ಸ್ಥಿತಿ ತಂದಿದೆ.
ಸುಬ್ರಾಯ ಚೊಕ್ಕಾಡಿಯವರ ಕವನವೊದನ್ನು ಯಕ್ಷಗಾನಕ್ಕೆ ಅಳವಡಿಸಿ ಹೊಸತನದ ಅಲೆಯ ಶುಭಾರಂಭ ಮಾಡಿದ್ದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…