ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ ತಾಲೂಕಿನ ಕೆಲವು ಕಡೆಗಳಲ್ಲಿ ಮತಯಂತ್ರದಲ್ಲಿ ತಾಂತ್ರಿಕ ದೋಷ…..!!

ಬಂಟ್ವಾಳ ತಾಲೂಕಿನ ಕೆಲವು ಕಡೆಗಳಲ್ಲಿ ಮತಯಂತ್ರದಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ. ಕೆಲವು ಮತಗಟ್ಟೆಯಲ್ಲಿ ಪ್ರಾರಂಭದಲ್ಲಿ ಮತಯಂತ್ರಗಳು ಕೈ ಕೊಟ್ಟರೆ ಇನ್ನು‌ಕೆಲವು ಕಡೆಗಳ ಮತಯಂತ್ರಗಳು ಮಧ್ಯಾಹ್ನ ವೇಳೆ ಕೆಟ್ಟು ಹೋಗಿದೆ.


ಬಿ.ಸಿ.ರೋಡಿನ ಹೃದಯಭಾಗದಲ್ಲಿರುವ ಕೈಕುಂಜೆ ಎ.ಪಿ.ಎಂ.ಸಿ. ಮತಗಟ್ಟೆಯಲ್ಲಿ ಮಧ್ಯಾಹ್ನ 12 ಗಂಟೆಯಿಂದ 12.30 ರ ವರೆಗೆ ಅರ್ಧ ತಾಸುಗಳ ಕಾಲ ಯಂತ್ರ ಸ್ಥಗಿತಗೊಂಡ ಘಟನೆ ನಡೆಯಿತು.ಬಳಿಕ ಹೊಸ ಯಂತ್ರವನ್ನು ತರಿಸಿ , ಮತದಾನ ಮಾಡಲಾಗಿದೆ. ಇದೇ ರೀತಿ ಬಿ.ಸಿ.ರೋಡಿನ ಅಜ್ಜಿಬೆಟ್ಟು ಎಂಬಲ್ಲಿ ಸರಕಾರಿ ಶಾಲೆಯಲ್ಲಿನ ಮತಯಂತ್ರದಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದು, 11 ಗಂಟೆಯಿಂದ 11.20 ರ ವರೆಗೆ 20 ನಿಮಿಷಗಳ ಕಾಲ ಮತದಾನ ಸ್ಥಗಿತಗೊಂಡಿತ್ತು. ಬಳಿಕ ಟೆಕ್ನೀಷಿಯನ್ ಬಂದು ಯಂತ್ರದ ರಿಪೇರಿ ಮಾಡಿ ಮತ್ತೆ ಮತದಾನ ಪ್ರಕ್ರಿಯೆ ಮುಂದುವರಿಯಿತು.


ಕೈಕೊಟ್ಟ ಕರೆಂಟ್
ಲೋಕಸಭಾ ಸಭಾ ಚುನಾವಣೆ ನಡೆಯುತ್ತಿರುವ ವೇಳೆ ಕರೆಂಟ್ ಅವಾಗ ಅವಾಗ ಕಣ್ಣು ಮುಚ್ಚಾಲೆ ಆಟ ಆಡುವುದು ಕಂಡು ಬಂತು. ಕೊಠಡಿಯೊಳಗೆ ಪ್ಯಾನ್ ಇಲ್ಲದೆ ಕೂರಲು ಸಾಧ್ಯವಾಗದ ಸಮಯದಲ್ಲಿ ‌ಕರೆಂಟ್ ಕೈ ಕೊಟ್ಟಿರುವುದು ಸಾಕಷ್ಟು ತೊಂದರೆ ಉಂಟು‌ಮಾಡಿತ್ತು. ಇನ್ನೊಂದು ಕಡೆಯಿಂದ ಕೊಠಡಿಗಳು ಕತ್ತಲೆಯಾಗಿದ್ದು,ಮತದಾನ ಮಾಡಲು ಯಂತ್ರಗಳು ಸರಿಯಾಗಿ ಕಾಣಿಸುತ್ತಿಲ್ಲ ಎಂಬ ಆರೋಪಗಳು ಕೂಡ ಕೇಳಿ ಬಂದಿವೆ.


ಉಳಿದ ದಿನಗಳಲ್ಲಿ ‌ಕರೆಂಟ್ ನ ಪವರ್ ‌ಕಟ್ ಆಟಗಳು ನಡೆಯುತ್ತಿರುವ ವಿಚಾರ ಸಾಮಾನ್ಯವಾದರೂ, ಇವತ್ತು ‌ಚುನಾವಣೆಯ ದೃಷ್ಟಿಯಿಂದ ಇಡೀ ದಿನ ಪವರ್ ಕಟ್ ಮಾಡದೆ ಕರೆಂಟ್ ನೀಡಬೇಕಿತ್ತು ಎಂಬು ಮಾತುಗಳು ಸಾರ್ವಜನಿಕ ವಲಯದಲ್ಲಿ ‌ಕೇಳಿ ಬಂತು.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!