ಪುತ್ತೂರು: ಲೋಕಸಭಾ ಚುನಾವಣಾ ಕರ್ತವ್ಯ ಮುಗಿಸಿ ಮಡಿಕೇರಿಯಿಂದ ಪುತ್ತೂರಿಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಮುಕ್ರಂಪಾಡಿಯಲ್ಲಿ ಎ.27 ರ ನಸುಕಿನ ಜಾವ 2 ಗಂಟೆ ಸುಮಾರಿಗೆ ನಡೆದಿದೆ.
ಆಟೋ ರಿಕ್ಷಾ ಚಾಲಕ ಜೈಸನ್ (30ವ) ಅವರು ಮೃತಪಟ್ಟವರು. ಪುತ್ತೂರಿಗೆ ಬರುತ್ತಿದ್ದ ಬಸ್ ಮತ್ತು ವಿರುದ್ಧ ಧಿಕ್ಕಿನಿಂದ ಚಲಿಸುತ್ತಿದ್ದ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದ ತೀರ್ವತೆಗೆ ರಿಕ್ಷಾ ನಜ್ಜುಗುಜ್ಜಾಗಿದ್ದು, ಚಾಲಕ ಜೈಸನ್ ರಿಕ್ಷಾದ ಒಳಗೆ ಸಿಲುಕಿ ಹಾಕಿಕೊಂಡಿದ್ದು , ಪುತ್ತೂರು ಅಗ್ನಿಶಾಮಕ ದಳದವರು ಸ್ಥಳಕ್ಕೆ ಬಂದು ಜೈಸನ್ ಅವರನ್ನು ಹೊರತೆಗೆದಿದ್ದಾರೆ. ಆದರೆ ಜೈಸನ್ ಆಗಲೇ ಮೃತಪಟ್ಟಿದ್ದರು.
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…