ಇತರೆ

ನೆಲ್ಯಾಡಿ: ತಾಳಿ ಕಟ್ಟಲು ವಧು ನಿರಾಕರಿಸಿದ ಹಿನ್ನೆಲೆಯಲ್ಲಿ ಮಂಟಪದಲ್ಲೇ ಮದುವೆ ಮುರಿದು ಬಿದ್ದ ಘಟನೆ ಕಡಬ ತಾಲೂಕಿನ ಕೊಣಾಲು ಗ್ರಾಮದಲ್ಲಿ ಎ.26ರಂದು ನಡದಿದೆ.

ಕೊಣಾಲು ಗ್ರಾಮದ ಕೋಲ್ಪೆ ದಿ.ಬಾಬು ಗೌಡರ ಪುತ್ರ ಉಮೇಶ ರವರ ವಿವಾಹವು ಬಂಟ್ವಾಳ ತಾಲೂಕು ಕುಳ ಗ್ರಾಮದ ಕಂಟ್ರಮಜಲು ದಿ.ಕೊರಗಪ್ಪ ಗೌಡರವರ ಪುತ್ರಿ ಸರಸ್ವತಿ ಅವರೊಂದಿಗೆ ನಿಗದಿಯಾಗಿತ್ತು.

ಏ.25ರಂದು ಬೆಳಿಗ್ಗೆ 11.35ರ ಮುಹೂರ್ತದಲ್ಲಿ ಕಾಂಚನ ಪೆರ್ಲ ಶ್ರೀ ಷಣ್ಮುಖ ದೇವಸ್ಥಾನದಲ್ಲಿ ವಿವಾಹ ನಡೆದು ಮಧ್ಯಾಹ್ನ 1 ಗಂಟೆಗೆ ಕೊಲ್ಪೆಯ ವರನ ಮನೆಯಲ್ಲಿ ಸತ್ಕಾರ ಕೂಟ ನಿಗದಿಯಾಗಿತ್ತು. ಅದರಂತೆ ವರ ಹಾಗೂ ವಧುವಿನ ಕಡೆಯವರು ದೇವಸ್ಥಾನಕ್ಕೆ ಮದುವೆ ದಿಬ್ಬಣದಲ್ಲಿ ಬಂದಿದ್ದರು. ಧಾರೆಯ ಸೀರೆ ಹಾಗೂ ಶೃಂಗಾರದೊಂದಿಗೆ ಮದುವೆ ಮಂಟಪಕ್ಕೆ ಬಂದಿದ್ದ ವಧು ಸರಸ್ವತಿ ಹಾಗೂ ವರ ಉಮೇಶ ಪರಸ್ಪರ ಹೂಮಾಲೆ ಹಾಕಿಸಿಕೊಂಡಿದ್ದರು. ಇನ್ನು ವರ ಉಮೇಶ ತಾಳಿ ಕಟ್ಟಲು ಮುಂದಾಗುತ್ತಿದ್ದಂತೆ ವಧು ಸರಸ್ವತಿ ಈ ಮದುವೆ ನನಗೆ ಇಷ್ಟ ಇಲ್ಲ ಎಂದು ಹೇಳಿ ತಾಳಿ ಕಟ್ಟಲು ಅವಕಾಶ ನೀಡಲಿಲ್ಲ ಎಂದು ವರದಿಯಾಗಿದೆ. ಇದರಿಂದ ಎರಡೂ ಕಡೆಯವರೂ ವಿಚಲಿತಗೊಂಡು ವಧುವಿನ ಮನವೊಲಿಕೆಗೆ ಮುಂದಾದರೂ ವಧು ತಾಳಿ ಕಟ್ಟಿಸಿಕೊಳ್ಳಲು ನಿರಾಕರಿಸಿರುವುದರಿಂದ ಬಳಿಕ ಎರಡೂ ಕಡೆಯವರೂ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ತೆರಳಿದರು.

ಮತ್ತೆ ಮದುವೆಯಾಗಲು ವರ ನಿರಾಕರಣೆ:
ಪೊಲೀಸ್ ಠಾಣೆಯಲ್ಲಿ ನಡೆದ ಮಾತುಕತೆ ವೇಳೆ ವಧು ಸರಸ್ವತಿ ಆಗಿರುವ ಅಚಾತುರ್ಯ ಕ್ಕೆ ಪಶ್ಚಾತಾಪ ಪಟ್ಟು ಉಮೇಶ ಅವರನ್ನು ಮದುವೆ ಆಗಲು ಒಪ್ಪಿಗೆ ಸೂಚಿಸಿದರೂ ಉಮೇಶ್ ಅವರು ನಿರಾಕರಿಸಿದರೆಂದು ಹೇಳಲಾಗಿದೆ. ಇದರಿಂದಾಗಿ ಎರಡೂ ಕಡೆಯವರು ಠಾಣೆಯಲ್ಲಿ ಮುಚ್ಚಳಿಕೆ ಬರೆಸಿ ತಮ್ಮ ತಮ್ಮ ಮನೆಗಳಿಗೆ ತೆರಳಿದರು ಎಂದು ವರದಿಯಾಗಿದೆ.

ವರನ ಮನೆಯಲ್ಲಿ ಔತಣ ಕೂಟಕ್ಕೆ ಸಿದ್ದತೆ;
ವರನ ಮನೆಯಲ್ಲಿ ಮದುವೆ ಔತಣ ಕೂಟಕ್ಕೆ ಮಾಂಸಾಹಾರಿ ಊಟಕ್ಕೆ ಸಿದ್ಧತೆ ಮಾಡಲಾಗಿತ್ತು. ಸುಮಾರು 500 ಮಂದಿಗೆ ಊಟಕ್ಕೆ ಸಿದ್ಧತೆ ಮಾಡಲಾಗಿತ್ತು. 1 ಸಾವಿರದಷ್ಟು ಐಸ್ ಕ್ರೀಮ್ ಸಹ ತರಿಸಲಾಗಿತ್ತು. ಮದುವೆ ಮುರಿದು ಬಿದ್ದಿರುವುದರಿಂದ ಇವೆಲ್ಲವೂ ಹಾಗೇ ಉಳಿದಿದೆ. ಕೊನೆ ಕ್ಷಣದಲ್ಲಿ ಯುವತಿ ಮದುವೆ ನಿರಾಕರಿಸಿದರಿಂದ ಎರಡೂ ಕಡೆಯವರಿಗೂ ಲಕ್ಷಾಂತರ ರೂಪಾಯಿ ನಷ್ಟ ಆಗಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…

6 hours ago

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…

6 hours ago

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…

6 hours ago

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…

6 hours ago

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…

6 hours ago

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…

6 hours ago