ಮಂಗಳೂರು: ಪಡುಬಿದ್ರಿ ಸಮೀಪ ನಂದಿಕೂರು ಗ್ರಾಮದ ಮುದರಂಗಡಿ ಜಂಕ್ಷನ್ ಬಳಿ ವ್ಯಾಗನರ್ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ, ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟವರನ್ನು ಕಾವೂರು ಮೂಲದ ಪುರುಷೋತ್ತಮ ಆರ್. ಆಭ್ಯಂಕರ್ ಅವರ ಪತ್ನಿ ಸುಮಂಗಲಾ ಎಂ. (55) ಎಂದು ತಿಳಿದು ಬಂದಿದೆ.
ಪಡುಬಿದ್ರಿ ಕಡೆಯಿಂದ ಕಾರ್ಕಳ ಕಡೆಗೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಕಾರ್ ಚಲಾಯಿಸಿಕೊಂಡು ಹೋಗುವಾಗ ಅಪಘಾತ ಸಂಭವಿಸಿದೆ. ದಂಪತಿ ಮಾಳದಲ್ಲಿ ನಡೆಯಲಿದ್ದ ಉಪನಯನ ಕಾರ್ಯಕ್ರಮಕ್ಕೆ ಹೋಗುತ್ತಿದ್ದರೆಂದು ಸಂಬಂಧಿಕರು ತಿಳಿಸಿದ್ದಾರೆ.
ರಾಜ್ಯ ಹೆದ್ದಾರಿಯಲ್ಲಿ ಸಹಜವಾಗಿ ವೇಗವಾಗಿಯೇ ಬರುತ್ತಿದ್ದ ಕಾರು ಒಮ್ಮೆಲೇ ರಸ್ತೆಯ ತೀರ ಎಡಕ್ಕೆ ಚಲಿಸಿ ಡಾಮರು ರಸ್ತೆಯಿಂದ ಮಣ್ಣಿನ ರಸ್ತೆಗೆ ಇಳಿದು ರಸ್ತೆಯ ಬದಿಯಲ್ಲಿದ್ದ ಸಿಮೆಂಟ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…