ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಯುವತಿಯೋರ್ವಳು ಸ್ಥಳದಲ್ಲಿಯೇ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ತೆಕ್ಕಟ್ಟೆ ಸಮೀಪದ ಗುಡ್ಡೆಅಂಗಡಿ ರಾ.ಹೆ.66ರಲ್ಲಿ ಕೊಯ್ಕಾಡಿ ತಿರುವಿನಲ್ಲಿ ಸಂಭವಿಸಿದೆ.
ಮೃತರನ್ನು ಬೆಂಗಳೂರಿನ ಫೋನ್ ಪೇ ಖಾಸಗಿ ಕಂಪೆನಿಯ ಉದ್ಯೋಗಿ ಕೀರ್ತಿ (25) ಎಂದು ಗುರುತಿಸಲಾಗಿದೆ. ಇವರ ಸ್ನೇಹಿತರಾದ ವಿಘ್ನೇಶ್ (28), ಚೇತನ್ (28), ಐಶ್ವರ್ಯಾ (27), ಲತಾ (26) ಅವರಿಗೆ ಗಂಭೀರವಾದ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ ಗೋಕರ್ಣದ ಕಡೆಗೆ ಆರು ಮಂದಿ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಢಿಕ್ಕಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರಿನ ಒಂದು ಪಾರ್ಶ್ವ ಸಂಪೂರ್ಣ ಜಖಂಗೊಂಡಿತ್ತು. ಕಾರಿನ ಒಳಗೆ ಸಿಲುಕಿಕೊಂಡಿದ್ದ ಗಾಯಾಳುಗಳನ್ನು ಹೊರತೆಗೆಯಲು ಸ್ಥಳೀಯರು ಹರಸಾಹಸಪಟ್ಟರು.
ಬ್ರಹ್ಮಾವರ ವೃತ್ತ ನಿರೀಕ್ಷಕ ದಿವಾಕರ್ ಹಾಗೂ ಕೋಟ ಪೊಲೀಸ್ ಠಾಣಾಧಿಕಾರಿ ತೇಜಸ್ವಿ, ಸಿಬಂದಿ ಪ್ರಸನ್ನ, ಕೃಷ್ಣ ಅವರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ನೇಹಿತರು ಖಾಸಗಿ ಕಂಪೆನಿಯ ಉದ್ಯೋಗಿಗಳಾಗಿದ್ದು, ಎಲ್ಲರೂ ಒಂದಾಗಿ ಮುರ್ಡೇಶ್ವರ, ಗೋಕರ್ಣದ ಕಡೆಗೆ ವೀಕೆಂಡ್ ರಜೆಯಲ್ಲಿ ಪ್ರವಾಸಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…