ಬೆಂಗಳೂರು : ಇತ್ತೀಚೆಗೆ ಆರಂಭವಾದ ‘ಮಹಾನಟಿ’ ಧಾರಾವಾಹಿ ರಿಯಾಲಿಟಿ ಶೋ ಜನಪ್ರಿಯತೆಯನ್ನು ಗಳಿಸಿಕೊಳ್ಳುತ್ತಿದೆ. ನಟಿಯಾಗಲು ಬಯಸುವ ಕಲಾವಿದರಿಗೆ ಝೀ ಕನ್ನಡ ವಾಹಿನಿ ಒಂದೊಳ್ಳೆ ವೇದಿಕೆ ನೀಡಿತ್ತು. ಆದರೆ ಇದೀಗ ಸಂಪೂರ್ಣ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ.
ಈ ಶೋನಲ್ಲಿ ಸ್ಪರ್ಧಿಯೊಬ್ಬರು ನಟನೆ ಮಾಡುವಾಗ ಬಳಕೆ ಮಾಡಿದ ಶಬ್ದ ಚರ್ಚೆಗೆ ಆಸ್ಪದ ನೀಡಿದೆ. ‘ಮೆಕ್ಯಾನಿಕ್ನ ಮದುವೆ ಆದರೆ ಗ್ರೀಸ್ ತಿಂದು ಬದುಕಬೇಕಾಗುತ್ತದೆ..’ ಎನ್ನುವ ವಾಕ್ಯ ಬಳಕೆ ಆಗಿದೆ. ಇದು ಮೆಕ್ಯಾನಿಕ್ ಕೆಲಸ ಮಾಡುವವರ ಭಾವನೆಗೆ ಧಕ್ಕೆ ಉಂಟು ಮಾಡಿದೆ. ಈ ಹಿನ್ನೆಲೆಯಲ್ಲಿ ದೂರು ನೀಡಲಾಗಿದೆ. ಚಿಕ್ಕನಾಯಕನಹಳ್ಳಿಯ ಫ್ರೆಂಡ್ಸ್ ದ್ವಿಚಕ್ರವಾಹನ ವರ್ಕ್‌ಶಾಪ್ ಮಾಲೀಕರು ಮತ್ತು ತಂತ್ರಜ್ಞರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ದೂರು ದಾಖಲು ಮಾಡಿದ್ದಾರೆ.
ಈ ಶೋನ ನಿರ್ಮಾಪಕರು, ನಿರ್ದೇಶಕರು, ದೃಶ್ಯದಲ್ಲಿ ಆ್ಯಕ್ಟ್ ಮಾಡಿದ ಗಗನಾ ವಿರುದ್ಧವೂ ಕೇಸ್ ದಾಖಲಾಗಿದೆ. ಅಲ್ಲದೇ, ನಿರೂಪಕಿ ಅನುಶ್ರೀ, ತೀರ್ಪುಗಾರರಾದ ರಮೇಶ್ ಅರವಿಂದ್, ನಟಿ ಪ್ರೇಮಾ ಮೇಲೂ ಪ್ರಕರಣ ದಾಖಲಾಗಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…