ಹುಣಸೂರು: ಈಶಾನ್ಯ ಆಪ್ರೀಕಾದ ಸೂಡಾನ್ ದೇಶಕ್ಕೆ ವ್ಯಾಪಾರಕ್ಕಾಗಿ ತೆರಳಿ ಅನಾರೋಗ್ಯಕ್ಕೆ ತುತ್ತಾಗಿ ಸಾವನ್ನಪ್ಪಿದ ಅಲೆಮಾರಿ ಜನಾಂಗದ (ಹಕ್ಕಿಪಿಕ್ಕಿ) ನಂದಿನಿ ಯವರ ಪಾರ್ಥಿವ ಶರೀರ ಸ್ವಗ್ರಾಮ ಪಕ್ಷಿರಾಜಪುರಕ್ಕೆ ತಲುಪಿತು.
ಮೃತರ ಪಾರ್ಥಿವ ಶರೀರವನ್ನು ತಮ್ಮ ತಾಯ್ನಾಡಿಗೆ ತರಲು ಪಕ್ಷಿರಾಜ ಪುರದ ನಿವಾಸಿಗಳು ಏ.14ರಂದು ಹುಣಸೂರಿನ ಮಾಜಿ ಶಾಸಕ ಎಚ್ ಪಿ ಮಂಜುನಾಥ್ ರವರನ್ನು ಭೇಟಿ ಮೃತದೇಹವನ್ನು ಸ್ವಗ್ರಾಮಕ್ಕೆ ತರಲು ಮನವಿ ಮಾಡಿದಕೊಂಡ ಮೇರೆಗೆ ಎಚ್ ಪಿ ಮಂಜುನಾಥ್ ರವರು ಅಂದೇ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಹಾಗೂ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಗಳಾದ ರಜನೀಶ್ ಗೋಯಲ್ ರವರಿಗೆ ಮಾಹಿತಿ ನೀಡಿದ್ದರು. ನಂದಿನಿಯವರ ಮೃತದೇಹವು ಸೂಡಾನ್ ದೇಶದಿಂದ ವಿಮಾನದಲ್ಲಿ ಮುಂಬೈಗೆ ಶನಿವಾರ ತಲುಪಿದ್ದು, ಮಧ್ಯಾಹ್ನ ಪಕ್ಷಿರಾಜಪುರಕ್ಕೆ ತಲುಪಿದೆ.
ಸೂಡಾನ್ ದೇಶದಿಂದ ಮೃತ ದೇಹ ತರಲು ಎಲ್ಲಾ ರೀತಿಯ ಸಹಾಯ ಹಾಗೂ ಸಹಕಾರ ನೀಡಿದ ಮಾಜಿ ಶಾಸಕ ಎಚ್ ಪಿ ಮಂಜುನಾಥ್ ರವರಿಗೆ ಹಾಗೂ ಕರ್ನಾಟಕ ಸರ್ಕಾರಕ್ಕೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಕೃತಜ್ಞತೆ ಸಲ್ಲಿಸಿದ್ದಾರೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…