ಮಂಗಳೂರು: ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ತಯಾರಾದ ಗಬ್ಬರ್ ಸಿಂಗ್ ತುಳು ಚಲನ ಚಿತ್ರ ಮೇ 3 ರಂದು ಶುಕ್ರವಾರ ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ.
ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಸಿನಿಪೊಲೀಸ್, ಪಿವಿಆರ್, ಉಡುಪಿಯಲ್ಲಿ ಕಲ್ಪನಾ ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ರಾಧಿಕಾ, ಪ್ಲಾನೆಟ್, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್, ಬೆಳ್ತಂಗಡಿಯಲ್ಲಿ ಭಾರತ್ ಚಿತ್ರ ಮಂದಿರಗಳಲ್ಲಿ”ಗಬ್ಬರ್ ಸಿಂಗ್” ಸಿನಿಮಾ ತೆರೆ ಕಾಣಲಿದೆ.
ಗಬ್ಬರ್ ಸಿಂಗ್ ತುಳು ಸಿನಿಮಾ ವಿಭಿನ್ನ ಕತೆಯನ್ನೊಳಗೊಂಡಿದ್ದು, ಉತ್ತರ ಪ್ರದೇಶದಲ್ಲಿ ನಡೆದ ಘಟನೆಯೊಂದನ್ನು ಆಧರಿಸಿ ಪ್ರೇಕ್ಷಕರಿಗೆ ಇಷ್ಟವಾಗುವ ರೀತಿಯಲ್ಲಿ ಕತೆಯನ್ನು ಹೆಣೆಯಲಾಗಿದೆ. ಉತ್ತಮ ಕತೆ, ನವಿರಾದ ಹಾಸ್ಯದೊಂದಿಗೆ ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ. ಸಿನಿಮಾದಲ್ಲಿ ಆರು ಹಾಡು, ನಾಲ್ಕು ಫೈಟ್ಸ್ ಇದೆ. ಸಿನಿಮಾಕ್ಕೆ ಸುರತ್ಕಲ್, ಚಿತ್ರಾಪುರ, ಬೈಕಂಪಾಡಿ ಮೊದಲಾದ ಪ್ರದೇಶಗಳಲ್ಲಿ ಸಿನಿಮಾಕ್ಕೆ ಮೂರು ಹಂತಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ನಾಯಕ ನಟನಾಗಿ ಶರಣ್ ಶೆಟ್ಟಿ ನಾಯಕಿಯಾಗಿ ವೆನ್ಸಿಟಾ ಅಭಿನಯಿಸಿದ್ದಾರೆ. ಸಮಾಜದಲ್ಲಿ ಅಶಾಂತಿ ಸೃಷ್ಟಿಯಾದಾಗ ಮತ್ತೆ ಶಾಂತಿ ನೆಲೆಸುವಂತೆ ಮಾಡುವ ಖಡಕ್ ಅಧಿಕಾರಿ ಪಾತ್ರದಲ್ಲಿ ಶರಣ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ.
“ಗಬ್ಬರ್ ಸಿಂಗ್” ಆ್ಯಕ್ಷನ್ ಥ್ರಿಲ್ಲರ್ ಫ್ಯಾಮಿಲಿ ಓರಿಯೆಂಟೆಡ್ ಫಿಲ್ಮ್ ಆಗಿದೆ. ಸಿನಿಮಾ ಕತೆ ಚಿತ್ರಕತೆ ಸತೀಶ್ ಪೂಜಾರಿ ಬಾರ್ಕೂರ್, ನಿರ್ದೇಶನದ ಜವಾಬ್ದಾರಿಯನ್ನು ಪ್ರದೀಪ್ ವಹಿಸಿದ್ದಾರೆ. ಮಧು ಸುರತ್ಕಲ್ ಸಂಭಾಷಣೆ ರಚಿಸಿದ್ದಾರೆ.
ಮುಖ್ಯ ಪಾತ್ರದಲ್ಲಿ ಕುಸೇಲ್ದರಸೆ ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಸಾಯಿಕೃಷ್ಣ, ಉಮೇಶ್ ಮಿಜಾರ್, ರವಿರಾಮ ಕುಂಜ, ಗಿರೀಶ್ ಎಂ. ಶೆಟ್ಟಿ ಕಟೀಲ್, ವೀಣಾ ಶೆಟ್ಟಿ ಉಡುಪಿ, ಅಥರ್ವ ಪ್ರಕಾಶ್, ಉದಯ ಆಳ್ವ ಇಡ್ಯಾ, ಸಂದೀಪ್ ಭಕ್ತ, ಕಿರಣ್ ಮಲ್ಪೆ, ಪೂರ್ಣಿಮಾ ಶೆಟ್ಟಿ, ಪವಿತ್ರ ಶೆಟ್ಟಿ,ಚಂದ್ರಹಾಸ ಶೆಟ್ಟಿ ಮಾಣಿ, ಸಂಪತ್ ಲೋಬೋ, ಆಶಾ ಶೆಟ್ಟಿ ಶಿಬರೂರು, ಲಹರಿ ಶೆಟ್ಟಿ ಪಡ್ರೆ, ಶಿಲ್ಪಾ ಶೆಟ್ಟಿ, ಭವ್ಯಾ ಶೆಟ್ಟಿ ಸುರತ್ಕಲ್ ಸಂತೋಷ್, ಚಂದ್ರಹಾಸ ಶೆಟ್ಟಿ ಕಪ್ಪೆಟ್ಟು, ಫ್ರಾಂಕಿ ಕೊಳಲಗಿರಿ, ಉಮೇಶ್ ಶೆಟ್ಟಿ ಹಾವಂಜೆ, ಬೇಬಿ ಆಧ್ಯಾ ಉಡುಪಿ ಮೊದಲಾದವರಿದ್ದಾರೆ.
ಛಾಯಾಗ್ರಹಣ: ರವಿ ಸುವರ್ಣ, ಸಂಕಲನ: ಪ್ರಜ್ವಲ್ ಸುವರ್ಣ, ಕಲೆ: ವೆಂಕಟೇಶ್ ಬೆಂಗಳೂರು, ಸಂಗೀತ: ಡೊಲ್ಪಿನ್ ಕೊಳಲಗಿರಿ. ಹಿನ್ನಲೆ ಸಂಗೀತ: ಕಾರ್ತಿಕ್ ಮುಲ್ಕಿ, ಸಾಹಸ: ಅಲ್ಟಿಮೆಟ್ ಶಿವ್ ನೃತ್ಯ: ಅವಿನಾಶ್ ಬಂಗೇರ, ಶುಭಕಿರಣ್, ಮೇಕಪ್ ಪ್ರದೀಪ್, ವಸ್ತ್ರಾಲಂಕಾರ : ಶರತ್ ಬರ್ಕೆ, ಸಹ ನಿರ್ದೇಶನ: ಪುಷ್ಪರಾಜ ರೈ, ಜಯರಾಜ್, ಸಹಾಯ: ಭಾಗ್ಯರಾಜ್. ಗಬ್ಬರ್ ಸಿಂಗ್ ಮೇ 3ರಂದು ತೆರೆಕಾಣಲಿದೆ.
ಪ್ರೀಮಿಯರ್ ಶೋ
ಈಗಾಗಲೇ ಮಸ್ಕತ್, ಕತಾರ್ ಉಡುಪಿ, ಸುರತ್ಕಲ್ ನಲ್ಲಿ ಗಬ್ನರ್ ಸಿಂಗ್ ಸಿನಿಮಾದ ಪ್ರೀಮಿಯರ್ ಶೋ ನಡೆದಿದೆ. ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಲಭಿಸಿದೆ. ಸಾಂಸಾರಿಕ ಕತೆಯ ಜೊತೆ ಇಲ್ಲಿ ಹಾಸ್ಯವೂ ಚೆನ್ನಾಗಿ ವಕ್೯ಹೌಟ್ ಆಗಿದೆ. ನವೀನ್ ಪಡೀಲ್, ಬೋಜರಾಜ್ ವಾಮಂಜೂರು, ಅರವಿಂದ ಬೋಳಾರ್, ಸಾಯಿಕೃಷ್ಣ, ಉಮೇಶ್ ಮಿಜಾರ್, ಪ್ರಸನ್ನ ಶೆಟ್ಟಿ ಬೈಲೂರು, ರವಿರಾಮ ಕುಂಜ ಇವರ ಹಾಸ್ಯ ಸಕ್ಕತ್ತಾಗಿದೆ. ಜೊತೆಗೆ ಗಿರೀಶ್ ಶೆಟ್ಟಿ ಕಟೀಲು, ವೀಣಾ ಶೆಟ್ಟಿ ಉಡುಪಿ, ಅಥರ್ವ ಪ್ರಕಾಶ್ ಮೊದಲಾದವರ ಪಾತ್ರಗಳೂ ಕೂಡಾ ಇಲ್ಲಿ ಪ್ರಾಮುಖ್ಯತೆಯನ್ನು ಪಡೆದಿದೆ ಎಂದು ನಿರ್ಮಾಪಕ ಸತೀಶ್ ಬಾರ್ಕೂರು ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತಿ
ಸತೀಶ್ ಪೂಜಾರಿ ಬಾರ್ಕೂರು ನಿರ್ಮಾಪಕ
ನಟ ಭೋಜರಾಜ ವಾಮಂಜೂರು
ಮಧು ಸುರತ್ಕಲ್
ಚಂದ್ರ ಶೇಖರ ನಾನಿಲ್ ಹಳೆಯಂಗಡಿ
ನಟ ಶರಣ್ ಶೆಟ್ಟಿ
ನಟಿ ವೆನ್ಸಿಟಾ
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…