ಜನ ಮನದ ನಾಡಿ ಮಿಡಿತ

Advertisement

ಜಗದೀಶ್ ಶೆಟ್ಟರ್‌ರನ್ನು ಬೆಳಗಾವಿಯಲ್ಲೂ ಸೋಲಿಸಿ ವಾಪಾಸ್ ಕಳುಹಿಸಿ; ಸಿಎಂ ಸಿದ್ದರಾಮಯ್ಯ ಕರೆ

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿ. ಇಲ್ಲಿ ಭರ್ಜರಿ ಬಹುಮತದಿಂದ ಕಾಂಗ್ರೆಸ್ ಗೆಲ್ಲಿಸಿ: ಸಿ.ಎಂ.ಸಿದ್ದರಾಮಯ್ಯ ಕರೆ

ಸಿದ್ದರಾಮಯ್ಯರೇ ಚುನಾವಣೆಗೆ ನಿಂತಿದ್ದಾರೆ ಅಂದುಕೊಂಡು ಮತ ಹಾಕಿ: ಸಿ.ಎಂ.ಕರೆ ಹುಬ್ಬಳ್ಳಿಯಲ್ಲಿ ಸೋತ ಜಗದೀಶ್ ಶೆಟ್ಟರ್ ಅವರನ್ನು ಬೆಳಗಾವಿಯಲ್ಲೂ ಸೋಲಿಸಿ ವಾಪಾಸ್ ಕಳುಹಿಸಿ: ಸಿ.ಎಂ.ಸಿದ್ದರಾಮಯ್ಯ

ಮೋದಿ ಬೆಳಗಾವಿಗೆ ಬಂದು ಭಯಾನಕ ಹಸೀ ಸುಳ್ಳು ಹೇಳಿ ಹೋಗಿದ್ದಾರೆ: ಸಿ.ಎಂ ವ್ಯಂಗ್ಯ

ಬೆಳಗಾವಿ (ಯರಗಟ್ಟಿ) ಏ 28: ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿ. ಇಲ್ಲಿ ಭರ್ಜರಿ ಬಹುಮತದಿಂದ ಕಾಂಗ್ರೆಸ್ ಗೆಲ್ಲಿಸಿ. ಹುಬ್ಬಳ್ಳಿಯಲ್ಲಿ ಸೋತಿದ್ದ ಜಗದೀಶ್ ಶೆಟ್ಟರ್ ಅವರನ್ನು ಬೆಳಗಾವಿಯಲ್ಲೂ ಸೋಲಿಸಿ ವಾಪಾಸ್ ಕಳುಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಮೃಣಾಳ್ ಹೆಬ್ಬಾಳ್ಕರ್
ಗೆಲುವಿನ ಸಂದೇಶ ನೀಡಲು ಸಂಘಟಿಸಿದ್ದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯರೇ ಚುನಾವಣೆಗೆ ನಿಂತಿದ್ದಾರೆ ಅಂದುಕೊಂಡು ಮತ ಹಾಕಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದ್ದಾರೆ: ಇವರ ಪುತ್ರನನ್ನು ಲೋಕಸಭೆಯಲ್ಲಿ ಗೆಲ್ಲಿಸಿದರೆ ಜಿಲ್ಲೆಯ ಅಭಿವೃದ್ಧಿ ಹೆಚ್ಚಾಗತ್ತೆ ಎಂದರು.

ರಾಜ್ಯಕ್ಕೆ ಬರೋದು, ಸುಳ್ಳು ಹೇಳಿ ಓಡೋಗೋದು

ಮೋದಿ ಬೆಳಗಾವಿಗೆ ಬಂದು ಭಯಾನಕ ಹಸೀ ಸುಳ್ಳು ಹೇಳಿ ಹೋಗಿದ್ದಾರೆ. ಪ್ರತೀ ಬಾರಿ ರಾಜ್ಯಕ್ಕೆ ಬರೋದು, ಸುಳ್ಳು ಹೇಳಿ ಹೋಗೋದೇ ಆಯ್ತು. ನಾವು ಶಿವಾಜಿ ಮತ್ತು ಕಿತ್ತೂರು ರಾಣಿ ಚನ್ನಮ್ಮ ಅವರಿಗೆ ಅವಮಾನಿಸಿದ್ದೀವಿ ಎಂದು ಹಸಿ ಹಸಿ ಸುಳ್ಳು ಹೇಳಿ ಹೋಗಿದ್ದಾರೆ.

ರಾಣಿ ಚನ್ನಮ್ಮ ಜಯಂತಿ ಆರಂಭಿಸಿದ್ದು ನಮ್ಮ ಸರ್ಕಾರ. ಶಿವಾಜಿ ಮಹಾರಾಜರನ್ನು ಅತ್ಯಂತ ಗೌರವದಿಂದ ಕಾಣುವವರು ನಾವು. ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರ ಮಾಡಿದವರು ನಾವು. ಹೀಗಾಗಿ ಈ ಹಸಿ ಸುಳ್ಳುಗಾರ ಮೋದಿ ಮಾತನ್ನು ನಂಬಬೇಡಿ. ನಂಬಿ ಮೋಸ ಹೋಗಬೇಡಿ. ಹತ್ತತ್ತು ವರ್ಷ ಮೋದಿ ಬರೀ ಸುಳ್ಳು ಹೇಳಿಕೊಂಡು ತಿರುಗಿದ್ದು ಬಿಟ್ಟರೆ ಒಂದೇ ಒಂದು ಭರವಸೆಯನ್ನೂ ಈಡೇರಿಸಲಿಲ್ಲ ಎಂದರು.

ಬಿಜೆಪಿಯವರು ಫಲಾನುಭವಿಗಳನ್ನು ಅವಮಾನಿಸಿದರು: ಈಗ ನಿಂತೋಗತ್ತೆ ಎಂದು ಸುಳ್ಳು ಹೇಳುತ್ತಿದ್ದಾರೆ

ಬಿಜೆಪಿಯವರು ನಮ್ಮ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳನ್ನು ಅವಮಾನಿಸಿದರು. ಈಗ ಚುನಾವಣೆ ಬಳಿಕ ಗ್ಯಾರಂಟಿಗಳು ನಿಂತೋಗತ್ತವೆ ಎಂದು ಸುಳ್ಳು ಹೇಳುತ್ತಿದ್ದಾರೆ. ಯಾವುದೇ ಕಾರಣಕ್ಕೂ ಐದು ವರ್ಷ ಗ್ಯಾರಂಟಿಗಳು ನಿಲ್ಲುವುದಿಲ್ಲ. ಮುಂದಿನ ವರ್ಷಕ್ಕೆ ಬೇಕಾಗುವ ಹಣವನ್ನು ನಾನು ಆಗಲೇ ತೆಗೆದಿಟ್ಟಿದ್ದೀವಿ ಎಂದರು.

ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಸತೀಶ್ ಜಾರಕಿಹೊಳಿ , ಬೈರತಿ ಸುರೇಶ್, ಮಾಜಿ ಸಚಿವರಾದ ವಿನಯ್ ಕುಲಕರ್ಣಿ ಹಾಗೂ ಜಿಲ್ಲೆಯ ಶಾಸಕರು ಮತ್ತು ಮುಖಂಡರುಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

error: Content is protected !!