ಜನ ಮನದ ನಾಡಿ ಮಿಡಿತ

Advertisement

ಹಿರಿಯ ನಾಗರಿಕರು ಪರಿಹಾರ ಕೋರಿ ವಕೀಲರ ಮೂಲಕ ಎಸಿ, ಡಿಸಿಗಳ ಮುಂದೆ ಮೇಲ್ಮನವಿ ಸಲ್ಲಿಸಬಹುದು: ಹೈಕೋರ್ಟ್

ಹಿರಿಯ ನಾಗರಿಕ ರಕ್ಷಣಾ ಕಾಯ್ದೆಯಡಿ ಪರಿಹಾರ ಕೋರಿ ಮೇಲ್ಮನವಿ ಸಲ್ಲಿಸುವ ಹಿರಿಯ ನಾಗರಿಕರಿಗೆ ವಕೀಲರ ಮೂಲಕ ಪ್ರತಿನಿಧಿಸಿಕೊಳ್ಳುವ ಹಕ್ಕಿದೆ ಎಂದು ಹೈಕೋರ್ಟ್ ತೀರ್ಪು ನೀಡಿದೆ.

ಬೆಂಗಳೂರು: ಪಾಲಕರ ಪೋಷಣೆ, ಸಂರಕ್ಷಣೆ ಮತ್ತು ಹಿರಿಯ ನಾಗರಿಕ ರಕ್ಷಣಾ ಕಾಯ್ದೆಯಡಿ ಪರಿಹಾರ ಕೋರಿ ಉಪ ವಿಭಾಗಾಧಿಕಾರಿ ಮತ್ತು ಜಿಲ್ಲಾಧಿಕಾರಿಗಳ ಮುಂದೆ ಅರ್ಜಿ ಅಥವಾ ಮೇಲ್ಮನವಿ ಸಲ್ಲಿಸುವ ಹಿರಿಯ ನಾಗರಿಕರು ವಕೀಲರ ಮೂಲಕ ಪ್ರತಿನಿಧಿಸಿಕೊಳ್ಳುವ ಹಕ್ಕು ಹೊಂದಿರುತ್ತಾರೆ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ತಮ್ಮ ಆಸ್ತಿಯನ್ನು ಮಕ್ಕಳು ಅಕ್ರಮವಾಗಿ ವರ್ಗಾಯಿಸಿಕೊಂಡಿದ್ದಾರೆ ಎಂದು ಆರೋಪಿಸಿ ಸಲ್ಲಿಸಿದ ಮೇಲ್ಮನವಿಯ ಸಂಬಂಧ ತಮ್ಮನ್ನು ವಕೀಲರು ಪ್ರತಿನಿಧಿಸಲು ಅನುಮತಿ ನೀಡಬೇಕೆಂಬ ಮನವಿಯನ್ನು ಉಡುಪಿ ಜಿಲ್ಲಾಧಿಕಾರಿಗಳು ತಿರಸ್ಕರಿಸಿ ಆದೇಶಿಸಿದ್ದರು. 

ಈ ಆದೇಶ ರದ್ದು ಕೋರಿ ಪುತ್ತೂರು ತಾಲೂಕಿನ ನಿವಾಸಿ ಕೆ. ಶ್ರೀನಿವಾಸ್ ಗಾಣಿಗ (82) ಎಂಬವರು ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ನೀಡಿದೆ.

ಅಲ್ಲದೆ, ಪಾಲಕರ ಪೋಷಣೆ, ಸಂರಕ್ಷಣೆ ಮತ್ತು ಹಿರಿಯ ನಾಗರಿಕ ರಕ್ಷಣಾ ಕಾಯ್ದೆಯ ಸಲ್ಲಿಕೆಯಾದ ಅರ್ಜಿ ಮತ್ತು ಮೇಲ್ಮನವಿಯ ಸಂಬಂಧ ಪಕ್ಷಗಾರರಾದ ಹಿರಿಯ ನಾಗರಿಕರು ನೇರವಾಗಿ ಮನವಿ ಸಲ್ಲಿಸಬೇಕು. ಯಾವುದೇ ವಕೀಲರನ್ನು ಪ್ರತಿನಿಧಿಸಬಾರದು ಎಂಬುದನ್ನು ಕಡ್ಡಾಯಗೊಳಿಸಿರುವ ಕಾಯ್ದೆಯ ಸೆಕ್ಷನ್ 17, ವಕೀಲರ ಕಾಯ್ದೆ ಸೆಕ್ಷನ್ 30ಕ್ಕೆ ವಿರುದ್ಧವಾಗಿದೆ ಎಂದು ಹೈಕೋರ್ಟ್ ಘೋಷಿಸಿದೆ.

ಅಷ್ಟೇ ಅಲ್ಲದೆ, ಆ ಸೆಕ್ಷನ್‌ ಜಾರಿಗೊಳಿಸದಂತೆ ಆದೇಶಿಸಿದೆ. ಪ್ರಕರಣದಲ್ಲಿ ಶ್ರೀನಿವಾಸ್​ ಅವರನ್ನು ವಕೀಲರು ಪ್ರತಿನಿಧಿಸುವಂತಿಲ್ಲ ಎಂದು ತಿಳಿಸಿ ಜಿಲ್ಲಾಧಿಕಾರಿ 2023ರ ಫೆ.21ರಂದು ನೀಡಿದ್ದ ಹಿಂಬರಹವನ್ನೂ ರದ್ದುಪಡಿಸಿ ಆದೇಶಿಸಿದ್ದು, ಅರ್ಜಿಯಲ್ಲಿನ ಅಂಶಗಳನ್ನು ಆಧರಿಸಿ ಕಾನೂನು ಪ್ರಕಾರ ಸೂಕ್ತ ಆದೇಶ ಮಾಡಬೇಕು ಎಂದು ನಿರ್ದೇಶನ ನೀಡಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!