ಉಡುಪಿ: ವ್ಯಕ್ತಿಯೋರ್ವರು ಕುಸಿದುಬಿದ್ದು ಮೃತಪಟ್ಟ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ನಡೆದಿದೆ.
ಮೃತರನ್ನು ಬಡಿಯಪ್ಪ ಎಂದು ಗುರುತಿಸಲಾಗಿದೆ.

ಇವರು ಸಿಟಿ ಬಸ್ ನಿಲ್ದಾಣದ ಬಳಿ ಆಕಸ್ಮಿಕವಾಗಿ ಕುಸಿದುಬಿದ್ದು ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು. ಕೂಡಲೇ ಸ್ಥಳಕ್ಕೆ ಬಂದ ಸಮಾಜಸೇವಕ ನಿತ್ಯಾನಂದ ಒಳಕಾಡುವರು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು. ಅಲ್ಲಿ ಪರೀಕ್ಷಿಸಿದ ವೈದ್ಯರು ವ್ಯಕ್ತಿ ಅದಾಗಲೇ ಮೃತಪಟ್ಟಿರುವುದನ್ನು ದೃಢೀಕರಿಸಿದರು. ಶವವನ್ನು ಶವಾಗಾರದಲ್ಲಿ ರಕ್ಷಿಸಿಡಲಾಗಿದೆ.



