ಪುತ್ತೂರು: ಮುತ್ತುಗೋಪಾಲ ಫಿಲ್ಮ್ ನಿರ್ಮಾಣದಲ್ಲಿ ಸುಮಾರು ೧.೭೦ ಕೋಟಿ ಬಜೆಟ್‌ನಲ್ಲಿ ತಯಾರಿಸಲಾದ `ಗಬ್ಬರ್ ಸಿಂಗ್’ ತುಳು ಸಿನಿಮಾ ಮಾ. ೩ರಂದು ತೆರೆಕಾಣಲಿದೆ ಎಂದು ಸಿನಿಮಾದ ನಟ ಚಂದ್ರಹಾಸ ಶೆಟ್ಟಿ ಮಾಣಿ ತಿಳಿಸಿದ್ದಾರೆ.
ಅವರು ಬುಧವಾರ ಪುತ್ತೂರು ಪ್ರೆಸ್‌ಕ್ಲಬ್‌ನಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ ಚಂದ್ರಶೇಖರ ಸನಿಲ್ ಮತ್ತು ನಾಗೇಶ್ ಪೂಜಾರಿ ಅರ್ಪಿಸುವ ಗಬ್ಬರ್ ಸಿಂಗ್ ಸಿನಿಮಾದಲ್ಲಿ ಸತೀಶ್ ಪೂಜಾರಿ ಬಾರ್ಕೂರು ನಿರ್ಮಾಪಕರಾಗಿ ಕಥೆ, ಚಿತ್ರಕಥೆ ಬರೆದಿದ್ದಾರೆ. ಪ್ರದೀಪ್ ನಿರ್ದೇಶನದಲ್ಲಿ, ಪುಷ್ಪರಾಜ್ ಮತ್ತು ಜಯರಾಜ್ ಸಹನಿರ್ದೇಶನದಲ್ಲಿ ಸಿನಿಮಾ ತಯಾರಾಗಿದ್ದು, ಮಧು ಸುರತ್ಕಲ್ ಸಂಭಾಷಣೆ ಬರೆದಿದ್ದಾರೆ.
ಶರಣ್ ಶೆಟ್ಟಿ ನಾಯಕ, ವೆನ್ಸಿಟಾ ಡಯಾಸ್ ನಾಯಕಿಯಾಗಿ ಅಭಿನಯಿಸಿದ್ದು, ಮುಖ್ಯ ಭೂಮಿಕೆಯಲ್ಲಿ ಹಾಸ್ಯ ನಟರಾದ ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೊಜರಾಜ್ ವಾಮಂಜೂರು, ರವೀ ರಾಮಕುಂಜ ಸೇರಿದಂತೆ ಹಲವಾರು ಹಾಸ್ಯ ಕಲಾವಿದರು ಚಿತ್ರದಲ್ಲಿದ್ದಾರೆ. ಕರಾವಳಿಯ ಮಂಗಳೂರು, ಉಡುಪಿ, ಬ್ರಹ್ಮಾವರ, ಕಾರ್ಕಳ, ಬೈಂದೂರು ಮತ್ತಿತರ ಪ್ರದೇಶಗಳಲ್ಲಿ ಸಿನಿಮಾ ಚಿತ್ರೀಕರಣ ನಡೆಸಲಾಗಿದೆ.
ಮೇ. ೩ರಿಂದ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಥಿಯೇಟರ್‌ಗಳಲ್ಲಿ ಸಿನಿಮಾ ಪ್ರದರ್ಶನಗೊಳ್ಳಲಿದೆ ಎಂದು ಅವರು ತಿಳಿಸಿದರು.
ಸುದ್ಧಿಗೋಷ್ಠಿಯಲ್ಲಿ ಗಬ್ಬರ್‌ಸಿಂಗ್ ಸಿನಿಮಾದ ನಾಯಕ ನಟ ಶರಣ್ ಶೆಟ್ಟಿ, ನಾಯಕಿ ನಟಿ ವೆನ್ಸಿಟಾ ಡಯಾಸ್ ಸಿನಿಮಾದ ಬಗ್ಗೆ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…