ಅವರು ಮುಲ್ಕಿಯ ಪ್ರತಿಷ್ಠಿತ ವಿಜಯ ರೈತ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ, ಅತಿಕಾರಿಬೆಟ್ಟು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ, ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಜೆಡಿಎಸ್ ಪಕ್ಷದಲ್ಲಿ ಪ್ರಶ್ನಾತೀತ ನಾಯಕನಾಗಿ ಗುರುತಿಸಿಕೊಂಡಿದ್ದರು.

ಅತಿಕಾರಿಬೆಟ್ಟು ಪರಿಸರದ ವಿವಿಧ ಸಂಘ-ಸಂಸ್ಥೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು, ಹಿರಿಯ ಕೃಷಿಕರಾಗಿ, ಹೈನುಗಾರರಾಗಿ ಜನಾನುರಾಗಿಯಾಗಿದ್ದರು
ಅವರ ನಿಧನಕ್ಕೆ ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ, ವೇದಮೂರ್ತಿ ವಾದಿರಾಜ ಉಪಾಧ್ಯಾಯ ಕೊಲಕಾಡಿ, ಮುಲ್ಕಿ ಸೀಮೆ ಅರಸರಾದ ದುಗ್ಗಣ್ಣ ಸಾವಂತರು, ಶಾಸಕ ಉಮಾನಾಥ ಕೋಟ್ಯಾನ್,ಮಾಜೀ ಸಚಿವ ಅಭಯಚಂದ್ರ ಜೈನ್, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ಉದ್ಯಮಿ ಅರವಿಂದ ಪೂಂಜ ಕಾರ್ನಾಡ್,
ಮುಲ್ಕಿ ವಿಜಯ ರೈತ ಸೊಸೈಟಿ ಅಧ್ಯಕ್ಷ ರಂಗನಾಥ ಶೆಟ್ಟಿ, ಅತಿಕಾರಿಬೆಟ್ಟು ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಗಂಗಾಧರ ಶೆಟ್ಟಿ ಬೆರ್ಕೆತೋಟ, ಶಿಮಂತೂರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಪದ್ಮಿನಿ ವಿಜಯಶೆಟ್ಟಿ,ಅತಿಕಾರಿಬೆಟ್ಟು ಗ್ರಾಪಂ ಉಪಾಧ್ಯಕ್ಷ ಮನೋಹರ ಕೋಟ್ಯಾನ್ ,ಸದಸ್ಯ ದಯಾನಂದ ಮಟ್ಟು ಡಿಸಿಸಿ ಸದಸ್ಯ ಧನಂಜಯ ಮಟ್ಟು,ಕಿಲ್ಪಾಡಿ ಗ್ರಾಪಂ ಸದಸ್ಯ ಗೋಪಿನಾಥ ಪಡಂಗ, ಉದಯ ಕುಮಾರ್ ಶೆಟ್ಟಿ ಆದಿಧನ್ ಮುಲ್ಕಿ, ಕೆಪಿಸಿಸಿ ಕೋ ಆರ್ಡಿನೇಟರ್ ವಸಂತ್ ಬರ್ನಾಡ್, ದ.ಕ. ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸುನಿಲ್ ಆಳ್ವ
ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಕಿಶೋರ್ ಶೆಟ್ಟಿ ಬಪ್ಪನಾಡು ಮಂಡಲಾಧ್ಯಕ್ಷ ದಿನೇಶ್ ಪುತ್ರನ್ ಬಳಕುಂಜೆ, ಉದಯ ಅಮೀನ್ ಮಟ್ಟು, ಉತ್ತಮ್ ಪೂಜಾರಿ ಮೈಲೊಟ್ಟು, ಸಾಮಾಜಿಕ ಕಾರ್ಯಕರ್ತ ಶರತ್ ಕಾರ್ನಾಡ್ ಮತ್ತಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ



