ಜನ ಮನದ ನಾಡಿ ಮಿಡಿತ

Advertisement

ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಉದ್ಯಮಿ ಹೃದಯಾಘಾತದಿಂದ ಮೃತ್ಯು

ಉಡುಪಿ: ಪುಣೆಯಿಂದ ಕುಂದಾಪುರಕ್ಕೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಉದ್ಯಮಿಯೋರ್ವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಮೃತರನ್ನು ಸಿದ್ದಾಪುರ ಸಮೀಪದ ಉಳ್ಳೂರು-74 ಗ್ರಾಮದ ನೂಜಿನಬೈಲು ನಿವಾಸಿ, ಉದ್ಯಮಿ, ಸಮಾಜ ಸೇವಕ ಪ್ರಶಾಂತ್ ಶೆಟ್ಟಿ (50) ಎಂದು ಗುರುತಿಸಲಾಗಿದೆ. ಮೇ 1ರಂದು ಹೊನ್ನಾವರದಲ್ಲಿ ಈ ಘಟನೆ ನಡೆದಿದೆ. ಹೊನ್ನಾವರ ತಲುಪಿದಾಗ ಪ್ರಶಾಂತ್ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಬಸ್ ಕಂಡಕ್ಟರ್‌ಗೆ ವಿಷಯ ತಿಳಿಸಿದರು. ಕೂಡಲೇ ಅವರನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ದುರದೃಷ್ಟವಶಾತ್ ಚಿಕಿತ್ಸೆ ಫಲಿಸದೇ ಅವರು ಕೊನೆಯುಸಿರೆಳೆದಿದ್ದಾರೆ. ಅವರು ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಪ್ರಶಾಂತ್ ಹಲವು ವರ್ಷಗಳಿಂದ ಪುಣೆಯಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿದ್ದರು.. ನಂತರ ಬಾಬಾಸ್ ಕಿಚನ್ ಅನ್ನು ಸ್ಥಾಪಿಸಿದರು. ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ, ಅವರು ಸಿದ್ದಾಪುರದಲ್ಲಿ ಶ್ಯಾಮಲಾ ಪ್ಯಾಲೇಸ್ ಮದುವೆ ಮಂಟಪ ಮತ್ತು ಪ್ರಶ್ವಿನ್ ಇನ್ ಲಾಡ್ಜ್ ಅನ್ನು ಸ್ಥಾಪಿಸಿದ್ದರು. ಮುಂಬಯಿ ಬಂಟರ ಸಂಘದ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ ಅವರು, ಕುಂದಾಪುರ ಯುವ ಬಂಟರ ಸಂಘ ಹಾಗೂ ಸಿದ್ದಾಪುರ ಯಕ್ಷ ನುಡಿಸಿರಿಯಲ್ಲಿ ಸಕ್ರಿಯರಾಗಿದ್ದರು

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!