ಉಡುಪಿ: ಪುಣೆಯಿಂದ ಕುಂದಾಪುರಕ್ಕೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಉದ್ಯಮಿಯೋರ್ವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಮೃತರನ್ನು ಸಿದ್ದಾಪುರ ಸಮೀಪದ ಉಳ್ಳೂರು-74 ಗ್ರಾಮದ ನೂಜಿನಬೈಲು ನಿವಾಸಿ, ಉದ್ಯಮಿ, ಸಮಾಜ ಸೇವಕ ಪ್ರಶಾಂತ್ ಶೆಟ್ಟಿ (50) ಎಂದು ಗುರುತಿಸಲಾಗಿದೆ. ಮೇ 1ರಂದು ಹೊನ್ನಾವರದಲ್ಲಿ ಈ ಘಟನೆ ನಡೆದಿದೆ. ಹೊನ್ನಾವರ ತಲುಪಿದಾಗ ಪ್ರಶಾಂತ್ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಬಸ್ ಕಂಡಕ್ಟರ್‌ಗೆ ವಿಷಯ ತಿಳಿಸಿದರು. ಕೂಡಲೇ ಅವರನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ದುರದೃಷ್ಟವಶಾತ್ ಚಿಕಿತ್ಸೆ ಫಲಿಸದೇ ಅವರು ಕೊನೆಯುಸಿರೆಳೆದಿದ್ದಾರೆ. ಅವರು ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಪ್ರಶಾಂತ್ ಹಲವು ವರ್ಷಗಳಿಂದ ಪುಣೆಯಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿದ್ದರು.. ನಂತರ ಬಾಬಾಸ್ ಕಿಚನ್ ಅನ್ನು ಸ್ಥಾಪಿಸಿದರು. ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ, ಅವರು ಸಿದ್ದಾಪುರದಲ್ಲಿ ಶ್ಯಾಮಲಾ ಪ್ಯಾಲೇಸ್ ಮದುವೆ ಮಂಟಪ ಮತ್ತು ಪ್ರಶ್ವಿನ್ ಇನ್ ಲಾಡ್ಜ್ ಅನ್ನು ಸ್ಥಾಪಿಸಿದ್ದರು. ಮುಂಬಯಿ ಬಂಟರ ಸಂಘದ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ ಅವರು, ಕುಂದಾಪುರ ಯುವ ಬಂಟರ ಸಂಘ ಹಾಗೂ ಸಿದ್ದಾಪುರ ಯಕ್ಷ ನುಡಿಸಿರಿಯಲ್ಲಿ ಸಕ್ರಿಯರಾಗಿದ್ದರು
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…