ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುಧೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಅವರು ಹೃದಯಾಘಾತದಿಂದ ನಿಧನರಾದರು. ಅವರಿಗೆ 59 ವರ್ಷ ವಯಸ್ಸಾಗಿತ್ತು.
ನಾಲ್ಕು ದಶಕಗಳ ಕಾಲ ಯಕ್ಷಗಾನದಲ್ಲಿ ಸೇವೆ ಸಲ್ಲಿಸಿದ ಅವರು, ಯಕ್ಷಗಾನ ಪ್ರಸಂಗದಲ್ಲಿ ತನ್ನ ಕೊನೆಯ ಪಾತ್ರ ನಿರ್ವಹಣೆ ಮುಗಿಸಿ ಕೊನೆಯುಸಿರೆಳೆದಿದ್ದಾರೆ.
ನಿನ್ನೆ (ಮೇ 1) ಕೋಟ ಗಾಂಧಿ ಮೈದಾನದಲ್ಲಿ ಧರ್ಮಸ್ಥಳ ಕ್ಷೇತ್ರ ಮಹಾತ್ಮಿಯ ಕುಕ್ಕಿತ್ತಾಯನ ವೇಷ ನಿರ್ವಹಿಸಿ, ಚೌಕಿಗೆ ಮರಳಿ ಕಿರೀಟ ಆಭರಣಗಳನ್ನು ತೆಗೆದಿಟ್ಟು ಮುಖದ ಬಣ್ಣ ತೆಗೆಯುತ್ತಿದ್ದ ಹಾಗೆ ರಾತ್ರಿ ಸುಮಾರು 12.25ಕ್ಕೆ ಚೌಕಿಯಲ್ಲಿ ತೀವ್ರ ಹೃದಯಾಘಾತದಿಂದ ನಿಧನರಾದರು. ಅವರು ಯಾವುದೇ ಪಾತ್ರ ನೀಡಿದರೂ ಸಮರ್ಥವಾಗಿ ನಿರ್ವಹಿಸುತ್ತಿದ್ದ ಹಿರಿಯ ಸವ್ಯಸಾಚಿ ಕಲಾವಿದರಾಗಿದ್ದರು. ಚೌಕಿಯಿಂದಲೇ ನಿರ್ಗಮಿಸಿದ ಹಿರಿಯ ಪುಣ್ಯಾತ್ಮರ ಸಾಲಿಗೆ ಗಂಗಾಧರರೂ ಸೇರಿದಂತಾಗಿದೆ. ಪ್ರಸಂಗದ ಕೊನೆಯ ದೃಶ್ಯದ ಮೊದಲಿನ ಭಾಗದಲ್ಲಿ ಇವರ ಪಾತ್ರ ನಿರ್ವಹಣೆ ಇತ್ತು. ನಿರ್ವಹಣೆ ಮುಗಿಸಿ ವೇಷ ಕಳಚುತಿದ್ದಂತೆ ಹೃದಯಾಘಾತ ಸಂಭವಿಸಿದೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…