ಉಡುಪಿ: ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ವಾಸ್ತುತಜ್ಞನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಬ್ರಹ್ಮಾವರ ಸಮೀಪದ ಮಟಪಾಡಿ ನಿವಾಸಿ ಅನಂತ ನಾಯ್ಕ್ (51) ಬಂಧಿತ ಆರೋಪಿ. ಈತ ಬ್ರಹ್ಮಾವರ ಬಸ್ ನಿಲ್ದಾಣ ಸಮೀಪದ ಲಾಡ್ಜ್ ವೊಂದರ ರೂಮಿನಲ್ಲಿ ವಾಸ್ತುತಜ್ಞ, ಜಲತಜ್ಞ, ಯೋಗ ಪಂಡಿತ, ಆಧ್ಯಾತ್ಮಿಕ ಪಂಡಿತ ಎಂಬುದಾಗಿ ಬೋರ್ಡ್ ಹಾಕಿಕೊಂಡು ವ್ಯವಹಾರ ನಡೆಸುತ್ತಿದ್ದ.
18ರ ಹರೆಯದ ಯುವಕ ತನ್ನ ತಂದೆಯೊಂದಿಗೆ ಈತನ ಬಳಿ ವಾಸ್ತು ಕೇಳಲು ಲಾಡ್ಜ್‌ನಲ್ಲಿರುವ ರೂಮಿಗೆ ರಾತ್ರಿ 9ಗಂಟೆ ಸುಮಾರಿಗೆ ಹೋಗಿದ್ದನು. ಈ ಸಂದರ್ಭ ತಂದೆಯನ್ನು ಹೊರಗೆ ಕಳುಹಿಸಿದ ಅನಂತ ನಾಯ್ಕ ಯುವಕನಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆಂದು ದೂರಲಾಗಿದೆ. ಅದರಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಅಸ್ವಾಭಾವಿಕ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿದೆ. ಆರೋಪಿ ಅನಂತ ನಾಯ್ಕನನ್ನು ಬಂಧಿಸಿದ ಪೊಲೀಸರು, ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…