ಬೆಳಗಾವಿ: ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಬಜೆಟ್ ನಾಳೆ ಮಂಡನೆಯಾಗಲಿದೆ.
ಈ ಬಜೆಟ್ ಮೇಲೆ ಬೆಳಗಾವಿ ಜಿಲ್ಲೆಯ ರೈತರು ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಬಾರಿಯಾದರೂ ನಮ್ಮ ಬೇಡಿಕೆ ಈಡೇರುತ್ತವೋ ಎಂದು ಆಸೆಗಣ್ಣಿನಿಂದ ಕಾಯುತ್ತಿದ್ದಾರೆ.
ಬೆಳಗಾವಿ ರಾಜ್ಯದ ಎರಡನೇ ಅತೀ ದೊಡ್ಡ ಜಿಲ್ಲೆ. ರಾಜ್ಯದ ಎರಡನೇ ರಾಜಧಾನಿ ಅಂತಾನೂ ಕರೆಸಿಕೊಳ್ಳುತ್ತದೆ. ಇಲ್ಲಿನ ಜನರ ಬಹುತೇಕ ಕಸಬು ಕೃಷಿ. ಜಿಲ್ಲೆಯಲ್ಲಿ ಈ ಹಿಂದೆ ನೆರೆ ಇದೀಗ ಬರದಿಂದ ರೈತರು ನಷ್ಟದ ಸುಳಿಗೆ ಸಿಲುಕಿ ಪರದಾಡುತ್ತಿದ್ದಾರೆ. ಚುನಾವಣೆ ವೇಳೆ ನಾವು ರೈತಪರ ಎಂದು ಹೇಳಿ ಅಧಿಕಾರಕ್ಕೆ ಬರುವ ಪಕ್ಷಗಳು ಗೆದ್ದ ಮೇಲೆ ರೈತರತ್ತ ತಿರುಗಿಯೂ ನೋಡುವುದಿಲ್ಲ ಎಂಬ ಆರೋಪವಿದೆ. ಈಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಈಟಿವಿ ಭಾರತ್ ಜೊತೆಗೆ ಮಾತನಾಡಿರುವ ರೈತರು, ಸರ್ಕಾರಕ್ಕೆ ಹತ್ತು ಹಲವು ಸಲಹೆ, ಬೇಡಿಕೆಗಳನ್ನು ಇರಿಸಿದ್ದಾರೆ.
ಸಪ್ತ ನದಿಗಳು ಹರಿಯುತ್ತಿದ್ದರೂ ಬೆಳಗಾವಿ ಜಿಲ್ಲೆಯಲ್ಲಿ ನೀರಾವರಿ ಸೌಲಭ್ಯ ಕಲ್ಪಿಸಲು ಈವರೆಗೂ ಆಳಿದ ಸರ್ಕಾರಗಳಿಗೆ ಸಾಧ್ಯವಾಗಿಲ್ಲ. ಕಳಸಾ ಬಂಡೂರಿ, ಮಹಾದಾಯಿ ಯೋಜನೆಗೆ ಕೇಂದ್ರದಿಂದ ಡಿಪಿಆರ್ ಆಗಿದ್ದರೂ ಪರಿಸರ ಇಲಾಖೆಯಿಂದ ಅನುಮತಿ ಸಿಕ್ಕಿಲ್ಲ. ಮಲಪ್ರಭಾ ನದಿಯ 11 ಏತ ನೀರಾವರಿ ಯೋಜನೆಗಳು, ಕೃಷ್ಣಾ ನದಿಯ ಮಹಾಲಕ್ಷ್ಮೀ ಏತ ನೀರಾವರಿ ಯೋಜನೆ, ಖಿಳೇಗಾವ ಬಸವೇಶ್ವರ ಏತ ನೀರಾವರಿ ಯೋಜನೆ, ಅಮ್ಮಾಜೇಶ್ವರಿ, ಕೊಟ್ಟಲಗಿ ಹಾಗೂ ಘಟಪ್ರಭಾ ನದಿಯ ಘಟ್ಟಿ ಬಸವೇಶ್ವರ ಏತ ನೀರಾವರಿ ಯೋಜನೆ ಸೇರಿ ಇನ್ನಿತರ ಕಾಮಗಾರಿಗಳನ್ನು ಆರಂಭಿಸಿ, ಪೂರ್ಣಗೊಳಿಸಿ, ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸಬೇಕು ಎಂಬುದು ರೈತರ ಒತ್ತಾಯ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…