ಜನ ಮನದ ನಾಡಿ ಮಿಡಿತ

Advertisement

ಸುಬ್ರಮಣ್ಯ: 10 ದಿನದ ಹಿಂದೆ ಮದುವೆಯಾಗಿದ್ದ ನವವಿವಾಹಿತ ಯುವಕ ಸಿಡಿಲು ಬಡಿದು ಮೃತ್ಯು….!!

ಸುಬ್ರಮಣ್ಯ; 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮ ಸುಂದ‌ರ್ (34) ಮೃತ ದುರ್ದೈವಿ.

ಸಂಜೆ ವೇಳೆ ಮಳೆ ಆರಂಭಕ್ಕೂ ಮೊದಲು ಗುಡುಗು ಸಹಿತ ಗಾಳಿ ಬೀಸುತ್ತಿತ್ತು. ಹಾಗಾಗಿ ಮಳೆ ಬರಬಹುದು ಎಂದು ಸೋಮಸುಂದರ್ ಮನೆಯಂಗಳದಲ್ಲಿ ಒಣಗಿಸಲು ಹಾಕಿದ್ದ ಅಡಿಕೆಯನ್ನು ರಾಶಿ ಮಾಡುತ್ತಿದ್ದರು. ಈ ವೇಳೆ ಸಿಡಿಲು ಬಡಿದಿದೆ.

ಅಸ್ವಸ್ಥಗೊಂಡಿದ್ದ ಅವರನ್ನು ಕೂಡಲೇ ಅವರನ್ನು ಕಡಬ ಸಮುದಾಯ ಆಸ್ಪತ್ರೆಗೆ ಕರೆದೊಯ್ದರೂ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇವರು ಸುಬ್ರಹ್ಮಣ್ಯ ಸಮೀಪ ಕಾರ್ ವಾಷಿಂಗ್ ಉದ್ಯಮ ನಡೆಸಿಕೊಂಡಿದ್ದರು. ಮೃತರು ತಾಯಿ, ತಂಗಿ, ಪತ್ನಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!