ಸುಬ್ರಮಣ್ಯ; 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮ ಸುಂದರ್ (34) ಮೃತ ದುರ್ದೈವಿ.
ಸಂಜೆ ವೇಳೆ ಮಳೆ ಆರಂಭಕ್ಕೂ ಮೊದಲು ಗುಡುಗು ಸಹಿತ ಗಾಳಿ ಬೀಸುತ್ತಿತ್ತು. ಹಾಗಾಗಿ ಮಳೆ ಬರಬಹುದು ಎಂದು ಸೋಮಸುಂದರ್ ಮನೆಯಂಗಳದಲ್ಲಿ ಒಣಗಿಸಲು ಹಾಕಿದ್ದ ಅಡಿಕೆಯನ್ನು ರಾಶಿ ಮಾಡುತ್ತಿದ್ದರು. ಈ ವೇಳೆ ಸಿಡಿಲು ಬಡಿದಿದೆ.
ಅಸ್ವಸ್ಥಗೊಂಡಿದ್ದ ಅವರನ್ನು ಕೂಡಲೇ ಅವರನ್ನು ಕಡಬ ಸಮುದಾಯ ಆಸ್ಪತ್ರೆಗೆ ಕರೆದೊಯ್ದರೂ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇವರು ಸುಬ್ರಹ್ಮಣ್ಯ ಸಮೀಪ ಕಾರ್ ವಾಷಿಂಗ್ ಉದ್ಯಮ ನಡೆಸಿಕೊಂಡಿದ್ದರು. ಮೃತರು ತಾಯಿ, ತಂಗಿ, ಪತ್ನಿಯನ್ನು ಅಗಲಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…