ತೀವ್ರ ಬಿಸಿಲಿನಿಂದ ಕಂಗೆಟ್ಟಿರುವ ದೇಶದ ಹಲವು ರಾಜ್ಯಗಳ ಜನರಿಗೆ ಬಿಗ್ ಬ್ರೆಕ್ ಸಿಗುವ ಮುನ್ಸೂಚನೆ ಸಿಕ್ಕಿದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಹಗುರ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆಯ ಮೂಲಗಳು ತಿಳಿಸಿವೆ. ಅದರಲ್ಲೂ ಬೆಂಗಳೂರಿನಲ್ಲಿ ಗುಡುಗು, ಮಿಂಚಿನ ಜತೆಗೆ ಅಲ್ಲಲ್ಲಿ ಚದುರಿದ ಮಳೆ ಬೀಳುವ ಸಂಭವವಿದೆ. ಮೇ 6 ಮತ್ತು 7 ರಂದು ಸಾಧಾರಣ ಅಥವಾ ಅದಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಿಜಾಪುರ, ಬಾಗಲಕೋಟೆ, ಕೊಪ್ಪಳ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳವರೆಗೆ ಬಿಸಿಗಾಳಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.




