ರಾಜ್ಯ

ಸಂವಿಧಾನಕ್ಕೆ ಅಪಚಾರ ಎಸಗಿದ್ದೇ ಕಾಂಗ್ರೆಸ್: ಮಾಜಿ ಸಚಿವ ಸಿ.ಟಿ.ರವಿ

ಬೆಂಗಳೂರು: ಸಂವಿಧಾನಕ್ಕೆ ಅಪಚಾರ ಎಸಗಿದ್ದೇ ಕಾಂಗ್ರೆಸ್ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಮಾಜಿ ಸಚಿವ ಸಿ.ಟಿ.ರವಿ ಅವರು ಆರೋಪಿಸಿದರು.

ದಾವಣಗೆರೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಸಿಗರನ್ನು ನೋಡುವಾಗ ಕೋತಿ ತಾನು ತಿಂದು ಮೇಕೆ ಬಾಯಿಗೆ ಒರೆಸಿತ್ತು ಎಂಬ ಕಥೆ ನೆನಪಾಗುತ್ತದೆ. ತಾನು ಮಾಡಿದ ಅಪಚಾರವನ್ನೆಲ್ಲ ಬಿಜೆಪಿಯ ತಲೆಗೆ ಕಟ್ಟುವ ವಿಫಲ ಯತ್ನ ಕಾಂಗ್ರೆಸ್ಸಿನದು ಎಂದು ತಿಳಿಸಿದರು.


ದೇಶವನ್ನು ಆರ್ಥಿಕ ದುಸ್ಥಿತಿಯಿಂದ ಸುಸ್ಥಿತಿಗೆ ತಂದು ರಾಷ್ಟ್ರವನ್ನು ಸಂಕಷ್ಟದಿಂದ ಪಾರು ಮಾಡಿದ ನಾಯಕ, ಪ್ರಧಾನಿ ನರೇಂದ್ರ ಮೋದಿಯವರು ಎಂದು ಹೇಳಿದರು. ಕೋವಿಡ್ ಸಂಕಷ್ಟ, ರಷ್ಯಾ- ಉಕ್ರೇನ್ ಯುದ್ಧದ ಸಂಕಷ್ಟ, ಈ ಎಲ್ಲ ಸಂಕಷ್ಟಗಳಿಂದ ಕಾಪಾಡಿ ಭಾರತಕ್ಕೆ ಜಾಗತಿಕ ಗೌರವ ತಂದುಕೊಟ್ಟಿದ್ದಾರೆ. ಭಾರತದ ಒಳಗೆ ಸಾಂಸ್ಕೃತಿಕ ಪುನರುತ್ಥಾನಕ್ಕೆ ಮನ್ನಣೆ ಸಿಗುವಂತೆ ಮಾಡಿದ್ದಾರೆ ಎಂದು ತಿಳಿಸಿದರು.

ಮೋದಿ ಗ್ಯಾರಂಟಿ ಬದುಕನ್ನು ಬದಲಾಯಿಸಿದೆ. ಬೇಡುವ ಸ್ಥಿತಿಯಿಂದ ನೀಡುವ ಸ್ಥಿತಿಗೆ ಒಯ್ಯುವುದೇ ಮೋದಿ ಗ್ಯಾರಂಟಿ. ನಾವು ಸುಧಾರಣೆ, ಸಂರಕ್ಷಣೆ, ಸಮೃದ್ಧಿ ಮತ್ತು ಸಾಂಸ್ಕøತಿಕ ಪುನರುತ್ಥಾನದ ಜೊತೆಗೆ ಅಭಿವೃದ್ಧಿ, ಅಂತ್ಯೋದಯದ ಪರಿಕಲ್ಪನೆಯಲ್ಲಿ ಯೋಜನೆ ರೂಪಿಸಿದ್ದೇವೆ ಎಂದು ತಿಳಿಸಿದರು.

45 ಕೋಟಿ ಬಡವರನ್ನು ಬ್ಯಾಂಕಿಂಗ್ ಜೊತೆ ಒಳಗೊಳ್ಳುವಿಕೆಗೆ ಜನ್ ಧನ್ ಕಾರಣ. ಸ್ವಚ್ಛ ಭಾರತವು ಮನಸ್ಥಿತಿ, ಪರಿಸ್ಥಿತಿಯನ್ನೂ ಬದಲಿಸಿದೆ. 14 ಕೋಟಿ ಬಡವರು ಬಯಲು ಬಹಿರ್ದೆಸೆಯಿಂದ ಮುಕ್ತರಾಗಿ ಶೌಚಾಲಯ ಉಪಯೋಗಿಸಲು ಪ್ರಾರಂಭಿಸಿದರು. ಉಜ್ವಲ ಗ್ಯಾಸ್ ಸಂಪರ್ಕ ಹೊಗೆಮುಕ್ತ ಅಡುಗೆ ಮನೆ ನಿರ್ಮಾಣಕ್ಕೆ ಕಾರಣವಾಯಿತು ಎಂದು ತಿಳಿಸಿದರು. ಜಲ ಜೀವನ್ ಮಿಷನ್ ಯೋಜನೆಯಡಿ 17 ಕೋಟಿ ಮನೆಗಳಿಗೆ ನಳ್ಳಿನೀರಿನ ಸಂಪರ್ಕ ಸಾಧಿಸಿದ್ದೇವೆ ಎಂದರು.

ಬಿಜೆಪಿ 3 ವಿಷಯಗಳನ್ನು ಜನರ ಮುಂದಿಟ್ಟು ಮತ ಯಾಚಿಸುತ್ತಿದೆ ಎಂದು ವಿವರಿಸಿದರು. ನಮ್ಮ ಪಕ್ಷದ ನೀತಿ, ಪಕ್ಷದ ನೇತೃತ್ವ ಮತ್ತು ಎಂಬ ನಮ್ಮ ನಿಯತ್ತನ್ನು ತಿಳಿಸುತ್ತಿದ್ದೇವೆ. ದೇಶ ಮೊದಲು, ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂಬುದು ನಮ್ಮ ನೀತಿ. ಬಡವರಿಗೆ ಬಲ ಕೊಡುವುದು ನಮ್ಮ ನೀತಿ. ಸಂವಿಧಾನದ ಆಶಯವನ್ನು ಆಡಳಿತದಲ್ಲಿ ಅನುಷ್ಠಾನಗೊಳಿಸಿ ಕಟ್ಟಕಡೆಯ ಮನುಷ್ಯನಿಗೆ ತಲುಪಿಸುವುದು ನಮ್ಮ ನೀತಿ ಎಂದು ವಿವರಿಸಿದರು.

ಕರ್ನಾಟಕದಲ್ಲಿ ಬಿಜೆಪಿ- ಜೆಡಿಎಸ್ ಪಕ್ಷಗಳು ಒಟ್ಟಾಗಿ ಸ್ಪರ್ಧೆ ಮಾಡಿವೆ. ಕರ್ನಾಟಕದ 2 ಹಂತದ ಚುನಾವಣೆಗೆ ಪ್ರಧಾನಿಯವರು ಒಟ್ಟು 9 ಸಭೆಗಳನ್ನು ಮತ್ತು ಒಂದು ರೋಡ್ ಷೋ ಸೇರಿ 10 ಪ್ರದೇಶಗಳಿಗೆ ಚುನಾವಣೆ ಸಂಬಂಧ ಪ್ರವಾಸ ಮಾಡಿದ್ದಾರೆ. 92ರ ಹಿರಿಯ ನಾಯಕ, ಮಾಜಿ ಪ್ರಧಾನಿ ದೇವೇಗೌಡ ಅವರು ತಮ್ಮ ಆರೋಗ್ಯ ಮತ್ತು ವಯೋಮಿತಿಯ ನಡುವೆ ಚುನಾವಣಾ ಪ್ರಚಾರದಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಂಡಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಚುನಾವಣಾ ದೃಷ್ಟಿಯಿಂದ 7 ಪ್ರಚಾರಸಭೆಗಳಲ್ಲಿ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು 4 ಪ್ರಚಾರಸಭೆಗಳಲ್ಲಿ ಭಾಗವಹಿಸಿದ್ದರು ಎಂದು ವಿವರಿಸಿದರು.

ಕೇಂದ್ರ ಸಚಿವರಾದ ಸ್ಮ್ರಿತಿ ಇರಾನಿ, ಜೈಶಂಕರ್, ಮೀನಾಕ್ಷಿ ಲೇಖಿ, ನಿರ್ಮಲಾ ಸೀತಾರಾಮನ್, ಅಶ್ವಿನ್ ವೈಷ್ಣವ್ ಅವರು ವಿವಿಧ ರೀತಿಯಲ್ಲಿ ಸಭೆಗಳಲ್ಲಿ ಪಾಲ್ಗೊಂಡಿದ್ದಾರೆ. ಮಹಾರಾಷ್ಟ್ರದ ಸಿಎಂ ಏಕನಾಥ ಶಿಂಧೆ, ಡಿಸಿಎಂ ದೇವೇಂದ್ರ ಫಡ್ನವೀಸ್, ಗೋವಾದ ಸಿಎಂ ಪ್ರಮೋದ್ ಸಾವಂತ್ ಅವರು ಕೂಡ ಕರ್ನಾಟಕದಲ್ಲಿ ಪ್ರಚಾರಸಭೆಯಲ್ಲಿ ಪಾಲ್ಗೊಂಡಿದ್ದರು. ಅಣ್ಣಾಮಲೈ ಸೇರಿ ಬೇರೆಬೇರೆ ರಾಜ್ಯಗಳ ಪ್ರಮುಖರೂ ಭಾಗವಹಿಸಿದ್ದರು ಎಂದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್‌ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್‌ಬ್ರೆಡ್ ಉತ್ಪಾದನಾ ಪರಿಸರ…

4 hours ago

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…

9 hours ago

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…

9 hours ago

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…

2 days ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…

2 days ago

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…

2 days ago