ಕಾರ್ಯಕ್ರಮವೊಂದರಲ್ಲಿ ಹಾಡುತಿದ್ದ ಬಾಲಿವುಡ್ ನ ಖ್ಯಾತ ಗಾಯಕಿ ಮೇಲೆ ಅಭಿಮಾನಿಯೊಬ್ಬ ಬಾಟಲಿ ಎಸೆದ ಘಟನೆ ನಡೆದಿದೆ.
ಸುನಿಧಿ ಚೌಹಾಣ್ ಇತ್ತೀಚಿನ ದಿನಗಳಲ್ಲಿ ಅನೇಕ ಮ್ಯೂಸಿಕ್ ಕಾನ್ಸಾರ್ಟ್ ಗಳನ್ನು ನೀಡುತ್ತಿದ್ದಾರೆ. ಅದೇ ರೀತಿ ಡೆಹ್ರಾಡೋನ್ ನಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಸುನಿಧಿ ಹಾಡುತ್ತಿದ್ದಾಗ ಅವರತ್ತ ಅಭಿಮಾನಿಯೊಬ್ಬ ಪ್ಲ್ಯಾಸ್ಟಿಕ್ ಬಾಟಲಿಯನ್ನು ಎಸೆದಿದ್ದಾನೆ. ಆದರೆ ಇದರಿಂದ ವಿಚಲಿತರಾಗದ ಸುನಿಧಿ, “ಬಾಟಲಿಗಳನ್ನು ಎಸೆಯುವುದರಿಂದ ಏನಾಗುತ್ತದೆ? ಏನೂ ಇಲ್ಲ. ಇದು ಶೋಗೆ ಅಡ್ಡಿ ಆಗುತ್ತದೆ. ನಿಮಗೆ ಅದು ಬೇಕೇ?” ಎಂದು ಕೇಳಿದ್ದಾರೆ. ಇದಕ್ಕೆ ಎಲ್ಲರೂ ಒಟ್ಟಾಗಿ ಒಂದೇ ಧ್ವನಿಯಲ್ಲಿ “ಇಲ್ಲ” ಎಂದು ಹೇಳಿದ್ದಾರೆ.
ಕಾರ್ಯಕ್ರಮದ ನಂತರ ಸುನಿಧಿ ಕಾನ್ಸಾರ್ಟ್ ಹಲವು ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಬಾಲಿವುಡ್ ನಲ್ಲಿ ‘ಶೀಲಾ ಕಿ ಜವಾನಿ’, ‘ಕಮ್ಲಿ’, ‘ಕ್ರೇಜಿ ಕಿಯಾ ರೇ’, ‘ಆಜಾ ನಾಚ್ಲೆ’, ‘ಬೀಡಿ, ‘ದೇಸಿ ಗರ್ಲ್’, ‘ಧೂಮ್ ಮಚಾಲೆ’, ಹೀಗೆ ಹತ್ತಾರು ಸೂಪರ್ ಹಿಟ್ ಹಾಡುಗಳಿಗೆ ಸುನಿಧಿಯವರ ಧ್ವನಿ ಸುಮಧುರವಾಗಿ ಮೂಡಿಬಂದಿದೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…