ತಮಿಳುನಾಡಿನ ತಿರುಚಿರಾಪಳ್ಳಿ ಜಿಲ್ಲೆಯ ಉರೈಯೂರಿನಲ್ಲಿರುವ ಸಬ್ ರಿಜಿಸ್ಟ್ರಾರ್ ಕಚೇರಿ ಮತ್ತು ತಿರುವಳ್ಳೂರು ಜಿಲ್ಲೆಯ ರೆಡ್‌ಹಿಲ್ಸ್‌ನಲ್ಲಿರುವ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಅಘೋಷಿತ 3 ಸಾವಿರ ಕೋಟಿ ರೂಪಾಯಿ ಮೌಲ್ಯದ ಆಸ್ತಿ ವಹಿವಾಟು ಪತ್ತೆ ಹಚ್ಚಲಾಗಿದೆ.
ಚೆ
ನ್ನೈ (ತಮಿಳುನಾಡು): ತಮಿಳುನಾಡಿನ ಎರಡು ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಕಳೆದ ಐದು ವರ್ಷಗಳಲ್ಲಿ ನಡೆದಿರುವ 3 ಸಾವಿರ ಕೋಟಿ ರೂಪಾಯಿ ಮೌಲ್ಯದ ಆಸ್ತಿ ವಹಿವಾಟುಗಳ ಬಹಿರಂಗಪಡಿಸದಿರುವುದನ್ನು ಆದಾಯ ತೆರಿಗೆ ಇಲಾಖೆ ಪತ್ತೆ ಹಚ್ಚಿದೆ. ತಿರುಚಿರಾಪಳ್ಳಿ ಜಿಲ್ಲೆಯ ಉರೈಯೂರಿನಲ್ಲಿರುವ ಸಬ್ ರಿಜಿಸ್ಟ್ರಾರ್ ಕಚೇರಿ ಮತ್ತು ತಿರುವಳ್ಳೂರು ಜಿಲ್ಲೆಯ ರೆಡ್‌ಹಿಲ್ಸ್‌ನಲ್ಲಿರುವ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಈ ವಹಿವಾಟು ಪತ್ತೆ ಮಾಡಲಾಗಿದೆ.
ಉರೈಯೂರು ಹಾಗೂ ರೆಡ್‌ಹಿಲ್ಸ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆಯ ತಮಿಳುನಾಡು ನಿರ್ದೇಶನಾಲಯದ ಗುಪ್ತಚರ ಮತ್ತು ಅಪರಾಧ ತನಿಖಾ ವಿಭಾಗದ ಅಧಿಕಾರಿಗಳು ದಾಳಿ ನಡೆಸಿ, ಮಂಗಳವಾರ ಮತ್ತು ಬುಧವಾರ ಎರಡು ದಿನಗಳ ಕಾಲ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. 20 ಕ್ಕೂ ಹೆಚ್ಚು ಆದಾಯ ತೆರಿಗೆ ಅಧಿಕಾರಿಗಳು ಮತ್ತು ಎಂಟು ಶಸ್ತ್ರಸಜ್ಜಿತ ಪೊಲೀಸ್ ಸಿಬ್ಬಂದಿ 20 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.



