ಜನ ಮನದ ನಾಡಿ ಮಿಡಿತ

Advertisement

ತಮಿಳುನಾಡಿನ 2 ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಅಘೋಷಿತ ₹ 3 ಸಾವಿರ ಕೋಟಿ ಮೌಲ್ಯದ ಆಸ್ತಿ ವಹಿವಾಟು ಪತ್ತೆ

ತಮಿಳುನಾಡಿನ ತಿರುಚಿರಾಪಳ್ಳಿ ಜಿಲ್ಲೆಯ ಉರೈಯೂರಿನಲ್ಲಿರುವ ಸಬ್ ರಿಜಿಸ್ಟ್ರಾರ್ ಕಚೇರಿ ಮತ್ತು ತಿರುವಳ್ಳೂರು ಜಿಲ್ಲೆಯ ರೆಡ್‌ಹಿಲ್ಸ್‌ನಲ್ಲಿರುವ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಅಘೋಷಿತ 3 ಸಾವಿರ ಕೋಟಿ ರೂಪಾಯಿ ಮೌಲ್ಯದ ಆಸ್ತಿ ವಹಿವಾಟು ಪತ್ತೆ ಹಚ್ಚಲಾಗಿದೆ.

ಚೆ

ನ್ನೈ (ತಮಿಳುನಾಡು): ತಮಿಳುನಾಡಿನ ಎರಡು ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಕಳೆದ ಐದು ವರ್ಷಗಳಲ್ಲಿ ನಡೆದಿರುವ 3 ಸಾವಿರ ಕೋಟಿ ರೂಪಾಯಿ ಮೌಲ್ಯದ ಆಸ್ತಿ ವಹಿವಾಟುಗಳ ಬಹಿರಂಗಪಡಿಸದಿರುವುದನ್ನು ಆದಾಯ ತೆರಿಗೆ ಇಲಾಖೆ ಪತ್ತೆ ಹಚ್ಚಿದೆ. ತಿರುಚಿರಾಪಳ್ಳಿ ಜಿಲ್ಲೆಯ ಉರೈಯೂರಿನಲ್ಲಿರುವ ಸಬ್ ರಿಜಿಸ್ಟ್ರಾರ್ ಕಚೇರಿ ಮತ್ತು ತಿರುವಳ್ಳೂರು ಜಿಲ್ಲೆಯ ರೆಡ್‌ಹಿಲ್ಸ್‌ನಲ್ಲಿರುವ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಈ ವಹಿವಾಟು ಪತ್ತೆ ಮಾಡಲಾಗಿದೆ.

ಉರೈಯೂರು ಹಾಗೂ ರೆಡ್‌ಹಿಲ್ಸ್‌ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆಯ ತಮಿಳುನಾಡು ನಿರ್ದೇಶನಾಲಯದ ಗುಪ್ತಚರ ಮತ್ತು ಅಪರಾಧ ತನಿಖಾ ವಿಭಾಗದ ಅಧಿಕಾರಿಗಳು ದಾಳಿ ನಡೆಸಿ, ಮಂಗಳವಾರ ಮತ್ತು ಬುಧವಾರ ಎರಡು ದಿನಗಳ ಕಾಲ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. 20 ಕ್ಕೂ ಹೆಚ್ಚು ಆದಾಯ ತೆರಿಗೆ ಅಧಿಕಾರಿಗಳು ಮತ್ತು ಎಂಟು ಶಸ್ತ್ರಸಜ್ಜಿತ ಪೊಲೀಸ್ ಸಿಬ್ಬಂದಿ 20 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಕ್ಲಸ್ಟರ್ ಕಿಚನ್ ವಿರೋಧಿಸಿ ಉಳ್ಳಾಲದಲ್ಲಿ ಬಿಸಿಯೂಟ ನೌಕರರ ಪ್ರತಿಭಟನೆ

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಕಬ್ಬಿಣದ ಕಮಾನು ಮರುಜೋಡಣೆ

ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಡಳಿತ ಭಾಷೆಯಾಗಿ ತುಳುವಿಗೆ ಮಾನ್ಯತೆ

ಮಂಗಳೂರು: ಬಂಟ್ವಾಳದಲ್ಲಿ ಅಬಕಾರಿ ದಾಳಿ: 20.37 ಲಕ್ಷ ಮೌಲ್ಯದ ಗೋವಾ ಮದ್ಯ ಜಪ್ತಿ

ಮಂಜೇಶ್ವರ: ಮಂಜೇಶ್ವರದ ಪೊಸೋಟ್ ಮಖಾಂನಲ್ಲಿ ಕಳ್ಳತನ: 50 ಸಾವಿರ ರೂ. ನಗದು ದೋಚಿದ ಕಳ್ಳರು

ಪುತ್ತೂರು: ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ವಿಜೃಂಭಣೆಯ ಕಾರ್ತಿಕ ದೀಪೋತ್ಸವ

ಬಂಟ್ವಾಳ: ಬಂಟ್ವಾಳದಲ್ಲಿ ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಜಾಗೃತಿ ಕಾರ್ಯಕ್ರಮ

ಉಡುಪಿ: ಶ್ರೀಕೃಷ್ಣ ಮಠಕ್ಕೆ ವಿಧಾನಪರಿಷತ್ ಉಪಸಭಾಪತಿ ಉಮಾಶ್ರೀ ಭೇಟಿ

ಉಡುಪಿ: ಶಿರೂರಿನಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಸಾವು

error: Content is protected !!