ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಪರಶುರಾಮ ಪ್ರತಿಮೆಯ ಉಳಿದ ಅರ್ಧಭಾಗ ತೆರವುಗೊಳಿಸುವ ಮೂಲಕ ಕೊನೆಯ ಸಾಕ್ಷ್ಯ ನಾಶ

ಉಡುಪಿ: ಬೈಲೂರಿನ ಉಮಿಕ್ಕಲ್ ಬೆಟ್ಟದಲ್ಲಿ ನಿರ್ಮಾಣಗೊಂಡ ಪರಶುರಾಮ ಪ್ರತಿಮೆಯ ಉಳಿದ ಕಂಚಿನ ಅರ್ಧ ಭಾಗವನ್ನು ತೆರವು ಮಾಡುವ ಪ್ರಯತ್ನ ನಡೆದಿದ್ದು, ಆ ಮೂಲಕ ಹಗರಣಕ್ಕೆ ಸಾಕ್ಷಿಯಾಗಿದ್ದ ಕೊನೆಯ ಸಾಕ್ಷ್ಯವನ್ನು ನಾಶ ಮಾಡುವ ಪ್ರಯತ್ನ ಇದಾಗಿದೆ ಎಂದು ಕಾಂಗ್ರೆಸ್ ಮುಖಂಡ ಮುನಿಯಾಲು ಉದಯಕುಮಾರ್ ಶೆಟ್ಟಿ ಆರೋಪಿಸಿದ್ದಾರೆ.


ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಶುರಾಮ ಥೀಮ್ ಪಾರ್ಕ್ ಯೋಜನೆಯ ಕಾಮಗಾರಿಯಲ್ಲಿ ಭಾರೀ ಅವ್ಯವಹಾರ ನಡೆದಿದ್ದು, ಕಂಚಿನ ಪ್ರತಿಮೆಯ ಬದಲಿಗೆ ನಕಲಿ ಮೂರ್ತಿ ನಿರ್ಮಿಸಲಾಗಿದೆ. ಕಾರ್ಕಳದ ಶಾಸಕರು ಪರಶುರಾಮನ ನಕಲಿ ಮೂರ್ತಿ ನಿರ್ಮಿಸಿ ಜನರ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ. ಅದಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಬೈಲೂರಿನಲ್ಲಿ ಸುಸಜ್ಜಿತವಾದ ಥೀಮ್ ಪಾರ್ಕ್‌ನ ನಿರ್ಮಾಣವಾಗಬೇಕು. ಪರಶುರಾಮನ ಕಂಚಿನ ಪ್ರತಿಮೆ ಪ್ರತಿಷ್ಠಾಪನೆಗೊಳ್ಳಬೇಕು. ಆದರೆ ಇದಕ್ಕಾಗಿ ಈಗ ಮೂರ್ತಿಯ ನಿರ್ಮಾಣ ಗುತ್ತಿಗೆ ಪಡೆದಿರುವ ಶಿಲ್ಪಿ ಕೃಷ್ಣ ನಾಯಕ್ ಹಾಗೂ ಥೀಮ್ ಪಾರ್ಕ್ ನಿರ್ಮಾಣದ ಗುತ್ತಿಗೆ ಪಡೆದಿರುವ ನಿರ್ಮಿತಿ ಕೇಂದ್ರವನ್ನು ಬದಲಿಸಬೇಕು ಎಂದು ತಾವು ರಾಜ್ಯ ಸರಕಾರವನ್ನು ಒತ್ತಾಯಿಸುತ್ತೇವೆ. ರಾಜ್ಯದ ಅನೇಕ ಕಡೆಗಳಲ್ಲಿರುವ ಕೆಂಪೇಗೌಡ, ಶಿವಾಜಿ, ರಾಣಿ ಚೆನ್ನಮ್ಮ, ಮೈಸೂರು ಒಡೆಯರ್ ಮುಂತಾದವರ ಪ್ರತಿಮೆ ನಿರ್ಮಿಸಿದವರಿಂದ ಪರಶುರಾಮನ ಮೂರ್ತಿ ನಿರ್ಮಿಸಲಿ ಎಂದು ಅವರು ಆಗ್ರಪಡಿಸಿದರು.
ಕಾರ್ಕಳದಲ್ಲಿ ಸುನಿಲ್ ಕುಮಾರ್ ಅವರ ಸರಕಾರ ಅಧಿಕಾರದಲ್ಲಿದೆ. ಜನರಲ್ಲಿ ಕಂಚನ್ನು ಬೇಡಿಯಾದರೂ ಮೂರ್ತಿ ರಚಿಸಿ ಪ್ರತಿಷ್ಠಾಸುವುದಾಗಿ ಸುನಿಲ್ ಹೇಳಿದ್ದಾರೆ. ಹಾಗಾದರೂ ಮಾಡಿ ಮೂರ್ತಿ ನಿರ್ಮಿಸಿ ಪುಣ್ಯವನ್ನು ನೀವೆ ಇಟ್ಟುಕೊಳ್ಳಿ ಎಂದು ವ್ಯಂಗ್ಯವಾಡಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕರಾದ ರಮೇಶ್ ಕಾಂಚನ್, ಕೃಷ್ಣಮೂರ್ತಿ ಆಚಾರ್ಯ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!