ಬಂಟ್ವಾಳ: ನೀರಿನ ಸಮಸ್ಯೆಯಿಂದ ಕೃಷಿ ನಾಶವಾಗಿದ್ದು, ಮನನೊಂದ ಕೃಷಿಕನೋರ್ವ ಕುಡಿಯಲು ನೀರು ಸೇದುವ ಬಾವಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮುಂಜಾವಿನ ವೇಳೆ ನಡೆದಿದೆ.
ಪುತ್ತೂರು ಕೆದಂಬಾಡಿ ಗ್ರಾಮದ ಮಿತ್ರಂಪಾಡಿ ನಿವಾಸಿ ಭಾಸ್ಕರ್ ರೈ ( 53) ಆತ್ಮಹತ್ಯೆ ಮಾಡಿದ ವ್ಯಕ್ತಿ.
ಭಾಸ್ಕರ್ ರೈ ಅವರು ಪುದು ಗ್ರಾಮದ ಪೆಲಪಾಡಿ ಎಂಬಲ್ಲಿ ಪತ್ನಿಯ ತಮ್ಮನ ಮನೆಯ ಬಾವಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ ಕಾರಣವೇನು*….
ಭಾಸ್ಕರ್ ರೈ ಅವರು ಪುತ್ತೂರಿನ ಕೆದಂಬಾಡಿ ಗ್ರಾಮದಲ್ಲಿ ವಾಸವಾಗಿದ್ದು, ಬಂಟ್ವಾಳ ತಾಲೂಕಿನ ಪುದು ಗ್ರಾಮದ ಪೆಲಪಾಡಿಯಿಂದ ಮದುವೆಯಾಗಿದ್ದರು.
ಕೃಷಿಯನ್ನು ನಂಬಿ ಬದುಕುತ್ತಿದ್ದ ಇವರಿಗೆ ಇತ್ತೀಚಿನ ದಿನಗಳಲ್ಲಿ ಕೃಷಿಗೆ ನೀರಿನ ಸಮಸ್ಯೆ ಉಂಟಾಗಿ,ಕೃಷಿಗೆ ಹಾನಿಯಾಗಿತ್ತು.
ಕೃಷಿಯೇ ಮೂಲಾಧಾರವಾಗಿದ್ದ ಇವರಿಗೆ ನೀರಿನ ಸಮಸ್ಯೆಯಿಂದ ಕೃಷಿ ಹಾಳಾದ ಕಾರಣ ಮನನೊಂದಿದ್ದರು.
ಇದರಿಂದ ನಿದ್ರಾಹೀನತೆಗೆ ಒಳಗಾಗಿದ್ದರು.
ಇದೇ ಕಾರಣದಿಂದ ಪತ್ನಿಯ ತಮ್ಮನ ಮನೆ ಪುದುವಿಗೆ ಬಂದಿದ್ದರು. ಅಲ್ಲಿಂದ ನಿದ್ರಾಹೀನತೆ ಸಮಸ್ಯೆಗೆ ಪರಿಹಾರಕ್ಕಾಗಿ ಮಂಗಳೂರಿನ ವೈದ್ಯರ ಬಳಿಗೆ ಚಿಕಿತ್ಸೆಗೆ ತೆರಳಿ ವಾಪಾಸು ಬಾವನ ಮನೆಯಲ್ಲಿ ಉಳಿದುಕೊಂಡಿದ್ದರು.
ರಾತ್ರಿ ಊಟ ಮಾಡಿ ಹಾಲ್ ನಲ್ಲಿ ಮಲಗಿದ್ದು, ಮಧ್ಯ ರಾತ್ರಿ ಇವರು ಮಲಗಿದ್ದಲ್ಲಿ ಇಲ್ಲದೆ ಕಾಣೆಯಾಗಿದ್ದು ಮನೆಯವರು ಹುಡುಕಾಡಿದಾಗ ಮನೆಯ ಪಕ್ಕದ ಬಾವಿಯಲ್ಲಿ ನೀರು ಎಳೆಯಲು ಹಾಕಿರುವ ರಾಟೆಯ ಕಬ್ಬಿಣದ ಕೊಂಡಿಗೆ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ತಮ್ಮಶುಭಕರ ರೈ ದೂರಿನಲ್ಲಿ ತಿಳಿಸಿದ್ದಾರೆ.
ಕೃಷಿ ಹಾನಿಯ ಬಗ್ಗೆ ಚಿಂತೆಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ಬಂಟ್ವಾಳ ಗ್ರಾಮಾಂತರ ಪೋಲೀಸರು ಪ್ರಕರಣ ದಾಖಲಿಸಿದ್ದಾರೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…