ಜನ ಮನದ ನಾಡಿ ಮಿಡಿತ

Advertisement

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್ ವಿತರಿಸಲು ఎటివిఎం ಪಾಲಕ್ಕಾಡ್ ವಿಭಾಗ ಯೋಜನೆ: ಸಹಾಯಕರ ನಿಯೋಜನೆಗೆ ಸಿದ್ಧತೆ

ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಕಾದಿರಿಸದ ಟಿಕೆಟ್‌ಗಳನ್ನು ಸ್ವಯಂಚಾಲಿತ 43883 ಯಂತ್ರ(ಎಟಿವಿಎಂ) ಅಳವಡಿಸಲಾಗಿದೆ. ಇದರಲ್ಲಿ ಈ ಹಿಂದೆಸಹಾಯಕರನ್ನು ನಿಯೋಜಿಸಿ ಟಿಕೆಟ್‌ಗಳನ್ನು ವಿತರಿಸಲಾಗು ತ್ತಿದ್ದರೂ ಕೋವಿಡ್ ಅವಧಿಯಲ್ಲಿ ಈ ಸೇವೆ ರದ್ದುಗೊಂಡಿತ್ತು.

ಕಷ್ಟವಾಗಿರುವುದರಿಂದ ಬಹುತೇಕ ಮಂದಿ ಕೌಂಟರ್‌ಗಳಿಂದಲೇ ಪಡೆದು ಪ್ರಯಾಣಿಸುತ್ತಿದ್ದಾರೆ. ಇದೀಗ ದಕ್ಷಿಣ ರೈಲ್ವೇಯ ಪಾಲಕ್ಕಾಡ್ ವಿಭಾಗ ಈ ಯಂತ್ರದ ಗರಿಷ್ಠ ಪ್ರಮಾಣದಲ್ಲಿ ಬಳಕೆಯಾಗಬೇಕು ಎನ್ನುವ ಉದ್ದೇಶದಿಂದ ಸಹಾಯಕರನ್ನು ನಿಯೋಜಿಸಿ ಟಿಕೆಟ್ ವಿತರಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಿದೆ. ಅದರಂತೆ ಮೊದಲ ಹಂತದಲ್ಲಿ ಎಟಿವಿಎಂ ಇರುವ ಮಂಗಳೂರು ಸೆಂಟ್ರಲ್, ಮಂಗಳೂರು ಜಂಕ್ಷನ್ ಮತ್ತು ಕಾಸರಗೋಡು ಸಹಿತ ವಿಭಾಗ ವ್ಯಾಪ್ತಿಗೆ 300 ಸಹಾಯಕರನ್ನು ನಿಯೋಜಿಸಲು ಮುಂದಾಗಿದೆ.

ಪ್ರತಿದಿನ ಮಂಗಳೂರು ಸೆಂಟ್ರಲ್ ನಿಲ್ದಾಣದಲ್ಲಿ 8 ಲಕ್ಷ ರೂ. ಮತ್ತು ಮಂಗಳೂರು ಜಂಕ್ಷನ್ ನಿಲ್ದಾಣದಲ್ಲಿ 2 ಲಕ್ಷ ರೂ. ಮೌಲ್ಯದ ಕಾದಿರಿಸದ ಟಿಕೆಟ್ ವಿತರಣೆ ಆಗುತ್ತಿದೆ. ಇನ್ನು ಮುಂದೆ ಇದನ್ನು ಸಂಪೂರ್ಣವಾಗಿ ಎಟಿವಿಎಂ ಮೂಲಕವೇ ವಿತರಿಸುವುದು ಇಲಾಖೆಯ ಗುರಿ. ಮಂಗಳೂರು ಸೆಂಟ್ರಲ್‌ಗೆ 21 ಮತ್ತು ಜಂಕ್ಷನ್‌ಗೆ 9 ಸಿಬಂದಿ ನಿಯೋಜಿಸಲು ಉದ್ದೇಶಿಸಲಾಗಿದ್ದು, ದಿನದ 24 ಗಂಟೆಯೂ ಪ್ರಯಾಣಿಕರಿಗೆ ಈ ಸೇವೆ ದೊರೆಯಲಿದೆ.

ಒಂದು ವರ್ಷದ ಒಪ್ಪಂದದ ಆಧಾರದಲ್ಲಿ ಸಹಾಯಕರ ನೇಮಕಾತಿ ನಡೆಯಲಿದ್ದು, ಇವರು ರೈಲ್ವೇ ಇಲಾಖೆಯ ನೌಕರರಲ್ಲ. ಟಿಕೆಟ್ ಮಾರಾಟದ ಮೇಲಿನ ಕಮಿಷನ್ ಆಧಾರದಲ್ಲಿ ಈ ಸಹಾಯಕರ ಆದಾಯ ಪಡೆಯಲಿದ್ದಾರೆ. ಇದಕ್ಕಾಗಿ ರೈಲ್ವೇ ಅರ್ಜಿ ಆಹ್ವಾನಿಸಿದ್ದು, http://www.sr.indianrailways.gov.in ನಲ್ಲಿ ಅರ್ಜಿ ನಮೂನೆಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. 18 ವರ್ಷ ಮೇಲ್ಪಟ್ಟ ಎಸೆಸೆಲ್ಸಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದಾಗಿದ್ದು, ಮೇ 24 ಕೊನೇ ದಿನಾಂಕ ಎಂದು ರೈಲ್ವೇ ಇಲಾಖೆ ತಿಳಿಸಿದೆ.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!