ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಬಿತ್ತುಲ್ ಪ್ರದೇಶದಲ್ಲಿ ಮಳೆ ನೀರು ಹರಿಯುವ ತೋಡಿನಲ್ಲಿ ಕೊಳಚೆ ನೀರು ಹರಿದು ಬರುತ್ತಿದ್ದು ಸ್ಥಳೀಯ ಪರಿಸರದಲ್ಲಿ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ.
ಕಿನ್ನಿಗೋಳಿ ಪೇಟೆಯ ಅಂಗಡಿ ಪ್ಲ್ಯಾಟ್ ಗಳು ಹೋಟೆಲ್ ಬಾರ್ ಗಳ ಕಕ್ಕಾಸು ತ್ಯಾಜ್ಯ ನೀರು, ಡ್ರೈನೇಜ್ ನೀರನ್ನು ಸಂಸ್ಕರಿಸದೆ, ಮಳೆ ನೀರು ಹಾದು ಹೋಗುವ ಒಳಚರಂಡಿಗೆ ಬಿಡಲಾಗುತ್ತಿದೆ.
ಮಳೆ ನೀರು ಹಾದುಹೋಗುವ ತೋಡಿನಲ್ಲಿ ಈ ತ್ಯಾಜ್ಯ ನೀರು ಹರಿದು ಹೋಗುತ್ತಿದ್ದು, ಸುಮಾರು ಎರಡು ಕಿಲೋಮೀಟರ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಬಾವಿಗಳಿಗೆ ಈ ಕೊಳಚೆ ನೀರು ಸೇರುತ್ತಿದೆ, ಹಲವಾರು ಸಮಯದಿಂದ ಇಲ್ಲಿ ಕೊಳಚೆ ಕಕ್ಕಾಸು ತ್ಯಾಜ್ಯ ನೀರು ಹರಿಯುತ್ತಿದ್ದರೂ, ಈ ಬಗ್ಗೆ ಮನವಿ ಸಲ್ಲಿಸಿದರೂ ಯಾವುದೇ ರೀತಿಯ ಪೂರಕ ಸ್ಪಂದನೆ ಸಿಕ್ಕಿಲ್ಲ ಎನ್ನುತ್ತಾರೆ ಸ್ಥಳೀಯರು, ಈ ಸಮಸ್ಯೆಯನ್ನ ಸರಿಯಾದ ಅಧಿಕಾರಿಗಳ ನೇತೃತ್ವದಲ್ಲಿ ಪರಿಶೀಲನೆ ನಡೆಸಿ ಮುಕ್ತಿ ಕಾಣಿಸದೆ ಇರುವುದು ಸ್ಥಳೀಯ ಆಡಳಿತದ ಕಾರ್ಯವೈಖರಿಯನ್ನ ಅಣಕಿಸುವಂತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಕೂಡಲೇ ಗಮನ ಹರಿಸಿ ಸಮಸ್ಯೆಗೆ ಮುಕ್ತಿ ಕಾಣಿಸಬೇಕು, ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಸ್ಥಳೀಯರು ರೋಗರುಜಿನಗಳಿಂದ ಬಳಲುವಂತಾಗಬಹುದು. ಈ ನಿಟ್ಟಿನಲ್ಲಿ ಅರೋಗ್ಯ ಇಲಾಖೆಯವರು ಗಮನಹರಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಅನಿವಾಸಿ ಭಾರತೀಯ ಉದ್ಯಮಿ, ಸಮಾಜ ಸೇವಕ ಝಕರಿಯಾ ಜೋಕಟ್ಟೆ ಅವರಿಗೆ ಹೊರನಾಡ ಕನ್ನಡಿಗ ವಿಭಾಗದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ…
ಪಾಣೆಮಂಗಳೂರು ಹಳೆ ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆಯಾಗಿದೆ. ಪಾಣೆಮಂಗಳೂರು ಹಳೆ ಸೇತುವೆಯ ಬಳಿ ಇಲೆಕ್ಟಿಕ್ ಆಟೋ…
ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಹಲವಾರು ಮಂದಿಯಿಂದ ಕೋಟ್ಯಾಂತರ ಹಣ ಪಡೆದು ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ದಂಪತಿಯನ್ನು ಕಾವೂರು…
ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುತ್ತಿದ್ದ ಮದುವೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ಮದುವೆಯ ವಾಹನವೊಂದು ಬಿಸಿಲೆ ಘಾಟ್ ರಸ್ತೆಯ ತಿರುವಿನಲ್ಲಿ ಪಲ್ಟಿಯಾಗಿ ವಾಹನದಲ್ಲಿದ್ದ 20ಕ್ಕೂ…
ವಿದ್ಯುತ್ ತಂತಿ ಸ್ಪರ್ಶಿಸಿ ತಾಯಿ, ಮಗ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರಿನಲ್ಲಿ ನಡೆದಿದೆ. ಹುಣಸೂರು ತಾಲೂಕಿನ ಎಮ್ಮೆ ಕೊಪ್ಪಲು…
ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತದ ಬಂಟ್ವಾಳ ನಂ.1 ಮತ್ತು ನಂ 2 ಉಪವಿಭಾಗ ವ್ಯಾಪ್ತಿಯ ಜನಸಂಪರ್ಕ ಸಭೆ ಬಿ.ಸಿ.ರೋಡ್‌ನಲ್ಲಿರುವ…