ಅಹಮದಾಬಾದ್ : ಮೋದಿ ಉಪನಾಮೆಯ ಕುರಿತ ವಿವಾದಿತ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ದಾಖಲಿಸಲಾದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ, ತಮಗೆ ಶಿಕ್ಷೆ ವಿಧಿಸುವುದನ್ನು ತಡೆಯುವಂತೆ ಕೋರಿ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿಯ ಕುರಿತು ಇಂದು ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ನೀಡಲಿದೆ.ಗುರುವಾರ ಹೈಕೋರ್ಟ್ ನೀಡಿದ ಮಾಹಿತಿ ಪ್ರಕಾರ, ನ್ಯಾಯಮೂರ್ತಿ ಹೇಮಂತ್ ಪ್ರಚ್ಚಕ್ ನೇತೃತ್ವದ ಪೀಠವು ಇಂದು ಬೆಳಗ್ಗೆ11:00 ಗಂಟೆಗೆ ತೀರ್ಪು ಪ್ರಕಟಿಸಲಿದೆ. ಈ ಹಿಂದೆ ರಾಹುಲ್ ಅವರಿಗೆ ಪ್ರಕರಣದಲ್ಲಿ ಮಧ್ಯಂತರ ರಕ್ಷಣೆ ನೀಡಲು ನಿರಾಕರಿಸಿದ್ದ ನ್ಯಾಯಾಲಯ, ಅವರ ಅರ್ಜಿಯನ್ನು ಪರಿಶೀಲನೆಗಾಗಿ ಕಾಯ್ದಿರಿಸಿತ್ತು. ಇದೀಗ, ರಾಹುಲ್ ಗಾಂಧಿ ಅವರ ಅಪರಾಧ ನಿರ್ಣಯಕ್ಕೆ ನ್ಯಾಯಾಲಯವು ತಡೆಯಾಜ್ಞೆ ನೀಡಿದರೆ, ಲೋಕಸಭೆ ಸದಸ್ಯತ್ವದಿಂದ ಅವರ ಅನರ್ಹತೆಯನ್ನು ರದ್ದುಗೊಳಿಸಬಹುದು. ಒಂದು ವೇಳೆ ಅಮಾನತಿಗೆ ತಡೆ ನೀಡದಿದ್ದರೆ, ರಾಹುಲ್ ಗಾಂಧಿ ಅವರು ಗುಜರಾತ್ ಹೈಕೋರ್ಟ್‌ನ ಉನ್ನತ ಪೀಠದ ಮುಂದೆ ಮೇಲ್ಮನವಿ ಸಲ್ಲಿಸುವ ಆಯ್ಕೆ ಹೊಂದಿರುತ್ತಾರೆ.ಕಳೆದ ಮೇ ತಿಂಗಳಲ್ಲಿ ರಾಹುಲ್ ಗಾಂಧಿಯವರ ಮನವಿ ಆಲಿಸುವಾಗ ನ್ಯಾ. ಪ್ರಚ್ಚಕ್, ಬೇಸಿಗೆ ರಜೆಯ ನಂತರ ಅಂತಿಮ ಆದೇಶವನ್ನು ನೀಡುವುದಾಗಿ ಹೇಳಿ ಯಾವುದೇ ಮಧ್ಯಂತರ ರಕ್ಷಣೆ ನೀಡಲು ನಿರಾಕರಿಸಿದ್ದರು. ಭಾರತೀಯ ಜನತಾ ಪಕ್ಷದ ಶಾಸಕ ಪೂರ್ಣೇಶ್ ಮೋದಿ ಅವರು 2019ರಲ್ಲಿ ಸಲ್ಲಿಸಿದ್ದ ಪ್ರಕರಣದಲ್ಲಿ ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 499 ಮತ್ತು 500 (ಕ್ರಿಮಿನಲ್ ಮಾನನಷ್ಟ) ಅಡಿಯಲ್ಲಿ ದೋಷಾರೋಪಣೆ ಮಾಡಿದ ನಂತರ ಸೂರತ್‌ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ಗೆ ಮಾರ್ಚ್ 23ರಂದು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.
ಈ ತೀರ್ಪಿನ ನಂತರ ಕೇರಳದ ವಯನಾಡಿನಿಂದ ಲೋಕಸಭೆಗೆ ಚುನಾಯಿತರಾದ ರಾಹುಲ್ ಗಾಂಧಿ ಅವರನ್ನು ಪ್ರಜಾಪ್ರತಿನಿಧಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ಹೊರಡಿಸಲಾಗಿತ್ತು. ಈ ಆದೇಶ ಪ್ರಶ್ನಿಸಿದ ರಾಹುಲ್, ಸೂರತ್‌ನ ಸೆಷನ್ಸ್ ನ್ಯಾಯಾಲಯದಲ್ಲಿ ಶಿಕ್ಷೆಗೆ ತಡೆ ಕೋರಿ ಅರ್ಜಿ ಸಲ್ಲಿಸಿದ್ದರು. ಏಪ್ರಿಲ್ 20ರಂದು ಜಾಮೀನು ನೀಡುವಾಗ ನ್ಯಾಯಾಲಯವು ಶಿಕ್ಷೆಗೆ ತಡೆ ನೀಡಲು ನಿರಾಕರಿಸಿತ್ತು.ಪ್ರಕರಣದ ಹಿನ್ನೆಲೆ : ಏಪ್ರಿಲ್ 13, 2019ರಲ್ಲಿ ಕರ್ನಾಟಕದ ಕೋಲಾರದಲ್ಲಿ ಚುನಾವಣಾ ರ‍್ಯಾಲಿಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೋದಿ ಉಪನಾಮೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. “ಎಲ್ಲ ಕಳ್ಳರು ಮೋದಿ ಎಂಬ ಸಾಮಾನ್ಯ ಉಪನಾಮೆ ಹೊಂದಿದ್ದಾರೆ” ಎಂದು ಆರೋಪಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಸೂರತ್ ಪಶ್ಚಿಮ ಕ್ಷೇತ್ರದ ಶಾಸಕ ಪೂರ್ಣೇಶ್ ಮೋದಿ ಅವರು ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…