ಮಂಗಳೂರು, ಮೇ.9;ಉತ್ತಮ ಸಮಾಜದ ನಿರ್ಮಾಣದ ಶಕ್ತಿ ಮಾಧ್ಯಮ ಗಳಿಗಿದೆ. ಮುಖ್ಯವಾಗಿ ಯುವಜನರಲ್ಲಿ ಶೈಕ್ಷಣಿಕ ಜಾಗೃತಿ ಮೂಡಿಸಬೇಕಾಗಿದೆ ಎಂದು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಲ್.ಧರ್ಮ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾಭವನದಲ್ಲಿ ಗುರುವಾರ ಹಮ್ಮಿಕೊಂಡ ಪ.ಗೋ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೆ.ಎಂ. ಇಸ್ಮಾಯಿಲ್ ಕಂಡ ಕರೆಯವರಿಗೆ ಪ.ಗೋ ಪ್ರಶಸ್ತಿ ವಿತರಿಸಿ ಮಾತನಾಡುತ್ತಿದ್ದರು.
ಮಾಧ್ಯಮ ಗಳು ಪರಂಪರೆಯ ಕೊಂಡಿ ಯಾಗಿ ಉತ್ತಮ ಭವಿಷ್ಯ ರೂಪಿಸುವಲ್ಲಿ ಕಾರ್ಯ ನಿರ್ವಹಿಸು ತ್ತಾ ಬಂದಿದೆ. ಮಂಗಳೂರು ವಿಶ್ವ ವಿದ್ಯಾನಿಲ ಯದ ಬೆಳವಣೆಗೆಯಲ್ಲಿ ಮಹತ್ವದ ಪಾತ್ರವಹಿಸಿದೆ.ಯುವ ಜನರಲ್ಲಿ ಕಲಿಕೆಯ ಬಗ್ಗೆ ಇರುವ ನಿರಾಸಕ್ತಿಯನ್ನು ದೂರ ಮಾಡಿ ಜಾಗೃತಿ ಮೂಡಿಸಬೇಕಾಗಿದೆ ಎಂದು ಪಿ.ಎಲ್.ಧರ್ಮ ತಿಳಿಸಿದ್ದಾರೆ.
ಮಾಧ್ಯಮ ಗಳು ಪದ ಬಳಕೆಯ ಬಗ್ಗೆ ಎಚ್ಚರಿಕೆ ವಹಿಸಬೇಕು.ಸಮಾಜದಲ್ಲಿನ ವಿಕೃತಿಗಳನ್ನು ಮೀರಿ ಮಾಧ್ಯಮಗಳು ಸಮಾಜದ ಉತ್ತಮ ಭವಿಷ್ಯ ವನ್ನು ರೂಪಿಸುವ ಶಕ್ತಿ ಯನ್ನು ಹೊಂದಿದೆ ಈ ನಿಟ್ಟಿನಲ್ಲಿ ಮಾಧ್ಯಮಗಳು ಗಮನಹರಿಸಲು ಮನವಿ ಮಾಡುವುದಾಗಿ ಪ್ರೊ.ಪಿ. ಎಲ್.ಧರ್ಮ ತಿಳಿಸಿದ್ದಾರೆ.
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಹಿರಿಯ ಪತ್ರಕರ್ತ ದಿವಂಗತ ಪದ್ಯಾಣ ಗೋಪಾಲಕೃಷ್ಣರ ಒಡನಾಟದ ಬಗ್ಗೆ ಮಾತನಾಡಿ ಪತ್ರಕರ್ತರು ವರ್ತಮಾನ ಕಾಲದಲ್ಲಿದ್ದು ಭೂತಕಾಲದ ಜ್ಞಾನದೊಂದಿಗೆ ಭವಿಷ್ಯದ ಚಿಂತನೆ ಹೊಂದಿರಬೇಕಾದ ಅಗತ್ಯವಿದೆ ಎಂದರು. ಪ.ಗೋ ಪ್ರಶಸ್ತಿ ವಿಜೇತ ವಾರ್ತಾಭಾರತಿ ಪತ್ರಿಕೆಯ ವಿಶೇಷ ವರದಿಗಾರ ಇಸ್ಮಾಯಿಲ್ ಕಂಡಕೆರೆ ಮಾತನಾಡುತ್ತಾ,ಪತ್ರಿಕೆ ಗಳು ಗ್ರಾಮೀಣ ಪ್ರದೇಶದ ಸಮಸ್ಯೆ ಗಳ ಬಗ್ಗೆ ಹೆಚ್ಚಿನ ಗಮನಹರಿಸಬೇಕಾದ ಅಗತ್ಯವಿದೆಎಂದವರು ವಿವರಿಸಿದರು.
ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆವಹಿಸಿದ್ದರು.
ಸಮಾರಂಭದಲ್ಲಿ ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ಪತ್ರಿಕಾ ಭವನ ಟ್ರಸ್ಟ್ ನ ಅಧ್ಯಕ್ಷ ರಾಮಕೃಷ್ಣ ಆರ್,ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ ಬಂಟ್ವಾಳ,ಪದ್ಯಾಣ ಗೋಪಾಲಕೃಷ್ಣರವರ ಪುತ್ರ ವಿಶ್ವೇಶ್ವರ ಭಟ್ ,ಮ್ಯಾಮ್ ನ ಗೌರವಾಧ್ಯಕ್ಷ ವೇಣು ಶರ್ಮ,ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ,ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್, ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಡಸ್ಥಳ,ಹಿರಿಯ ಪತ್ರಕರ್ತ ಹಿಲರಿ ಕ್ರಾಸ್ತ,ಹರ್ಷ ಮೊದಲಾದ ವರು ಉಪಸ್ಥಿತರಿದ್ದರು.ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯ ದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.ಪ್ರೆಸ್ ಕ್ಲಬ್ ಉಪಾಧ್ಯಕ್ಷ ಆರಿಫ್ ಪಡುಬಿದ್ರೆ ಕಾರ್ಯಕ್ರಮ ನಿರೂಪಿಸಿದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…