ಇತರೆ

ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿರಾಜ್ಯಮಟ್ಟದ ‘ಆಕೃತಿ’ ತಾಂತ್ರಿಕ, ಸಾಂಸ್ಕೃತಿಕ ಉತ್ಸವ 2024 ಉದ್ಘಾಟನೆ

ಮಂಗಳೂರು: ಶೈಕ್ಷಣಿಕ ಜೀವನದಲ್ಲಿನ ತಾಂತ್ರಿಕ ಸಾಂಸ್ಕೃತಿಕ ಉತ್ಸವಗಳು ಕಲಿಕೆಯಲ್ಲಿ ಯಶಸ್ಸಿನ ಜತೆಗೆ ಬದುಕಿನಲ್ಲಿ ಉತ್ಸಾಹ ತುಂಬುವ ಅವಕಾಶಗಳಾಗಿವೆ. ತರಗತಿಯ ಜ್ಞಾನದ ಜತೆಗೆ ಸ್ಫೂರ್ತಿ, ಸೃಜನಶೀಲತೆ, ನಾಯಕತ್ವ, ಪರಿಶ್ರಮ , ಬದ್ಧತೆಯೇ ಮೊದಲಾದ ಕೌಶಲಗಳ ಮೂಲಕ ವ್ಯಕ್ತಿತ್ವ ರೂಪಿಸುವ ಈ ಅವಕಾಶಗಳ ವೇದಿಕೆಯನ್ನು ಯುವಜನತೆ ಸಮರ್ಥವಾಗಿ ಬಳಸಿಕೊಂಡು ಬೆಳೆಯಬೇಕು ಎಂದು ಡೆಲಿವರಿ ಲಿ. ಸಂಸ್ಥೆಯ ಕಾರ್ಯಾಚರಣೆ ವಿಭಾಗದ ಮುಖ್ಯ ಕಾರ್ಯಾಚರಣಾಧಿಕಾರಿ ಅಜಿತ್ ಪೈ ಹೇಳಿದರು.

ಅವರು ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಗುರುವಾರ ಆರಂಭಗೊಂಡ ಮೂರು ದಿನಗಳ ರಾಜ್ಯಮಟ್ಟದ ‘ಆಕೃತಿ’ ತಾಂತ್ರಿಕ, ಸಾಂಸ್ಕೃತಿಕ ಉತ್ಸವವನ್ನು ದೀಪಪ್ರಜ್ವಲನದೊಂದಿಗೆ ಉದ್ಘಾಟಿಸಿ ಮಾತನಾಡಿದರು.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಶೈಕ್ಷಣಿಕ, ಬ್ಯಾಂಕಿಂಗ್ ಇನ್ನಿತರ ರಂಗಗಳಲ್ಲಿ ಮೇರು ಸಾಧನೆ ಮಾಡುವಲ್ಲಿ ಅಮ್ಮೆಂಬಳ ಸುಬ್ಬರಾವ್ ಪೈ, ಉಳ್ಳಾಲ ಶ್ರೀನಿವಾಸ ಮಲ್ಯ ,ಟಿ.ಎಂ.ಎ.ಪೈ ಹೀಗೆ ಅನೇಕ ಸಾಧಕರ ಕೊಡುಗೆಯಿದೆ. ಈ ಹಾದಿಯಲ್ಲಿ ಇನ್ನಷ್ಟು ಬೆಳೆಯುತ್ತಿರುವ ಕೆನರಾ ಶಿಕ್ಷಣ ಸಂಸ್ಥೆಗಳ ಪ್ರಗತಿಯ ಬಗ್ಗೆ ಹೆಮ್ಮೆ ಅನಿಸಿದೆ ಎಂದವರು ಶ್ಲಾಘಿಸಿದರು.
ಸಮಾರಂಭದ ಅಧ್ಯ
ಕ್ಷತೆ ವಹಿಸಿದ್ದ ಆಡಳಿತ ಮಂಡಳಿ ಕೆನರಾ ಹೈಸ್ಕೂಲ್ ಎಸೋಸಿಯೇಶನ್ ಅಧ್ಯಕ್ಷ ಡಿ. ವಾಸುದೇವ ಕಾಮತ್ ಶಿಕ್ಷಣದ ಜತೆಗೆ ಸೃಜನ ಶೀಲ ಚಿಂತನೆ, ವಿಮರ್ಶಾತ್ಮಕ ಮನೋಭಾವ ಬೆಳೆಸಿಕೊಳ್ಳುವಂತೆ ಕರೆ ನೀಡಿದರು.
ಕಾಲೇಜು ಸಂಚಾಲಕ, ಆಡಳಿತ ಮಂಡಳಿ ಕಾರ್ಯದರ್ಶಿ ಎಂ. ರಂಗನಾಥ ಭಟ್ ಮಾತನಾಡಿ ಕೆನರಾ ಶಿಕ್ಷಣ ಸಂಸ್ಥೆಗಳು ಮೌಲ್ಯಗಳ ಜತೆಗೆ ನಿರಂತರ ಪ್ರಗತಿ, ಸಾಧನೆಯ ಹಾದಿಯಲ್ಲಿ ಮುನ್ನಡೆಯುವ ಕಾರ್ಯ ಯೋಜನೆಯಲ್ಲಿ ಯಶಸ್ಸು ಕಾಣುತ್ತಿರುವುದರ ಹಿಂದೆ ಟೀಂ ವರ್ಕ್ ಕೊಡುಗೆಯಿದೆ ಎಂದರು.

ಪ್ರಾಂಶುಪಾಲ ಡಾ. ನಾಗೇಶ್ ಹೆಚ್.ಆರ್. ವಾರ್ಷಿಕ ವರದಿ ವಾಚಿಸಿದರು. ಉಪ ಪ್ರಾಂಶುಪಾಲ ಡಾ.ಡೇಮಿಯನ್ ಎ. ಡಿಮೆಲ್ಲೋ, ಅತಿಥಿಯನ್ನು ಪರಿಚಯಿಸಿ ಸ್ವಾಗತಿಸಿದರು. ಪ್ರತಿಭಾನ್ವಿತರು, ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಸಿದ್ಧಾರ್ಥ ಕಿಣಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿ ಕೌನ್ಸಿಲ್ ಅಧ್ಯಕ್ಷ ವಿಜಯರಾಜ್ ಪೈವಂದಿಸಿದರು. ವಿದ್ಯಾರ್ಥಿನಿ ಶ್ವೇತಾ ಬಾಳಿಗಾ ಕಾರ್ಯಕ್ರಮ ನಿರೂಪಿಸಿದರು.

ಆಡಳಿತ ಮಂಡಳಿಯ ಜತೆ ಕಾರ್ಯದರ್ಶಿ ಕೆ.ಸುರೇಶ್ ಕಾಮತ್, ಉಪ ಕೋಶಾಧಿಕಾರಿ ಎಂ. ಜಗನ್ನಾಥ ಕಾಮತ್, ಸದಸ್ಯ ಶಿವಾನಂದ ಶೆಣೈ, ಆಡಳಿತ ಕೌನ್ಸಿಲ್ ಸದಸ್ಯ ವಿನಾಯಕ್ ಕಾಮತ್, ಆಕೃತಿ ಉತ್ಸವದ ಪ್ರಧಾನ ಸಮನ್ವಯಕಾರ ನವೀನ್ ಎ.ಕಲಾಲ್, ವಿದ್ಯಾರ್ಥಿ ಕೌನ್ಸಿಲ್ ಅಧ್ಯಕ್ಷ ವಿಜಯರಾಜ್ ಪೈ, ಉಪಾಧ್ಯಕ್ಷೆ ಶಿವಾಲಿ, ಕಾರ್ಯದರ್ಶಿ ಮಹೇಶ್ ಪೈ, ಜತೆ ಕಾರ್ಯದರ್ಶಿ ಆದಿತ್ಯ ಭಕ್ತ, ಸಮನ್ವಯಕಾರರಾದ ವರ್ಷಿಣಿ, ನಾಗರಾಜ್, ರಕ್ಷಾ, ಆದರ್ಶ್, ಸಂಜನಾ ,ಮೇಘ ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…

1 day ago

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…

1 day ago

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…

2 days ago

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…

2 days ago

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…

2 days ago

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…

2 days ago