ಮುಲ್ಕಿ: ಗ್ರಾಮೀಣ ಪ್ರದೇಶದ ಅತಿಕಾರಿಬೆಟ್ಟು ವಿನ ಪಂಜಿನಡ್ಕ ಕೆಪಿಎಸ್‌ಕೆ ಸ್ಮಾರಕ ಅನುದಾನಿತ ಪ್ರೌಢಶಾಲೆಯು ಶಾಲಾ ಆಡಳಿತ ಮಂಡಳಿ, ಹಳೆ ವಿದ್ಯಾರ್ಥಿ ಸಂಘ ಮತ್ತು ಅಧ್ಯಾಪಕರ ತಂಡ ಅತ್ಯಂತ ಕ್ರೀಯಾಶೀಲವಾಗಿದ್ದು ಶಾಲೆಯಲ್ಲಿ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರವನ್ನು ಆಯೋಜಿಸಿ ಗ್ರಾಮೀಣ ಪ್ರದೇಶದಲ್ಲಿ ಒಂದು ಮಾದರಿ ಶಾಲೆಯಾಗಿ ಹೆಸರು ಗಳಿಸಿದೆ, ಸುಮಾರು ಐದು ದಿನಗಳ ಕಾಲ ನಡೆದ ಶಿಬಿರದಲ್ಲಿ ಶಾಲಾ ವಿದ್ಯಾರ್ಥಿಗಳಲ್ಲದೆ ಬೇರೆ ಶಾಲೆಯ ವಿದ್ಯಾರ್ಥಿಗಳ ಹಾಗೂ ಮುಂಬೈ ವಿದ್ಯಾರ್ಥಿಗಳು ಸೇರಿ 45 ವಿದ್ಯಾರ್ಥಿಗಳು ಬಾಗವಹಿಸಿದ್ದರು.
ಶಾಲೆಯಲ್ಲಿ ಮುಖ್ಯ ಕಲಾ ಶಿಕ್ಷಕರಾಗಿರುವ ವೆಂಕಿ ಫಲಿಮಾರ್ ರವರು ಶಿಬಿರದಲ್ಲಿ ಮುಖ್ಯವಾಗಿ ಮಕ್ಕಳಿಗೆ ಪೇಪರ್ ಕ್ರಾಪ್ಟ್, ಅವೆ ಮಣ್ಣಿನ ಕಲಾಕೃತಿ ರಚಿಸುವ ಬಗ್ಗೆ ಮಾಹಿತಿ ನೀಡಿದ್ದು ಬಳಿಕ ಸಂಪನ್ಮೂಲ ವ್ಯಕ್ತಿಗಳಿಂದ ವಿವಿಧ ಶ್ಲೋಕ, ಭಾರತೀಯ ಸಂಸ್ಕೃತಿ ಬಗ್ಗೆ ಮಕ್ಕಳಿಗೆ ತಿಳಿ ಹೇಳಲಾಗಿದೆ.
ಕಲಾಕೃತಿಗಳಲ್ಲಿ ಮುಖ್ಯವಾಗಿ ಹಳೆಯ ಬಾಟಲ್ ವಿವಿಧ ಬಣ್ಣಗಳಿಂದ, ಹೂವಿನ ಚಿತ್ರಗಳಿಂದ ಆಕರ್ಷಿಣೀಯವಾದರೆ, ಹಾಳಾದ ತೆಂಗಿನ ಕಾಯಿ ಮತ್ತು ಗೆರಟೆ ಒಂದು ಮನುಷ್ಯನನ್ನು ಹೋಲುವ ರೂಪ ಪಡೆದಿದೆ, ಹಳೆಯ ಪೇಪರ್ ಬುಲೆಟ್ ನ ಪ್ರತಿಕೃತಿ ಹೊಂದಿದರೆ, ಹಳೆಯ ರಟ್ಟು ರಕ್ಕಸನ ರೂಪ ಪಡೆದಿದೆ, ಸ್ಪಂಜ್ ವಿವಿಧ ಗೊಂಬೆಯ ರೂಪ ಪಡೆದು ಆಕರ್ಷಣೀಯ ಅಲ್ಲದೆ ಮಕ್ಕಳಿಗೆ ಶ್ಲೋಕ ಪಾಠ, ಪ್ರಾಣಯಾಮ ಮತ್ತಿತರ ವಿಷಯಗಳ ಬಗ್ಗೆ ತರಬೇತಿ ನೀಡಲಾಯಿತು.
ಸರಕಾರಿ ಶಾಲೆಗಳೂ ಮುಚ್ಚುತ್ತಾ ಬಂದರೂ ಈ ಅನುದಾನಿತ ಶಾಲೆಯನ್ನು ಶಾಲಾ ಆಡಳಿತ ಮಂಡಳಿ ಹಳೆ ವಿಧ್ಯಾರ್ಥಿ ಸಂಘ ಶಾಲಾ ಶಿಕ್ಷಕರ ಹಾಗೂ ದಾನಿಗಳ ಸಹಕಾರದಿಂದ ಬೇಕು ಬೇಕಾದ ಸವಲತ್ತುಗಳನ್ನು ಉಚಿತವಾಗಿ ನೀಡಿ ಮಾದರಿಯನ್ನಾಗಿ ರೂಪಿಸಿ, ವಿಧ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುವಂತೆ ನೋಡಿಕೊಳ್ಳುತ್ತಿದ್ದಾರೆ
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…