ಮೂಡುಬಿದಿರೆ: ರಾಸಾಯನಿಕ ಬಳಸಿದ ಹಣ್ಣುಗಳನ್ನು ವಾಹನಗಳಲ್ಲಿ ತಂದು ಮಾರಾಟ ಮಾಡುತ್ತಿದ್ದುದ್ದನ್ನು ಸಾರ್ವಜನಿಕರ ದೂರಿನ ಮೇರೆಗೆ ಸಂಬಂಧಪಟ್ಟ ಅಧಿಕಾರಿಗಳ ತಂಡವು ಶುಕ್ರವಾರ ಮೂಡುಬಿದಿರೆಯಲ್ಲಿ ತಪಾಸಣೆ ನಡೆಸಿ ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ ಘಟನೆ ನಡೆದಿದೆ.
ಕಳೆದ ಕೆಲವು ಸಮಯಗಳಿಂದ ವಿವಿಧ ಹಣ್ಣುಗಳ ಸೀಸನ್ ಸಮಯದಲ್ಲಿ ವಾಹನದಲ್ಲಿ ತಂದು ಮೂಡುಬಿದಿರೆ ಪೇಟೆಯ ರಸ್ತೆ ಬದಿಗಳಲ್ಲಿ ನಿಲ್ಲಿಸಿ ಹಾಗೂ ಮಾರ್ಕೆಟ್ ನಲ್ಲಿ ಮಾರಾಟ ಮಾಡುತ್ತಿದ್ದರು.
ರಾಸಾಯನಿಕ ಪೌಡರನ್ನು ಬಳಸಿ ಮಾವಿನ ಹಣ್ಣುಗಳನ್ನು ಉತ್ತಮ ಕಲರ್ ಬರುವಂತೆ ಮಾಡಿ ಗ್ರಾಹಕರನ್ನು ಕಣ್ಮನ ಸೆಳೆಯುವಂತೆ ಮಾಡಿ ವ್ಯಾಪಾರ ಕುದುರಿಸುತ್ತಿದ್ದ ವ್ಯಾಪಾರಿಗಳ ಬಗ್ಗೆ ಸಾರ್ವಜನಿಕರು ಪುರಸಭೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾ ಆಹಾರ ಅಧಿಕಾರಿ ಡಾ.ಪ್ರವೀಣ್, ಪುರಸಭಾ ಆರೋಗ್ಯ ನಿರೀಕ್ಷಕಿ
ಶಶಿರೇಖಾ ಮತ್ತು ಮೂಡುಬಿದಿರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕ ನಟರಾಜ್ ಅವರು ವಾರದ ಸಂತೆಯ ದಿನವಾಗಿರುವ ಶುಕ್ರವಾರದಂದೇ ತಪಾಸಣೆ ನಡೆಸಿದರು.
ಈ ಸಂದರ್ಭದಲ್ಲಿ ವಾಹನದಲ್ಲಿ ಮತ್ತು ಬಾಕ್ಸ್ ನಲ್ಲಿ ಮಾವಿನ ಹಣ್ಣುಗಳನ್ನಿಟ್ಟು ಮಾರಾಟ ಮಾಡುತ್ತಿದ್ದ ಹಣ್ಣುಗಳ ಮಧ್ಯೆ “ಇಥಿಲೀನ್ ರೈಪನರ್” ಎಂಬ ಹೆಸರಿನ ರಾಸಾಯನಿಕ ಫೌಡರನ್ನು ಒಳಗೊಂಡ ಪ್ಯಾಕೆಟನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ಈ ರಾಸಾಯನಿಕ ಪದಾರ್ಥವು ಎಲುಬಿನ ಕ್ಯಾನ್ಸರ್ ಗೆ ಕಾರಣವಾಗುತ್ತದೆ ಇದನ್ನು ನೀವು ಜನರಿಗೆ, ಪುಟ್ಟ ಮಕ್ಕಳಿಗೆ ಎಷ್ಟು ತಿನ್ನಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಈ ಬಗ್ಗೆ ತಮಗೇನು ಗೊತ್ತಿಲ್ಲ ನಾವು ವ್ಯಾಪಾರ ಮಾಡುವವರು ನಮ್ಮ ಮಕ್ಕಳಿಗೂ ನಾವು ಇದೇ ಹಣ್ಣನ್ನು ತಿನ್ನಲು ತೆಗೆದುಕೊಂಡು ಹೋಗುವುದು. ತಮಿಳುನಾಡಿನಿಂದ ಬರುವ ಈ ಹಣ್ಣುಗಳನ್ನು ನಾವು ಮಂಗಳೂರಿನಿಂದ ಖರೀದಿಸಿ ತರುತ್ತೇವೆ. ನಾವು ಇದನ್ನು ಮಾರಾಟ ಮಾಡದಿದ್ದರೆ ತಮಗೆ ನಷ್ಟ ಉಂಟಾಗುತ್ತದೆ ಎಂದು ತಿಳಿಸಿದರು.
ವಾಹನಗಳ ನಂಬರ್ ಮತ್ತು ವ್ಯಾಪರಿಗಳ ಮೊಬೈಲ್ ನಂಬರನ್ನು ಅಧಿಕಾರಿಗಳು ಪಡೆದುಕೊಂಡರು. ಆದರೆ ವ್ಯಾಪಾರಿಗಳು ಸಂಜೆವರೆಗೂ ಹಣ್ಣುಗಳನ್ನು ಮಾರಾಟ ಮಾಡಿದರು.
ರಾಸಾಯನಿಕ ಪದಾರ್ಥಗಳನ್ನು ಬಳಸಿದ ಹಣ್ಣುಗಳನ್ನು ಮಾರಾಟ ಮಾಡದಂತೆ ಮುಂದಿನ ದಿನಗಳಲ್ಲಿ ಅಧಿಕಾರಿಗಳು ಯಾವ ರೀತಿ ಕ್ರಮಕೈಗೊಳ್ಳುತ್ತಾರೆಂದು ಕಾದು ನೋಡಬೇಕಿದೆ
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…