ಮಂಗಳೂರು: 2023-24ನೇ ಸಾಲಿನ ಎಸೆಸೆಲ್ಸಿಯ ಫಲಿತಾಂಶಗಳು ಪ್ರಕಟಗೊಂಡಿದ್ದು, ಚಿಕ್ಕಮಗಳೂರು ಜಿಲ್ಲೆಯ ವಿದ್ಯಾರ್ಥಿನಿ ಫಾತಿಮತ್ ಸಮೀಹಾ ಸಂಸ್ಕೃತ ಭಾಷೆ ಆಯ್ಕೆ ಮಾಡಿಕೊಂಡು 590 ಅಂಕ ಗಳಿಸಿ, ಸಾಧನೆ ಮಾಡಿದ್ದಾರೆ.
ಚಿಕ್ಕಮಗಳೂರು ಬಸರಿಕಟ್ಟೆಯ ಶ್ರಿ ಸದ್ಗುರು ವಿದ್ಯಾಮಂದಿರದ ವಿದ್ಯಾರ್ಥಿನಿಯಾಗಿರುವ ಈಕೆ, ಪ್ರಥಮ ಭಾಷೆಯಾಗಿ ಸಂಸ್ಕೃತವನ್ನು ಆಯ್ಕೆ ಮಾಡಿಕೊಂಡಿದ್ದರು. ಇದರಲ್ಲಿ 125ಕ್ಕೆ 125 ಅಂಕ ಗಳಿಸುವ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ.
ಕನ್ನಡದಲ್ಲಿ 99, ಇಂಗ್ಲಿಷ್‌ನಲ್ಲಿ 94, ಗಣಿತದಲ್ಲಿ 83, ವಿಜ್ಞಾನದಲ್ಲಿ 69, ಸಮಾಜ ವಿಜ್ಞಾನದಲ್ಲಿ 100 ಅಂಕ ಗಳಿಸಿ, ಒಟ್ಟು 625 ಅಂಕಗಳಲ್ಲಿ 590 ಅಂಕದೊಂದಿಗೆ ಶೇ.94.4% ರಷ್ಟು ಫಲಿತಾಂಶ ಗಳಿಸಿದ್ದಾರೆ.
ಈಕೆ ಚಿಕ್ಕಮಗಳೂರಿನ ಮುಹಮ್ಮದ್ ರಫೀಕ್ ಮತ್ತು ಸೆಲೀಖತ್ ಬೇಗಂ ಪಾಣೆಮಂಗಳೂರು ದಂಪತಿಯ ಪುತ್ರಿ
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…