ಜನ ಮನದ ನಾಡಿ ಮಿಡಿತ

Advertisement

ಮೇ 11 ರಿಂದ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ – ಹವಾಮಾನ ಇಲಾಖೆ

ಮಂಗಳೂರು: ಕೊನೆಗೂ ರಾಜ್ಯದಲ್ಲಿ ಮಳೆ ಪ್ರಾರಂಭವಾಗುವ ಮುನ್ಸೂಚನೆ ಬಂದಿದ್ದು, ಮುಂಗಾರು ಪೂರ್ವದ ಮಳೆ ಇದೇ 11ರಿಂದ 14ರ ವರೆಗೆ ರಾಜ್ಯದ ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಬೀಳುವ ನಿರೀಕ್ಷೆ ಇದೆ.

ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ ಐದು ದಿನಗಳಲ್ಲಿ ಕರ್ನಾಟಕದ 23 ಜಿಲ್ಲೆಗಳಲ್ಲಿ ಚಂಡಮಾರುತ ಪ್ರಭಾವ ಬೀರುವ ನಿರೀಕ್ಷೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಹೇಳಿದೆ.

ಮೇ 11ರಂದು ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಮೇ 12ರಂದು ಬೀದರ್, ಕಲಬುರಗಿ, ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಮೇ 13ರಂದು ಬೀದರ್, ಕಲಬುರಗಿ, ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ರಾಮನಗರ, ಮೈಸೂರು, ಮಂಡ್ಯ ಹಾಗೂ ಮೇ 14ರಂದು ವಿಜಯಪುರ ಜಿಲ್ಲೆಗೆ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಭಾರಿ ಮಳೆಯ ಮುನ್ಸೂಚನೆ ನೀಡಿರುವ ಕೆಲವು ಸ್ಥಳಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ ಹಾಗೂ ಮತ್ತೆ ಕೆಲವು ಕಡೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.
ಹವಾಮಾನ ಇಲಾಖೆಯ ಮುನ್ಸೂಚನೆ ಜನತೆಯಲ್ಲಿ ಸದ್ಯ ಸೆಕೆ ದೂರವಾಗುವ ಸಮಯ ಬಂತಲ್ಲ ಎಂಬ ಸಮಾಧಾನ ಮೂಡಿಸಿದೆ. ನೀರಿನ ಕೊರತೆಯಿಂದ ಕೃಷಿ ನಾಶವಾಗುತ್ತಿರುವುದನ್ನು ಹತಾಶೆಯಿಂದ ನೋಡುತ್ತಿದ್ದ ರೈತರ ಮನದಲ್ಲಿ ಆಗಸದಲ್ಲಿ ಸಾಗುವ ಮೋಡಗಳು ಮಳೆ ಸುರಿಸುವ ಆಶಾವಾದವನ್ನು ಬಿತ್ತಿವೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!