ಮಂಗಳೂರು: ಕೊನೆಗೂ ರಾಜ್ಯದಲ್ಲಿ ಮಳೆ ಪ್ರಾರಂಭವಾಗುವ ಮುನ್ಸೂಚನೆ ಬಂದಿದ್ದು, ಮುಂಗಾರು ಪೂರ್ವದ ಮಳೆ ಇದೇ 11ರಿಂದ 14ರ ವರೆಗೆ ರಾಜ್ಯದ ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಬೀಳುವ ನಿರೀಕ್ಷೆ ಇದೆ.
ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ ಐದು ದಿನಗಳಲ್ಲಿ ಕರ್ನಾಟಕದ 23 ಜಿಲ್ಲೆಗಳಲ್ಲಿ ಚಂಡಮಾರುತ ಪ್ರಭಾವ ಬೀರುವ ನಿರೀಕ್ಷೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಹೇಳಿದೆ.
ಮೇ 11ರಂದು ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಮೇ 12ರಂದು ಬೀದರ್, ಕಲಬುರಗಿ, ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಮೇ 13ರಂದು ಬೀದರ್, ಕಲಬುರಗಿ, ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ರಾಮನಗರ, ಮೈಸೂರು, ಮಂಡ್ಯ ಹಾಗೂ ಮೇ 14ರಂದು ವಿಜಯಪುರ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಭಾರಿ ಮಳೆಯ ಮುನ್ಸೂಚನೆ ನೀಡಿರುವ ಕೆಲವು ಸ್ಥಳಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ ಹಾಗೂ ಮತ್ತೆ ಕೆಲವು ಕಡೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.
ಹವಾಮಾನ ಇಲಾಖೆಯ ಮುನ್ಸೂಚನೆ ಜನತೆಯಲ್ಲಿ ಸದ್ಯ ಸೆಕೆ ದೂರವಾಗುವ ಸಮಯ ಬಂತಲ್ಲ ಎಂಬ ಸಮಾಧಾನ ಮೂಡಿಸಿದೆ. ನೀರಿನ ಕೊರತೆಯಿಂದ ಕೃಷಿ ನಾಶವಾಗುತ್ತಿರುವುದನ್ನು ಹತಾಶೆಯಿಂದ ನೋಡುತ್ತಿದ್ದ ರೈತರ ಮನದಲ್ಲಿ ಆಗಸದಲ್ಲಿ ಸಾಗುವ ಮೋಡಗಳು ಮಳೆ ಸುರಿಸುವ ಆಶಾವಾದವನ್ನು ಬಿತ್ತಿವೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…