ಜನ ಮನದ ನಾಡಿ ಮಿಡಿತ

Advertisement

ಪುರಭವನದಲ್ಲಿ ಭರತನಾಟ್ಯ ಕಲಾವಿದೆ ಮಹತಿ ಪವನಸ್ಕರ್ ಇವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮ

ದಕ್ಷಿಣ ಕನ್ನಡ : ಭರತನಾಟ್ಯ ಕಲಾವಿದೆ ಮಹತಿ ಪವನಸ್ಕರ್ ಇವರ ಭರತನಾಟ್ಯ ರಂಗ ಪ್ರವೇಶ ಕಾರ್ಯಕ್ರಮ ದಿನಾಂಕ 12 ರಂದು ಮಂಗಳೂರು ನಗರದ ಪುರಭವನದಲ್ಲಿ ಸಂಜೆ 5:30ಕ್ಕೆ ಏರ್ಪಡಿಸಲಾಗಿದೆ.

ಆಮಂತ್ರಣ ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಗಾನ ನೃತ್ಯ ಅಕಾಡೆಮಿಯ ನಿರ್ದೇಶಕಿ ಶ್ರೀ ಗುರು ವಿದ್ಯಾ ರಾಧಾಕೃಷ್ಣ ಇವರ ಶಿಷ್ಯೆ ಕುಮಾರಿ ಮಹತೀಪನಸ್ಕರ್ ಶಾಲಾ ಕಲಿಕೆ ಜೊತೆ ಜೊತೆಗೆ ಕಳೆದ ಹಲವಾರು ವರ್ಷಗಳಿಂದ ನೃತ್ಯ ಭರತನಾಟ್ಯ ಕಲಿತು ಈಗಾಗಲೇ ಹಲವು ವೇದಿಕೆಗಳಲ್ಲಿ ಪ್ರದರ್ಶನ ನೀಡಿ ಜನ ಮೆಚ್ಚುಗೆ ಗಳಿಸಿದ್ದಾರೆ, ಶ್ರೀಮತಿ ಮಾಲಿನಿ ಹಾಗೂ ಹರೀಶ್ ಪವನಸ್ಕರ್ ಇವರ ಮಗಳು ಮಹತಿ ಪವನಸ್ಕರ್ ಪ್ರಸ್ತುತ ಮಂಗಳೂರಿನ ಮೌಂಟ್ ಕಾರ್ಮೆಲ್ ಶಾಲೆಯಲ್ಲಿ ಓದುತ್ತಿದ್ದು, ಹೆತ್ತವರ, ಪೋಷಕರ , ಹಾಗೂ ಶಾಲಾ ಶಿಕ್ಷಕರರಿಂದ ಸಿಕ್ಕ ಪ್ರೋತ್ಸಾಹ ಮತ್ತು ಭರತನಾಟ್ಯ ಗುರುಗಳಾದ ವಿದ್ಯಾಶ್ರೀ ರಾಧಾಕೃಷ್ಣ ಇವರ ಭರತನಾಟ್ಯ ಶಿಕ್ಷಣ ಹಾಗೂ ಮಾರ್ಗದರ್ಶನ ಮಹತಿ ಪವನಸ್ಕರ್ ಇವರ ಸಾಧನೆಗೆ ಸಹಕಾರಿಯಾಯಿತು.

ಭರತನಾಟ್ಯ ರಂಗ ಪ್ರವೇಶ ಕಾರ್ಯಕ್ರಮದ ಸಭಾ ಕಾರ್ಯಕ್ರಮದಲ್ಲಿ ಉಳ್ಳಾಲ ಮೋಹನ್ ಕುಮಾರ್, ಶ್ರೀ ಹರಿನಾರಾಯಣ ಅಸ್ರಣ್ಣ, ಕಶೆಕೋಡಿ ಸೂರ್ಯನಾರಾಯಣ ಭಟ್ ಭಾಗವಹಿಸಲಿದ್ದಾರೆ ಎಂದು ಕಾರ್ಯಕ್ರಮದ ಮೂಲಗಳಿಂದ ತಿಳಿದುಬಂದಿದೆ ಭರತನಾಟ್ಯ ರಂಗಪ್ರವೇಶ ಸಾಂಸ್ಕೃತಿಕ ಕಾರ್ಯಕ್ರಮದ ಹಿಮ್ಮೇಳದಲ್ಲಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕಲಾವಿದರು ಭಾಗವಹಿಸಲಿದ್ದು ವಿದ್ಯಾ ರಾಧಾಕೃಷ್ಣ, ಗೋಪಾಲಕೃಷ್ಣನ್ ಚೆನ್ನೈ, ಅನಂತರಾಮ್ ಚಿನೈ, ಕಾರ್ತಿಕೇಯನ್ ರಾಮನಾಥನ್ ಇನ್ನಿತರರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ ಸಹಕಾರ ನೀಡಲಿದ್ದು ಮಂಗಳೂರಿನ ನೃತ್ಯ ಗಾನ ಸಂಸ್ಥೆ ಏರ್ಪಡಿಸುವ ಈ ಕಾರ್ಯಕ್ರಮದಲ್ಲಿ, ಶ್ರೀಮತಿ ಸುಮಂಗಲ ರತ್ನಾಕರ್ ಇವರು ಸಭಾ ಕಾರ್ಯಕ್ರಮವನ್ನು ನಿರ್ವಹಿಸಲಿದ್ದಾರೆ ಎಂದು ಕಾರ್ಯಕ್ರಮ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!