ಬಿಸಿರೋಡಿನಿಂದ ಅಡ್ಡಹೊಳೆವರೆಗೆ ಚತುಷ್ಪತ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಪಾಣೆಮಂಗಳೂರು ಎಂಬಲ್ಲಿ ಪೇಟೆಗೆ ಜನರ ಸಂಚಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಅಂಡರ್ ಪಾಸ್ ನಿರ್ಮಾಣ ಮಾಡಲಾಗಿದೆ.
ಇದರ ಕಾಮಗಾರಿ ನಡೆಯುತ್ತಿದ್ದು ಅಂತಿಮ ಹಂತವನ್ನು ತಲುಪುವ ಮೊದಲೇ ಮೇಲ್ಸೇತುವೆಯಲ್ಲಿ ವಾಹನ ಸಂಚಾರಕ್ಕೆ ಮೇ.10 ರಾತ್ರಿಯಿಂದ ಅವಕಾಶ ನೀಡಲಾಗಿತ್ತು.
ಮಳೆ ಬರುವ ಮುನ್ನ ಹದಗೆಟ್ಟ ಸರ್ವೀಸ್ ರಸ್ತೆಯನ್ನು ದುರಸ್ತಿ ಮಾಡುವ ಅವಸರದಲ್ಲಿ ಇನ್ನೂ ಪೂರ್ತಿಯಾಗದಿರುವ ಮೇಲ್ಸೆತುವೆಯಲ್ಲಿ ವಾಹನ ಸಂಚಾರಕ್ಕೆ ತಾತ್ಕಾಲಿಕ ಅವಕಾಶ ನೀಡಲಾಗಿತ್ತು.
ಆದರೆ ಗುತ್ತಿಗೆ ವಹಿಸಿಕೊಂಡ ಕಂಪೆನಿಗೆ ಸರ್ವೀಸ್ ರಸ್ತೆಯ ಕಾಮಗಾರಿ ನಡೆಸುವುದು ಅನಿವಾರ್ಯವಾಗಿತ್ತು, ಇದು ನಿಜವಾದರೂ ಇನ್ನೂ ಮೇಲ್ಸೇತುವೆಯ ತಡೆಗೋಡೆ ಕಾಮಗಾರಿ ನಡೆಯದೆ ಇದ್ದುದರಿಂದ ವಾಹನ ಸಂಚಾರ ಮಾಡಿದರೆ ಅಪಾಯವಂತೂ ಕಟ್ಟಿಟ್ಟ ಬುತ್ತಿಯಾಗಿದೆ ಎಂದು ವರದಿ ಬಿತ್ತರಿಸಿದ್ದೇವು.
ಒಂದು ಚೂರು ಜವಬ್ದಾರಿ ಮರೆತು ಡ್ರೈವಿಂಗ್ ಮಾಡಿದರೂ ಆಳೆತ್ತರದ ಗುಂಡಿಗೆ ಬಿದ್ದು ಪ್ರಾಣ ಹಾನಿಯಾಗುವುದಂತು ಗ್ಯಾರಂಟಿ ಎಂದು ಸಾರ್ವಜನಿಕ ವಲಯದಲ್ಲಿ ಹೇಳಲಾಗುತ್ತಿತ್ತು.
ಈ ಬಗ್ಗೆ ಮಾಧ್ಯಮದಲ್ಲಿ ವರದಿ ಬಂದ ಕೂಡಲೇ ಮೇ.11 ರಂದು ಸಂಜೆ ವೇಳೆ ಮೇಲ್ಸೇತುವೆಯಲ್ಲಿ ಸಂಚಾರಕ್ಕೆ ತಡೆಮಾಡಿದ್ದಾರೆ.
ಇದೀಗ ಮತ್ತೆ ಸರ್ವೀಸ್ ರಸ್ತೆಯಲ್ಲಿಯೇ ವಾಹನಗಳು ಓಡಾಟ ನಡೆಸುವುತ್ತಿವೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…