ಕನ್ನಡದ ಹಲವು ಧಾರಾವಾಹಿಗಳಲ್ಲಿ ನಟಿಸಿರುವ ನಟಿ ಪವಿತ್ರಾ ಜಯರಾಂ ಭೀಕರ ರಸ್ತೆ ಅಪಘಾತದಲ್ಲಿ ಇಂದು (ಮೇ 11) ಸಾವನ್ನಪ್ಪಿದ್ದಾರೆ. ಮಂಡ್ಯದವರಾಗಿದ್ದ ಪವಿತ್ರಾ, ತೆಲುಗಿನ ತ್ರಿನಯನಿ ಧಾರಾವಾಹಿ ಮೂಲಕ ತೆಲುಗು ಪ್ರೇಕ್ಷಕರಿಗೂ ಹತ್ತಿರವಾಗಿದ್ದರು.
ಕರ್ನಾಟಕ ಮೂಲದ ನಟಿ ಪವಿತ್ರಾ ಜಯರಾಂ ಕಾರು ಅಪಘಾತದಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ ಸುಮಾರು 35 ವರ್ಷ ವಯಸ್ಸಾಗಿತ್ತು. ಕನ್ನಡದ ‘ರೋಬೋ ಫ್ಯಾಮಿಲಿ’ ಹಾಸ್ಯ ಧಾರಾವಾಹಿ ಮೂಲಕ ನಟನೆಗೆ ಎಂಟ್ರಿ ಕೊಟ್ಟಿದ್ದ ಪವಿತ್ರಾ ಜಯರಾಂ ಅದಾದ ಬಳಿಕ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದರು. ತೆಲುಗಿನ ಜನಪ್ರಿಯ ಧಾರಾವಾಹಿಯಲ್ಲಿಯೂ ಸಹ ಪವಿತ್ರಾ ನಟಿಸುತ್ತಿದ್ದರು. ಪವಿತ್ರಾ ಜಯರಂ ಕನ್ನಡ ಪ್ರೇಕ್ಷಕರಿಗೆ ಮಾತ್ರವಲ್ಲದೆ ತೆಲುಗು ಪ್ರೇಕ್ಷಕರಿಗೂ ಸಹ ಬಹಳ ಹತ್ತಿರವಾಗಿದ್ದರು.
ನಟಿ ಪವಿತ್ರಾ ಅವರು ಪ್ರಯಾಣಿಸುತ್ತಿದ್ದ ಕಾರು ಇಂದು ಬೆಳಿಗ್ಗೆ ಆಂಧ್ರ ಪ್ರದೇಶದ ಕರ್ನೂಲಿನ ಬಳಿ ಅಪಘಾತಕ್ಕೆ ಈಡಾಗಿದೆ. ಭೀಕರ ಅಪಘಾತದಲ್ಲಿ ನಟಿ ಪವಿತ್ರಾ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಪವಿತ್ರಾ ಜಯರಾಂ ಜೊತೆಗೆ ಕಾರಿನಲ್ಲಿ ಅವರ ಕುಟುಂಬಕ್ಕೆ ಸಂಬಂಧಿಸಿದವರು ಇದ್ದರು ಎನ್ನಲಾಗುತ್ತಿದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ಹೊರಬರಬೇಕಿದೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…