
ತೀವ್ರ ಅರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ(72) ಅವರು ನಿಧನರಾಗಿದ್ದಾರೆ.
ಸುಶೀಲ್ ಮೋದಿ ಅವರು ಕಳೆದ ಆರು ತಿಂಗಳಿನಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಬಿಜೆಪಿಯ ಹಿರಿಯ ನಾಯಕ ಸುಶೀಲ್ ಮೋದಿ ಅವರ ಸಾವಿನ ಸುದ್ದಿಯನ್ನು ಬಿಹಾರದ ಈಗಿನ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ. “ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಮಾಜಿ ರಾಜ್ಯಸಭಾ ಸಂಸದ ಸುಶೀಲ್ ಕುಮಾರ್ ಮೋದಿ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ, ಇದು ಬಿಹಾರ ಬಿಜೆಪಿಗೆ ತುಂಬಲಾರದ ನಷ್ಟ” ಎಂದು ಬರೆದುಕೊಂಡಿದ್ದಾರೆ.
बिहार के पूर्व उप मुख्यमंत्री व पूर्व राज्यसभा सांसद श्री सुशील कुमार मोदी जी के निधन पर उन्हें भावभीनी श्रद्धांजलि।
— Samrat Choudhary (Modi Ka Parivar) (@samrat4bjp) May 13, 2024
यह बिहार भाजपा के लिए अपूरणीय क्षति है।
ॐ शांति शांति pic.twitter.com/IEyMeH2Htt



