ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಜೋಡುಮಾರ್ಗ ಸರ್ಕಲ್ ನಲ್ಲಿ ಘಟನೆ
ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಗೆ ಪಶು ವೈದ್ಯಾಧಿಕಾರಿಂದ ಹಲ್ಲೆ ನಡೆದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಜೋಡುಮಾರ್ಗ ಸರ್ಕಲ್‌ನಲ್ಲಿ ನಡೆದಿದೆ. ಹಲ್ಲೆಗೊಳಗಾದ ಕೊಕ್ಕಡ ನಿವಾಸಿ 58 ಪ್ರಾಯದ ಕೃಷ್ಣ ಯಾನೆ ಕಿಟ್ಟ ಅವರು ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಪರೀತ ಜ್ವರ ಇದ್ದ ಕಾರಣ ಪುತ್ತೂರಿನ ಆಸ್ಪತ್ರೆಗೆ ದಾಖಲಾಗಿದ್ದ ಕೃಷ್ಣ ಅವರು, ಚೇತರಿಕೆ ಕಂಡ ಬಳಿಕ ಕೊಕ್ಕಡಕ್ಕೆ ವಾಪಾಸ್ಸಾಗಿದ್ರು. ಮೃತ ಕೃಷ್ಣ ಅವರ ಆಪ್ತರಾಗಿದ್ದ ಪಶುವೈದ್ಯಾಧಿಕಾರಿ ಕುಮಾರ್ ಅವರು, ಕೃಷ್ಣರವರ ಮನೆಗೆ ಹೋಗಿ, ಇಷ್ಟು ಬೇಗ ಯಾಕೆ ಡಿಸ್ಚಾರ್ಜ್ ಆಗಿ ಬಂದೆ ಎಂದು ಒಂದು ಏಟನ್ನು ಕೊಟ್ಟಿದ್ದಾರೆ. ಹೊಡೆದ ರಭಸಕ್ಕೆ ಸ್ಥಳದಲ್ಲೇ ಕೃಷ್ಣ ಸಾವನ್ನಪ್ಪಿದ್ದು, ಆರೋಪಿ ಪಶುವೈದ್ಯ ಕುಮಾರ್‌ನನ್ನು ಧರ್ಮಸ್ಥಳ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…