ಇತರೆ

ಮತಗಟ್ಟೆಗಳಲ್ಲಿ ಮಾಧ್ಯಮದವರಿಗೆ ಆಗಿರುವ ತೊಂದರೆ ಬಗ್ಗೆ ಎಸ್ಪಿಗೆ ಮನವಿ

ಉಡುಪಿ: ಈ ಬಾರಿಯ ಲೋಕಸಭಾ ಚುನಾವಣೆಯ ಮತದಾನ ಸಂದರ್ಭ ಮತಗಟ್ಟೆಗಳಲ್ಲಿ ಮಾಧ್ಯಮದವರಿಗೆ ಆಗಿರುವ ತೊಂದರೆ ಕುರಿತು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ. ಅವರಿಗೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಮಂಗಳವಾರ ಮನವಿ ಸಲ್ಲಿಸಲಾಯಿತು.

ಎ.26ರಂದು ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಮತ್ತು ಮೇ 7ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ನಡೆದಿದ್ದು, ಈ ಸಂದರ್ಭ ಮತಗಟ್ಟೆಗೆ ತೆರಳಿ ವಿಡಿಯೋ ಚಿತ್ರೀಕರಣ ಹಾಗೂ ಫೋಟೋಗ್ರಫಿ ಮಾಡಲು ಮಾಧ್ಯಮದವರಿಗೆ ಚುನಾವಣಾ ಆಯೋಗ ಪಾಸ್ ನೀಡಿದೆ. ಅದರಂತೆ ಸೀಮಿತ ಮತಗಟ್ಟೆಗಳಲ್ಲಿ ಸೆಲೆಬ್ರೆಟಿಗಳು ಮತದಾನ ಮಾಡುವ ಸಂದರ್ಭ ಕ್ಯಾಮೆರಾಮೆನ್‌ಗಳು ಹಾಗೂ ಫೋಟೋಗ್ರಫರ್‌ಗಳು ಚಿತ್ರೀಕರಣ/ಫೋಟೋ ತೆಗೆಯಲು ಮುಂದಾಗಿದ್ದು, ಈ ವೇಳೆ ಮತಗಟ್ಟೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಅಧಿಕಾರಿಗಳು ಮಾಧ್ಯಮದವರು ಚಿತ್ರೀಕರಣ ಮಾಡಲು ಅಡ್ಡಿ ಪಡಿಸಿದ್ದಾರೆ. ಇದರಿಂದ ನಮ್ಮ ಕರ್ತವ್ಯಕ್ಕೆ ತೊಂದರೆಯಾಗಿದೆ ಎಂದು ಮನವಿಯಲ್ಲಿ ದೂರಲಾಗಿದೆ.

ಚುನಾವಣಾ ಆಯೋಗ ನೀಡಿದ ಪಾಸ್‌ನಲ್ಲಿ ಮತಗಟ್ಟೆ ಹೊರಗಡೆ ವಿಡಿಯೋ ಚಿತ್ರೀಕರಣ ಮಾಡಲು ಅವಕಾಶ ಕಲ್ಪಿಸಿದರೂ ಕೆಲವು ಪೊಲೀಸ್ ಅಧಿಕಾರಿಗಳು ನಮಗೆ ಅವಕಾಶ ಮಾಡಿದಕೊಡದಿರುವುದು ಸರಿಯಲ್ಲ. ಅದೇ ರೀತಿ ಇತರೆ ಮತಗಟ್ಟೆಗಳಲ್ಲಿಯೂ ಗ್ರಾಮೀಣ ಪ್ರದೇಶಗಳ ಪತ್ರಕರ್ತರಿಗೆ ಸರತಿ ಸಾಲಿನಲ್ಲಿ ನಿಂತ ಮತದಾರರ ಫೋಟೋ ತೆಗೆಯಲು ಕೂಡ ಅಧಿಕಾರಿಗಳು ಅವಕಾಶ ನೀಡಲಿಲ್ಲ. ತಾವು ಈ ಬಗ್ಗೆ ಪರಿಶೀಲಿಸಿ ಮುಂದೆ ಈ ರೀತಿ ಸಮಸ್ಯೆ ಯಾಗದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಅಲ್ಲದೆ ಜೂ.4ರಂದು ನಡೆಯುವ ಮತ ಎಣಿಕೆಗೆ ಸಂಬಂಧಿಸಿ ಮತ ಎಣಿಕೆ ಕೇಂದ್ರದಲ್ಲಿ ಯಾವುದೇ ಗೊಂದಲ ಆಗದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಇದಕ್ಕೆ ಸ್ಪಂದಿಸಿದ ಎಸ್ಪಿ ಡಾ.ಕೆ.ಅರುಣ್, ಈ ವಿಚಾರವನ್ನು ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ನೀಡುವ ಸಂದರ್ಭದಲ್ಲಿ ಮಾಹಿತಿ ನೀಡಬೇಕಾಗಿದ್ದು, ಮುಂದೆ ಈ ರೀತಿಯಾಗದಂತೆ ಅಧಿಕಾರಿಗಳಿಗೆ ತರಬೇತಿ ನೀಡಲಾಗುವುದು ಮತ್ತು ಮತ ಎಣಿಕೆ ಸಂದರ್ಭದಲ್ಲಿ ಯಾವುದೇ ಸಮಸ್ಯೆ ಆಗದಂತೆ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ನಿಯೋಗದಲ್ಲಿ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಕಾರ್ಯದರ್ಶಿಗಳಾದ ರಹೀಂ ಉಜಿರೆ, ಪ್ರಮೋದ್ ಸುವರ್ಣ, ಮಾಜಿ ಅಧ್ಯಕ್ಷ ಜಯಕರ ಸುವರ್ಣ, ಕಮಿಟಿ ಸದಸ್ಯರಾದ ಮೈಕಲ್ ರೋಡ್ರಿಗಸ್, ಹರೀಶ್ ಕುಂದರ್, ಪತ್ರಿಕಾ ಭವನ ಸಮಿತಿಯ ಸಂಚಾಲಕ ಅಜಿತ್ ಆರಾಡಿ, ಪತ್ರಕರ್ತರಾದ ಶಶಿಧರ್ ಮಾಸ್ತಿಬೈಲು, ದೀಪಕ್ ಜೈನ್, ಪುಂಡಲೀಕ ಮರಾಠೆ, ಹರೀಶ್ ಪಾಲೇಚಾರ್, ಚೇತನ್ ಮಟಪಾಡಿ, ಪರೀಕ್ಷಿತ್ ಶೇಟ್, ಜಸ್ಟಿನ್ ಡಿಸಿಲ್ವ, ರಕ್ಷಿತ್ ಬೆಳಪು, ನಾಗರಾಜ್ ರಾವ್, ಅವಿನ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…

6 days ago

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…

6 days ago

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…

6 days ago

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…

6 days ago

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…

6 days ago

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…

6 days ago